ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣ ಮಾಡಲು ಕೇವಲ ಪೊಲೀಸರಿಂದ ಮಾತ್ರ ಸಾಧ್ಯವಿಲ್ಲ. ಪ್ರತಿಯೊಬ್ಬರೂ ವಿಶೇಷವಾಗಿ ಯುವಕ-ಯುವತಿಯರು ಕೈಜೋಡಿಸಬೇಕು ಎಂದು ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ಕರೆ ನೀಡಿದ್ದಾರೆ.
ಸಿದ್ದಾಪುರ: ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣ ಮಾಡಲು ಕೇವಲ ಪೊಲೀಸರಿಂದ ಮಾತ್ರ ಸಾಧ್ಯವಿಲ್ಲ. ಪ್ರತಿಯೊಬ್ಬರೂ ವಿಶೇಷವಾಗಿ ಯುವಕ-ಯುವತಿಯರು ಕೈಜೋಡಿಸಬೇಕು ಎಂದು ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ಕರೆ ನೀಡಿದ್ದಾರೆ.ರಾಜ್ಯವನ್ನು ಮಾದಕ ವ್ಯಸನ ಮುಕ್ತಗೊಳಿಸುವ ಗುರಿಯೊಂದಿಗೆ ಪೊಲೀಸ್ ಇಲಾಖೆ ಹಮ್ಮಿಕೊಂಡಿರುವ ಡ್ರಗ್ಸ್ ಬೇಡ ಬ್ರೋ ಮತ್ತು ಆಪರೇಷನ್ ರೈಸ್ ಜಾಗೃತಿ ಅಭಿಯಾನದ ಅಂಗವಾಗಿ ಸಿದ್ದಾಪುರ ಬಸ್ ನಿಲ್ದಾಣದಲ್ಲಿ ಬುಧವಾರ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಯುವಕರಿಗೆ ಕಿವಿಮಾತು ಹೇಳಿದ ಎಸ್ಐ: ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಎಸ್ಐ ಮಂಜುನಾಥ್, ಡ್ರಗ್ಸ್ ಸೇವಿಸುವುದರಿಂದ ಒಬ್ಬ ಯುವಕನ ಭವಿಷ್ಯ ಹಾಳಾಗುವುದಲ್ಲ. ಬದಲಿಗೆ ಇಡೀ ದೇಶವನ್ನೇ ಹಾಳು ಮಾಡುತ್ತದೆ. ಸ್ನೇಹಿತರ ಒತ್ತಡಕ್ಕೆ ಮಣಿದು ಈ ದುಶ್ಚಟಕ್ಕೆ ಬಲಿಯಾಗಬೇಡಿ. ಯಾರಾದರೂ ಈ ರೀತಿ ದುಶ್ಚಟಕ್ಕೆ ಬಲಿಯಾಗುತ್ತಿದ್ದರೆ ''''''''ಇದೆಲ್ಲಾ ಬೇಡ ಬ್ರೋ'''''''' ಎಂದು ಅವರ ಮನವೊಲಿಸಿ ಎಂದು ಕಿವಿಮಾತು ಹೇಳಿದರು.ನಿಮ್ಮ ಸುತ್ತಮುತ್ತ ಯಾರಾದರೂ ಡ್ರಗ್ಸ್ ಸೇವನೆ ಅಥವಾ ಮಾರಾಟ ಮಾಡುತ್ತಿರುವುದು ತಿಳಿದರೆ ಕೂಡಲೇ ಮಾಹಿತಿ ನೀಡಿ. ಮಾಹಿತಿ ನೀಡಿದವರ ವಿವರಗಳನ್ನು ಗೌಪ್ಯವಾಗಿಡಲಾಗುವುದು ಎಂದರು.ರಸ್ತೆ ಅಪಘಾತಗಳನ್ನು ತಡೆಯಲು ಮತ್ತು ಪ್ರತಿಯೊಬ್ಬರ ಪ್ರಾಣ ರಕ್ಷಿಸಲು ರಸ್ತೆ ಸುರಕ್ಷತೆ ಬಗ್ಗೆ ಹಾಗೂ ಸಂಚಾರ ನಿಯಮಗಳ ಬಗ್ಗೆ ಮಾಹಿತಿ ತಿಳಿದು ಸಾರ್ವಜನಿಕರು ನಿಯಮ ಪಾಲಿಸಬೇಕು. ಈಗಾಗಲೇ ನಿಯಮ ಉಲ್ಲಂಘಿಸಿದ ಹಲವು ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ನ್ಯಾಯಾಲಯದಿಂದ ದಂಡ ವಿಧಿಸಿರೋ ಪ್ರಸಂಗ ಕೂಡ ನಡೆದಿದೆ ಎಂದು ಇದೇ ವೇಳೆ ಮಾಹಿತಿ ನೀಡಿದರು.
ವಿಶೇಷ ವ್ಯವಸ್ಥೆ: ಡ್ರಗ್ಸ್ ಅನ್ನು ತಳಮಟ್ಟದಿಂದ ಕಿತ್ತೆಸೆಯಲು ಸ್ಥಳೀಯ ಪೊಲೀಸರನ್ನೊಳಗೊಂಡ ವಿಶೇಷ ವಿರೋಧಿ ಸಮಿತಿಗಳನ್ನು ರಚಿಸಲಾಗುತ್ತಿದೆ. ಡ್ರಗ್ಸ್ ಬಗ್ಗೆ ಮಾಹಿತಿ ನೀಡಲು ಪೊಲೀಸ್ ಸಹಾಯವಾಣಿ ಮತ್ತು ಕ್ಯೂ ಆರ್ ಕೋಡ್ ವ್ಯವಸ್ಥೆಯೂ ಇದೆ ಎಂದು ಎಸ್ಐ ತಿಳಿಸಿದರು.
ಸಾರ್ವಜನಿಕರು, ಆಟೋ ಚಾಲಕರು, ಕಾರು ಚಾಲಕರು, ವಿದ್ಯಾರ್ಥಿಗಳು, ವರ್ತಕರು ಮತ್ತು ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.