
ಕನ್ನಡಪ್ರಭ ವಾರ್ತೆ ಪೊನ್ನಂಪೇಟೆ
ಪೊನ್ನಂಪೇಟೆ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಭೆಯಲ್ಲಿ ಉಪಸ್ಥಿತರಿದ್ದ ಸಾಹಿತ್ಯ ಪರಿಷತ್ತಿನ ಸದಸ್ಯರು ಮತ್ತು ಸರ್ಕಾರಿ ಅಧಿಕಾರಿಗಳಿಗೆ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಹಕರಿಸುವಂತೆ ಮನವಿ ಮಾಡಿದರು.
ಸಮ್ಮೇಳನಕ್ಕೆ ಸಹಕಾರ ಕೊಡಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ ಕೇಶವ ಕಾಮತ್ ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಜಿಲ್ಲೆಯಲ್ಲಿ ನಡೆಯುತ್ತಿರುವ ಸಮ್ಮೇಳನಗಳ ಕುರಿತು ಮಾಹಿತಿ ನೀಡಿ ಎಲ್ಲರ ಸಹಕಾರ ಕೋರಿದರು.ಪೊನ್ನಂಪೇಟೆ ತಾಲೂಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಾತನಾಡಿ ಕೋಳೆರ ದಯಾ ಚಂಗಪ್ಪ ಇಲ್ಲಿಯವರೆಗಿನ ಎಲ್ಲ ಕನ್ನಡ ಕಾರ್ಯಕ್ರಮಗಳಿಗೆ ಸರ್ಕಾರಿ ಅಧಿಕಾರಿಗಳು ನೀಡಿದ್ದಾರೆ. ಇದೇ ರೀತಿ ಸಹಕಾರವನ್ನು ಮುಂದೆಯೂ ನೀಡಬೇಕೆಂದು ಮನವಿ ಮಾಡಿದರು. ವೇದಿಕೆಯಲ್ಲಿ ಪೊನ್ನಂಪೇಟೆ ತಾಲೂಕು ಅಕ್ರಮ ಸಕ್ರಮ ಸಮಿತಿಯ ಅಧ್ಯಕ್ಷ ಅಣ್ಣಳಮಾಡ ಲಾಲಾ ಅಪ್ಪಣ್ಣ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕಾಳಿಮಾಡ ಪ್ರಶಾಂತ, ಹುದಿಕೇರಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಾನಂಗಡ ಅರುಣ ಇದ್ದರು.
ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವು ಮೇ 20ರಂದು ಕಡಂಗದಲ್ಲಿ ಜರುಗಲಿದೆ. ಕೊಡಗು ಜಿಲ್ಲಾ ಸಮ್ಮೇಳನವು 29, 30 ರಂದು ಸುಂಟಿಕೊಪ್ಪದಲ್ಲಿ ಜರುಗಲಿದೆ. ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವು ಹುದಿಕೇರಿಯಲ್ಲಿ ಜೂ.1 ರಂದು ನಡೆಯಲಿದೆ.