ಪಟ್ಟಣ ಸ್ವಚ್ಛತೆಗೆ ಸಹಕರಿಸಿ: ಮುಖ್ಯಾಧಿಕಾರಿ ಬಾಗಲಕೋಟ ಮನವಿ

KannadaprabhaNewsNetwork |  
Published : Jul 25, 2024, 01:17 AM IST
೨೩ಡಿಎಚಪಿ೧ | Kannada Prabha

ಸಾರಾಂಶ

ಸೊಳ್ಳೆಗಳಿಂದ ಹರಡುವ ಮಾರಕ ರೋಗಗಳನ್ನು ತಡೆಗಟ್ಟುವ ಸಲುವಾಗಿ ಪಟ್ಟಣದಲ್ಲಿ ಫಾಗಿಂಗ್‌ ಮಾಡುತ್ತಿದ್ದು, ಪಟ್ಟಣದ ಸ್ವಚ್ಛತೆಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿ ಎಸ್.ಎಸ್.ಬಾಗಲಕೋಟ ಸಾರ್ವಜನಿಕರಿಗೆ ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ

ಸೊಳ್ಳೆಗಳಿಂದ ಹರಡುವ ಮಾರಕ ರೋಗಗಳನ್ನು ತಡೆಗಟ್ಟುವ ಸಲುವಾಗಿ ಪಟ್ಟಣದಲ್ಲಿ ಫಾಗಿಂಗ್‌ ಮಾಡುತ್ತಿದ್ದು, ಪಟ್ಟಣದ ಸ್ವಚ್ಛತೆಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿ ಎಸ್.ಎಸ್.ಬಾಗಲಕೋಟ ಸಾರ್ವಜನಿಕರಿಗೆ ಮನವಿ ಮಾಡಿದರು.ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಫಾಗಿಂಗ್‌ ಕಾರ್ಯಕ್ಕೆ ಬುಧವಾರ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಟ್ಟಣ ಇತಿಹಾಸ ಪ್ರಸಿದ್ಧವಾಗಿದ್ದು, ಪಟ್ಟಣದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ. ಈ ನಿಟ್ಟಿನಲ್ಲಿ ಪಟ್ಟಣ ಪಂಚಾಯತಿ ಮುಂದಾಗಿದ್ದು, ನಾಗರೀಕರು ಸಹಕಾರ ನೀಡಬೇಕಾಗಿರುವುದು ಅವರ ಕರ್ತವ್ಯವಾಗಿದೆ. ಪಟ್ಟಣದ ಸ್ವಚ್ಛತೆಗೆ ನಮ್ಮ ಪ್ರಥಮ ಆದ್ಯತೆಯಾಗಿದೆ. ಉತ್ಪತ್ತಿಯಾಗುವ ಕಸವನ್ನು ಎಲ್ಲೆಂದರಲ್ಲಿ ಬೀಸಾಕದೇ ಪಟ್ಟಣ ಪಂಚಾಯತಿಯಿಂದ ಕಸ ತುಂಬಿಸುವ ವಾಹನಗಳು ಬಂದಾಗ ಆ ವಾಹನದಲ್ಲಿ ಹಾಕಬೇಕು. ಮಾದರಿ ಪಟ್ಟಣ ಪಂಚಾಯತಿ ಮಾಡಲು ಸದಸ್ಯರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು. ಪಟ್ಟಣದ ಜನರು ಮನೆಯ ಸುತ್ತ-ಮುತ್ತ ಸ್ವಚ್ಛತೆ ಇಟ್ಟುಕೊಳ್ಳಬೇಕು. ಪಟ್ಟಣದ ಎಲ್ಲ 17 ವಾರ್ಡ್‌ಗಳಲ್ಲಿ ಫಾಗಿಂಗ್‌ ಮಾಡಲಾಗುತ್ತಿದೆ ಹಾಗೂ ಸಿಬ್ಬಂದಿಗೆ ಸಹಕಾರ ನೀಡಿ ಎಂದು ತಿಳಿಸಿದರು.ಇದೇ ಸಂದರ್ಭದಲ್ಲಿ ಕಿರಿಯ ಆರೋಗ್ಯ ನಿರೀಕ್ಷಕ ಫಿರೋಜ್ ಮುಲ್ಲಾ ಸೇರಿದಂತೆ ಸಿಬ್ಬಂದಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರ ಕ್ಷೇತ್ರಕ್ಕೆ ಆರ್ಥಿಕ ಶಿಸ್ತು ಅಗತ್ಯ
ಅಧಿಕಾರಿಗಳು ಜಾತ್ಯತೀತವಾಗಿ ಕೆಲಸ ಮಾಡಿ : ಸಿಎಂ ಸಿದ್ದರಾಮಯ್ಯ