ಕನ್ನಡ ಪ್ರಭ ವಾರ್ತೆ ಮಡಿಕೇರಿ
ಮಾದ್ರೆ ಗ್ರಾಮದ ಸ್ಮಶಾನ ಜಾಗದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾನವ ಬಂಧುತ್ವ ವೇದಿಕೆಯ ಜಿಲ್ಲಾ ಸಂಚಾಲಕ ಜೆ.ಎಲ್.ಜನಾರ್ದನ್, ಮಾನವ ಬಂಧುತ್ವ ವೇದಿಕೆಯು ಕರ್ನಾಟಕದಲ್ಲಿ ವೈಚಾರಿಕ ಕ್ರಾಂತಿಯನ್ನು ಎಲ್ಲರಲ್ಲಿ ಮೂಡಿಸುತ್ತಿದೆ ಎಂದರು.
ಅಜ್ಞಾನದಿಂದ ವಿಜ್ಞಾನದ ಕಡೆಗೆ ಹಾಗೂ ಮೂಢನಂಬಿಕೆ, ಕಂದಾಚಾರಗಳನ್ನು ಹೋಗಲಾಡಿಸುವ ಸಲುವಾಗಿ ರಾಜ್ಯಾದ್ಯಂತ ಕಾರ್ಯಕ್ರಮ ನಡೆಯುತ್ತಿದೆ. ಜನಪ್ರತಿನಿಧಿ ಸತೀಶ್ ಜಾರಕಿಹೊಳಿ ಅವರು ಹಲವು ಕಾರ್ಯಕ್ರಮಗಳನ್ನು ಆಯೋಜಿಸಿ ವೈಚಾರಿಕ ಕ್ರಾಂತಿಯನ್ನೇ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಕೊಡಗು ಮಾನವ ಬಂಧುತ್ವ ವೇದಿಕೆಯಿಂದಲೂ ಮಾದ್ರೆ ಗ್ರಾಮದ ಸ್ಮಶಾನ ಜಾಗದಲ್ಲಿ ಅಡುಗೆ ಮಾಡಿ ಊಟ ಮಾಡುವ ಮೂಲಕ ಮೌಢ್ಯಾಚರಣೆಯಿಂದ ಎಲ್ಲರೂ ಹೊರ ಬರಬೇಕು ಎಂದು ಕರೆ ನೀಡುತ್ತಿರುವುದಾಗಿ ತಿಳಿಸಿದರು.ವೇದಿಕೆಯ ತಾಲೂಕು ಸಂಚಾಲಕ ಎಂ.ಎಸ್.ವೀರೇಂದ್ರ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಗ್ರಾಮದ ಅಂಬೇಡ್ಕರ್ ಯುವಕ ಸಂಘದ ಅಧ್ಯಕ್ಷ ಎಂ.ಕೆ.ಮಂಜುನಾಥ, ಸದಸ್ಯರಾದ ಪಿ.ಎಂ.ವಿಶ್ವ, ಅರುಣ್ ಕುಮಾರ್, ಡೀಲಾಕ್ಷ, ಗುರುಪ್ರಸಾದ್ ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.