ಭೂ ವಿಜ್ಞಾನಿ ಡಾ. ದಿನಕರ ಶೆಟ್ಟಿ ಜೊತೆ ಸಂವಾದ

KannadaprabhaNewsNetwork |  
Published : Jun 28, 2026, 03:45 AM IST
26ಜಲ | Kannada Prabha

ಸಾರಾಂಶ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದಲ್ಲಿ ತಿಂಗಳ ಅಂಗಳ ಸಂವಾದ ಕಾರ್ಯಕ್ರಮ ಹಾಗೂ ಸನ್ಮತಿ ಪತ್ರಿಕೆಯ ಮೇ ತಿಂಗಳ ಸಂಚಿಕೆ ಬಿಡುಗಡೆ ಕಾರ್ಯಕ್ರಮ ಶುಕ್ರವಾರ ಉಡುಪಿ ಪತ್ರಿಕಾ ಭವನದಲ್ಲಿ ಜರುಗಿತು.

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದಲ್ಲಿ ತಿಂಗಳ ಅಂಗಳ ಸಂವಾದ ಕಾರ್ಯಕ್ರಮ ಹಾಗೂ ಸನ್ಮತಿ ಪತ್ರಿಕೆಯ ಮೇ ತಿಂಗಳ ಸಂಚಿಕೆ ಬಿಡುಗಡೆ ಕಾರ್ಯಕ್ರಮ ಶುಕ್ರವಾರ ಉಡುಪಿ ಪತ್ರಿಕಾ ಭವನದಲ್ಲಿ ಜರುಗಿತು.

ಪತ್ರಿಕೆಯನ್ನು ಉಡುಪಿ ಅಂತರ್ಜಲ ನಿರ್ದೇಶನಾಲಯದ ಹಿರಿಯ ಭೂ ವಿಜ್ಞಾನಿ ಡಾ. ದಿನಕರ ಶೆಟ್ಟಿ ಬಿಡುಗಡೆ ಮಾಡಿ ಮಾತನಾಡಿ, ಪತ್ರಕರ್ತರು ಪತ್ರಿಕಾ ಭವನದ ಆವರಣದಲ್ಲಿ ಸಸಿಗಳನ್ನು ನೆಡುವ ಮೂಲಕ ಅಂತರ್ಜಲ ಮರು ಪೂರಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ. ಅದೇ ರೀತಿ ಸನ್ಮತಿ ಪತ್ರಿಕೆ ಮೂಲಕ ಪತ್ರಕರ್ತರ ಚಟುವಟಿಕೆಗಳನ್ನು ಪ್ರತಿಯೊಬ್ಬರಿಗೆ ತಿಳಿಸುವ ಕಾರ್ಯ ಮಾಡುತಿದ್ದಾರೆ. ಪತ್ರಕರ್ತರು ಓದಿಗೆ ಒತ್ತು ನೀಡಿ ತಮ್ಮ ಜ್ಞಾನವನ್ನು ಸಂಪಾದಿಸಿಕೊಳ್ಳಬೇಕು. ಅದೇ ರೀತಿ ಪರಿಸರಕ್ಕೆ ಇನ್ನು ಹೆಚ್ಚಿನ ಕೊಡುಗೆ ನೀಡ ಬೇಕು ಎಂದರು. ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ ವಹಿಸಿದ್ದರು. ಉಡುಪಿ ಪತ್ರಿಕಾ ಭವನ ಸಮಿತಿ ಸಂಚಾಲಕ ಅಂಕಿತ್ ಶೆಟ್ಟಿ ಉಪಸ್ಥಿತರಿದ್ದರು. ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿದರು. ಕಾರ್ಯದರ್ಶಿ ಉಮೇಶ್ ಮಾರ್ಪಳ್ಳಿ ವಂದಿಸಿದರು. ಪತ್ರಕರ್ತ ರಹೀಂ ಉಜಿರೆ ಕಾರ್ಯಕ್ರಮ ನಿರೂಪಿಸಿದರು. ಇದೇ ಸಂದರ್ಭದಲ್ಲಿ ಪತ್ರಿಕಾ ಭವನದ ಆವರಣದಲ್ಲಿ ಡಾ. ದಿನಕರ ಶೆಟ್ಟಿ ಗಿಡವೊಂದನ್ನು ನೆಟ್ಟರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯುವ ಜನತೆಯಲ್ಲಿ ಯೋಗದ ಬಗ್ಗೆ ರೆಡ್‌ಕ್ರಾಸ್‌ ಅರಿವು: ಸಿಎ ಶಾಂತಾರಾಮ ಶೆಟ್ಟಿ
ಸ್ತ್ರೀ ಪರಿಪೂರ್ಣತೆಯ ಸಂಕೇತ: ಡಾ. ಮೋಹನ್ ಆಳ್ವ