ಬಿಸಿಲಿನಿಂದ ಪಾರಾಗಲು ಪೌರಕಾರ್ಮಿಕರಿಗೆ ಕೂಲಿಂಗ್ ಕಿಟ್

KannadaprabhaNewsNetwork |  
Published : Apr 18, 2026, 03:45 AM IST
Heat

ಸಾರಾಂಶ

ನಗರದ ಬಿಸಿಲಿನ ತೀವ್ರತೆಯಿಂದ ಪೌರಕಾರ್ಮಿಕರಿಗೆ ರಕ್ಷಣೆ ನೀಡಲು ಉತ್ತರ ನಗರ ಪಾಲಿಕೆಯು ಸಿ-40 ಸಂಸ್ಥೆಯ ಸಹಯೋಗದಲ್ಲಿ ‘ಹೀಟ್–ಹೆಲ್ತ್ ಪ್ರೋಟೋಕಾಲ್’ ಅಡಿ ಕೂಲಿಂಗ್‌ ಕಿಟ್‌ ವಿತರಿಸಿದೆ.

  ಬೆಂಗಳೂರು :  ನಗರದ ಬಿಸಿಲಿನ ತೀವ್ರತೆಯಿಂದ ಪೌರಕಾರ್ಮಿಕರಿಗೆ ರಕ್ಷಣೆ ನೀಡಲು ಉತ್ತರ ನಗರ ಪಾಲಿಕೆಯು ಸಿ-40 ಸಂಸ್ಥೆಯ ಸಹಯೋಗದಲ್ಲಿ ‘ಹೀಟ್–ಹೆಲ್ತ್ ಪ್ರೋಟೋಕಾಲ್’ ಅಡಿ ಕೂಲಿಂಗ್‌ ಕಿಟ್‌ ವಿತರಿಸಿದೆ.

ಕೂಲಿಂಗ್‌ ಕಿಟ್‌

ಪ್ರಾಯೋಗಿಕವಾಗಿ ನಾಗವಾರ ಮತ್ತು ಎಚ್‌ಬಿಆರ್ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಶುಕ್ರವಾರ ಯಲಹಂಕದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಷ್ಣಾಂಶ ತಪಾಸಣೆ ಕಿಟ್, ನೆಕ್ ಕಾಲರ್ ಫ್ಯಾನ್, ನೀರಿನ ಬಾಟಲಿ, ಟೋಪಿ, ಹ್ಯಾಂಡ್ ಸ್ಲೀವ್ಸ್ ಒಳಗೊಂಡಿರುವ ಕೂಲಿಂಗ್ ಕಿಟ್ ವಿತರಿಸಲಾಯಿತು.

ಮುನ್ನೆಚ್ಚರಿಕೆ ಕ್ರಮಗಳ ಕುರಿತು ಅರಿವು

ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತರು, ಒಣತ್ಯಾಜ್ಯ ಸಂಗ್ರಹಣಾ ಕೇಂದ್ರದ ಸಿಬ್ಬಂದಿ ಹಾಗೂ ಪೌರಕಾರ್ಮಿಕರಿಗೆ ಬಿಸಿಲಿನ ಪರಿಣಾಮಗಳು ಹಾಗೂ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಅರಿವು ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಆಯುಕ್ತ ಪಿ. ಸುನೀಲ್ ಕುಮಾರ್, ಬೆಂಗಳೂರಿನಲ್ಲಿ ತಾಪಮಾನ ಏರಿಕೆಯಾಗುತ್ತಿರುವ ಹಿನ್ನೆಲೆ ಪೌರಕಾರ್ಮಿಕರ ಆರೋಗ್ಯದ ಬಗ್ಗೆ ವಿಶೇಷ ಗಮನ ಹರಿಸಬೇಕು. ಪ್ರಸ್ತುತ ಪ್ರಾಯೋಗಿಕವಾಗಿ ಕಿಟ್‌ಗಳನ್ನು ವಿತರಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಎಲ್ಲ ಪೌರಕಾರ್ಮಿಕರಿಗೆ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಡಿಸಿಆರ್‌ಇ ಎಸ್ಪಿ, ಡಿವೈಎಸ್ಪಿ ವಿರುದ್ಧ ದಲಿತ ಇನ್ಸ್‌ಪೆಕ್ಟರ್ ಕಿರುಕುಳ ಆರೋಪ
ಈ ಬಾರಿ ಅಕ್ಷಯ ತೃತೀಯಕ್ಕೆ ಚಿನ್ನ ಖರೀದಿ ಶೇ. 30-35ರಷ್ಟು ಇಳಿಮುಖ