ಯಲಬುರ್ಗಾ: ನ. 1ರಂದು ಕನ್ನಡ ರಾಜ್ಯೋತ್ಸವವನ್ನು ಈ ಬಾರಿ ಅದ್ಧೂರಿಯಾಗಿ ಆಚರಿಸಲು ತಾಲೂಕಾಡಳಿತ ನಿರ್ಧರಿಸಿದ್ದು, ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಸಹಕಾರ ನೀಡಬೇಕು ಎಂದು ತಹಸೀಲ್ದಾರ್ ಪ್ರಕಾಶ ನಾಶಿ ಹೇಳಿದರು.
ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು, ಅದ್ಧೂರಿ ಮೆರವಣಿಗೆ, ಉಪನ್ಯಾಸ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಹೇಳಿದರು.
ಕರವೇ ಮುಖಂಡರಾದ ರಾಜಶೇಖರ ಶ್ಯಾಗೋಟಿ ಹಾಗೂ ಶಿವಕುಮಾರ ನಾಗನಗೌಡ್ರು ಮಾತನಾಡಿ, ಕನ್ನಡ ರಾಜ್ಯೋತ್ಸವ ನಾಡಿನ ಹೆಮ್ಮೆಯ ಹಬ್ಬವಾಗಿದ್ದು, ಈ ಬಾರಿ ಎಲ್ಲ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಪಾಲ್ಗೊಂಡು ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಕೈಜೋಡಿಸಬೇಕು ಎಂದು ಒತ್ತಾಯಿಸಿದರು.ಅಧಿಕಾರಿಗಳಾದ ಶಿವಶಂಕರ ಕಡರಕಲ್ಲ, ಶಶಿಧರ ಸಕ್ರಿ, ವನರಾಜ್, ಸಾಯಬಣ್ಣ, ಪರ್ವೇಜ್, ಟಿ.ಜೆ. ದಾನಿ, ಶರಣಪ್ಪ ವೀರಾಪುರ, ಮಲ್ಲಿಕಾರ್ಜುನ ಶಾಸ್ತ್ರಿಮಠ, ಸಂಜಯ್ ಚಿತ್ತಗಾರ, ಪ್ರೇಮಾ, ಪ್ರವೀಣ್, ಕನ್ನಡ ಸಾಹಿತ್ಯ ಪರಿಷತ್ತಿನ ಹೋಬಳಿ ಘಟಕದ ಅಧ್ಯಕ್ಷ ಮಹಾಂತೇಶ ಛಲವಾದಿ ಇದ್ದರು.