ಕನ್ನಡಪ್ರಭ ವಾರ್ತೆ ಬೆಂಗಳೂರು
ಬಳಿಕ ಮಾತನಾಡಿದ ಅವರು, ಪ್ರಕೃತಿ ಮಾನವನ ಬಹುದೊಡ್ಡ ಶಕ್ತಿ. ವಿದ್ಯಾರ್ಥಿಗಳು ಓದಿನ ಜೊತೆಗೆ ಪರಿಸರದ ಕಾಳಜಿಯನ್ನು ಬದುಕಾಗಿಸಿಕೊಳ್ಳಬೇಕು. ಆ ಮೂಲಕ ತಮ್ಮ ಕಲಿಕೆಯ ಮೌಲ್ಯವನ್ನು ಸಮಾಜದ ಉನ್ನತಿಗೆ ಬಳಸಿಕೊಳ್ಳಬೇಕು ಎಂದರು.
ಸಿಎಂಆರ್ ಸಮೂಹ ಶಿಕ್ಷಣ ಸಂಸ್ಥೆಗಳು ಮತ್ತು ಸಿಎಂಆರ್ ವಿಶ್ವವಿದ್ಯಾಲಯ ಅಧ್ಯಕ್ಷ, ರಾಜ್ಯಸಭಾ ಮಾಜಿ ಸದಸ್ಯ ಡಾ। ಕೆ.ಸಿ.ರಾಮಮೂರ್ತಿ ಮಾತನಾಡಿ, ವಿದ್ಯಾರ್ಥಿಗಳು ಪದವಿ ಹಂತದಲ್ಲಿ ಕಲಿತ ಮೌಲ್ಯವನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗ ಮಾತ್ರ ಅವರ ಶಿಕ್ಷಣಕ್ಕೆ ಮಹತ್ವ ಬರುತ್ತದೆ ಹಾಗೂ ಸಮಾಜಕ್ಕೆ ಸಂಪನ್ಮೂಲ ವ್ಯಕ್ತಿಗಳಾಗುತ್ತಾರೆ ಎಂದರು.2022-23ನೇ ಸಾಲಿನಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದ 1500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿದ್ದ ಕುಲಾಧಿಪತಿ ಡಾ.ಸಬಿತಾ ರಾಮಮೂರ್ತಿ ಪದವಿ ಪ್ರಮಾಣ ಪತ್ರ ಪ್ರದಾನ ಮಾಡಿದರು.
ಇಸ್ರೋ ಮಾಜಿ ಅಧ್ಯಕ್ಷ ಪ್ರೊ.ಆರ್.ಎಂ.ವಾಸಗಂ, ಸಿಎಂಆರ್ ಆಡಳಿತ ಮಂಡಳಿ ಸದಸ್ಯ ಡಾ। ಎಚ್.ಎ.ರಂಗನಾಥ್, ಡಾ। ಜಿ.ಪಾರ್ಥಸಾರಥಿ, ಡಾ। ಆರ್.ಮೋಹನ್ ದಾಸ್, ಸಿಎಂಆರ್ ವಿಶ್ವವಿದ್ಯಾಲಯದ ಚಾನ್ಸಲರ್ ಜಯದೀಪ್ ಕೆ.ಆರ್.ರೆಡ್ಡಿ, ಜ್ಞಾನಧಾರ ಟ್ರಸ್ಟ್ ಕಾರ್ಯದರ್ಶಿ ಕೆ.ಸಿ.ಜಗನ್ನಾಥ ರೆಡ್ಡಿ ಪಾಲ್ಗೊಂಡಿದ್ದರು.