ಫೆ. 8ರಂದು ಕುಕನೂರಲ್ಲಿ ಸಹಕಾರ ಜಾಗೃತಿ ಸಮಾವೇಶ

KannadaprabhaNewsNetwork |  
Published : Feb 01, 2025, 12:03 AM IST
31ಕೆಕೆಆರ್1:ಕುಕನೂರು ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯಾಲಯದಲ್ಲಿ  ಸುದ್ದಿಗೋಷ್ಠಿ ಜರುಗಿತು. | Kannada Prabha

ಸಾರಾಂಶ

ಕುಕನೂರು ಪಟ್ಟಣದ ಎಪಿಎಂಸಿ ಆವರಣದಲ್ಲಿ ಫೆ. 8ರಂದು ಸಹಕಾರ ಜಾಗೃತಿ ಸಮಾವೇಶ ಜರುಗಲಿದೆ. ಯಲಬುರ್ಗಾ, ಕುಕನೂರು ತಾಲೂಕಿನಲ್ಲಿ ಎಲ್ಲ ಸಹಕಾರ ಸಂಘಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ನಿರ್ದೇಶಕರಿಗೆ ಸಹಕಾರ ರಂಗದ ಕುರಿತು ಜಾಗೃತಿ ಮೂಡಿಸುವ ಪ್ರಯುಕ್ತ ಹಮ್ಮಿಕೊಳ್ಳಲಾಗಿದೆ.

ಕುಕನೂರು: ಪಟ್ಟಣದ ಎಪಿಎಂಸಿ ಆವರಣದಲ್ಲಿ ಫೆ. 8ರಂದು ಸಹಕಾರ ಜಾಗೃತಿ ಸಮಾವೇಶ ಜರುಗಲಿದೆ ಎಂದು ಪಿಕಾರ್ಡ್‌ ಬ್ಯಾಂಕ್ ಅಧ್ಯಕ್ಷ ಚಂದ್ರಶೇಖರಯ್ಯ ಹಿರೇಮಠ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಲಬುರ್ಗಾ, ಕುಕನೂರು ತಾಲೂಕಿನಲ್ಲಿ ಎಲ್ಲ ಸಹಕಾರ ಸಂಘಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ನಿರ್ದೇಶಕರಿಗೆ ಸಹಕಾರ ರಂಗದ ಕುರಿತು ಜಾಗೃತಿ ಮೂಡಿಸುವ ಪ್ರಯುಕ್ತ ರಾಜ್ಯದಲ್ಲೇ ಪ್ರಥಮ ಬಾರಿಗೆ ಎಂಬಂತೆ ಸಹಕಾರಿ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ವಸ್ತು ಪ್ರದರ್ಶನ ಉದ್ಘಾಟಿಸುವರು. ಸಚಿವ ಎಚ್.ಕೆ. ಪಾಟೀಲ್ ಸಹಕಾರ ವಾರಪತ್ರಿಕೆ ವಿಶೇಷ ಸಂಚಿಕೆ ಬಿಡುಗಡೆಗೊಳಿಸಲಿದ್ದಾರೆ. ಸಹಕಾರಿ ಪಿತಾಮಹ ಸಿದ್ದನಗೌಡ ಪಾಟೀಲ ಅವರ ಭಾವಚಿತ್ರಕ್ಕೆ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಹಾಗೂ ಶಾಸಕ ಜಿ.ಟಿ. ದೇವೇಗೌಡ ಮಾಲಾರ್ಪಣೆ ಮಾಡಲಿದ್ದಾರೆ. ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅಧ್ಯಕ್ಷತೆ ವಹಿಸುವರು. ಸಹಕಾರ ರಂಗದಲ್ಲಿ ಸೇವೆ ಸಲ್ಲಿಸಿದ ಅವಳಿ ತಾಲೂಕಿನ ಹಿರಿಯರಿಗೆ ಸನ್ಮಾನ ಹಮ್ಮಿಕೊಳ್ಳಲಾಗಿದೆ ಎಂದರು.

ಸಹಕಾರ ಜಾಗೃತಿ ಸಮಾವೇಶ ಸಮಿತಿ ಅಧ್ಯಕ್ಷ ರಾಘವೇಂದ್ರ ಜೋಶಿ ಮಾತನಾಡಿ, ಯಲಬುರ್ಗಾ, ಕುಕನೂರು ತಾಲೂಕಿನಾದ್ಯಂತ ಎಲ್ಲ ಸಂಘಗಳಿಂದ ಸುಮಾರು 3000 ಜನರು ಸೇರಲಿದ್ದಾರೆ. ಸಹಕಾರಿ ಇಲಾಖೆ ಕಾರ್ಯ ನಿರ್ವಹಿಸುವ ಬಗೆಯನ್ನು ಅಂದು ಇಲಾಖೆ ಅಧಿಕಾರಿಗಳು ತಿಳಿಸಿಕೊಡುವರು ಎಂದರು.

ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯಾಲಯದಲ್ಲಿ ಸಹಕಾರ ಜಾಗೃತಿ ಸಮಾವೇಶದ ಕಾರ್ಯಾಲಯದ ಉದ್ಘಾಟನೆ ಜರುಗಿತು. ಸಹಕಾರ ಇಲಾಖೆಯ ಪ್ರಭಾರಿ ಉಪನಿಬಂಧಕ ಪ್ರಕಾಶ ಸಜ್ಜನ, ಪ್ರಮುಖರಾದ ಶೇಖರಗೌಡ ಉಳ್ಳಾಗಡ್ಡಿ, ನಾರಾಯಣಪ್ಪ ಹರಪನಹಳ್ಳಿ, ರಾಮಣ್ಣ ಭಜಂತ್ರಿ, ಸಿದ್ದಯ್ಯ ಕಳ್ಳಿಮಠ, ವೀರಯ್ಯ ತೋಂಟದಾರ್ಯಮಠ, ನಿಂಗಪ್ಪ ಗೊರ್ಲೆಕೊಪ್ಪ ಇತರರಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ