ಕಾಂಗ್ರೆಸ್ ಸರ್ಕಾರ ಕರಾವಳಿಗೆ ನೀಡಿದ ಕೊಡುಗೆಗಳನ್ನು ಜನರಿಗೆ ಮನವರಿಕೆ ಮಾಡಿ: ಜೆ.ಪಿ. ಹೆಗ್ಡೆ

KannadaprabhaNewsNetwork |  
Published : Mar 26, 2024, 01:00 AM IST
ಜೆಪಿಹೆಗ್ಡೆ25 | Kannada Prabha

ಸಾರಾಂಶ

ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಮುಂಚೂಣಿ ಘಟಕಗಳ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಜಯಪ್ರಕಾಶ್‌ ಹೆಗ್ಡೆ, ವೈಷ್ಯಮ್ಯ, ಆಡಂಬರ, ಭ್ರಷ್ಟಾಚಾರಗಳನ್ನು ವರ್ಜಿಸಿ ಅವರವರ ಕೆಲಸಗಳನ್ನು ನಿಯತ್ತಿನಿಂದ ಮಾಡಿದಾಗ ದೇಶದಲ್ಲಿ ರಾಮ ರಾಜ್ಯದ ಕನಸು ನನಸಾಗುವುದರಲ್ಲಿ ಸಂಶಯ ಇಲ್ಲ ಎಂದು ತಿಳಿಸಿದರು.

ಕನ್ನಡಪ್ರಭ ವಾರ್ತೆ ಉಡುಪಿಮುಂಬರುವ ಲೋಕಸಭೆ ಚುನಾವಣೆ ಕಾರ್ಯತಂತ್ರಗಳ ಬಗ್ಗೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಮುಂಚೂಣಿ ಘಟಕಗಳ ಸಭೆ ಸೋಮವಾರ ಜರುಗಿತು.ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಮಾತನಾಡಿ, ಎಲ್ಲ ಮುಂಚೂಣಿ ಘಟಕಗಳ ಪದಾಧಿಕಾರಿಗಳು ಪಕ್ಷ ನೀಡಿರುವ ಜವಾಬ್ದಾರಿಯನ್ನು ನಿಭಾಯಿಸಿ ಪಕ್ಷದ ಅಭ್ಯರ್ಥಿಯನ್ನು ಅತಿ ಹೆಚ್ಚಿನ ಮತಗಳಿಂದ ಗೆಲ್ಲಿಸುವ ಪ್ರಯತ್ನ ಮಾಡಬೇಕು. ವಿವಿಧ ಘಟಕಗಳ ಪದಾಧಿಕಾರಿಗಳು ಅವರವರ ಕ್ಷೇತ್ರಗಳಲ್ಲಿ ಪಕ್ಷಕ್ಕೆ ಹೆಚ್ಚಿನ ಮತ ಬರುವಂತೆ ಕಾರ್ಯನಿರ್ವಹಿಸಬೇಕು ಎಂದರು.ವೈಷ್ಯಮ್ಯ, ಆಡಂಬರ, ಭ್ರಷ್ಟಾಚಾರಗಳನ್ನು ವರ್ಜಿಸಿ ಅವರವರ ಕೆಲಸಗಳನ್ನು ನಿಯತ್ತಿನಿಂದ ಮಾಡಿದಾಗ ದೇಶದಲ್ಲಿ ರಾಮ ರಾಜ್ಯದ ಕನಸು ನನಸಾಗುವುದರಲ್ಲಿ ಸಂಶಯ ಇಲ್ಲ ಎಂದ ಅವರು, ಜಯಪ್ರಕಾಶ್ ಹೆಗ್ಡೆ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಉಡುಪಿಯನ್ನು ಜಿಲ್ಲೆಯಾಗಿ ರಚನೆ ಮಾಡುವುದರೊಂದಿಗೆ ಉಡುಪಿಯ ಸಮಗ್ರ ಅಭಿವೃದ್ಧಿಗೆ ಕಾರಣೀಭೂತರಾಗಿದ್ದಾರೆ ಎಂದರು.ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಮಾತನಾಡಿ, ಸಿದ್ದರಾಮಯ್ಯ ಅವರ ಅಧಿಕಾರದ ಅವಧಿಯಲ್ಲಿ ಕರಾವಳಿ ಪ್ರದೇಶಕ್ಕೆ ನೀಡಿರುವ ಕೊಡುಗೆಗಳನ್ನು ಜನರಿಗೆ ಮನವರಿಕೆ ಮಾಡಬೇಕು. ಪಕ್ಷದಲ್ಲಿ ಸಕ್ರಿಯರಲ್ಲದವರನ್ನು ಗುರುತಿಸಿ ಅವರನ್ನು ಕ್ರಿಯಾಶೀಲರನ್ನಾಗಿ ಮಾಡಲು ಮುಖಂಡರು ಮುತುವರ್ಜಿ ವಹಿಸಬೇಕು ಎಂದರು.ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ ಮಹಿಳೆಯರ ಸ್ವಾವಲಂಬನೆಗೆ ಉತ್ತೇಜನ ನೀಡುತ್ತಿದೆ. ಉದ್ಯೋಗ ಸಮಸ್ಯೆ ಉಲ್ಬಣವಾಗುತ್ತಿರುವುದರಿಂದ ಪದವೀಧರರಿಗೆ ಸರ್ಕಾರ ನೀಡುತ್ತಿರುವ ಯುವನಿಧಿ ಬಹಳ ಉಪಕಾರಿಯಾಗಿದೆ. ಸರ್ಕಾರದ ಈ ಯೋಜನೆಗಳನ್ನು ಮತದಾರರಿಗೆ ಮುಟ್ಟುವಂತೆ ಕಾರ್ಯಕರ್ತರು ಕೆಲಸ ಮಾಡಬೇಕು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಮುಖಂಡರಾದ ಎಂ.ಎ. ಗಪೂರ್, ಭಾಸ್ಕರ್ ರಾವ್ ಕಿದಿಯೂರು, ಮುರಳಿ ಶೆಟ್ಟಿ ಹಾಗೂ ವಿವಿಧ ಘಟಕಗಳ ಅಧ್ಯಕ್ಷರಾದ ಹರೀಶ್ ಕಿಣಿ, ಅಣ್ಣಯ್ಯ ಸೇರಿಗಾರ್, ಗೀತಾ ವಾಗ್ಳೆ, ಶಶಿಧರ್ ಶೆಟ್ಟಿ ಎಲ್ಲೂರು, ಸೌರಭ್ ಬಲ್ಲಾಳ್, ದೀಪಕ್ ಕೋಟ್ಯಾನ್, ವಿಶ್ವಾಸ್ ಅಮೀನ್, ಹರೀಶ್ ಶೆಟ್ಟಿ ಪಾಂಗಾಳ, ವೈ.ಬಿ. ರಾಘವೆಂದ್ರ, ಇಸ್ಮಾಯಿಲ್ ಆತ್ರಾಡಿ ಉಪಸ್ಥಿತರಿದ್ದರು. ಜಿಲ್ಲಾ ಪ್ರ. ಕಾರ್ಯದರ್ಶಿ ಬಿ. ನರಸಿಂಹಮೂರ್ತಿ ಸ್ವಾಗತಿಸಿ, ವಂದಿಸಿದರು.

PREV

Recommended Stories

ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಕಡಿಮೆ ಗುಣದ ಔಷಧಿ ಎರಡೇ ದಿನಕ್ಕೇ ಮಾರುಕಟ್ಟೆಯಿಂದ ವಾಪಸ್‌: ಸಚಿವ