ಕುರುಬ ಸಮಾಜದ ಸಮಗ್ರ ಪ್ರಗತಿಗೆ ಸಹಕಾರ: ಶಾಸಕ

KannadaprabhaNewsNetwork |  
Published : Aug 21, 2025, 01:00 AM IST
ದೊಡ್ಡಬಳ್ಳಾಪುರದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪತ್ತಿನ ಸಹಕಾರ ಸಹಕಾರ ಸಂಘದಿಂದ ಕುರುಬ ಸಮಾಜದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ಕುರುಬ ಸಮುದಾಯಕ್ಕೆ ಜಮೀನು ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಹಿಂದುಳಿದ ವರ್ಗಗಳ ಅಭ್ಯುದಯದ ಆಶಯಕ್ಕೆ ಪೂರಕವಾಗಿ ಯೋಜನೆಗಳ್ನು ಅನುಷ್ಠಾನಗೊಳಿಸುವ ಅಗತ್ಯವಿದೆ ಎಂದು ಶಾಸಕ ಧೀರಜ್‌ ಮುನಿರಾಜ್‌ ಹೇಳಿದರು.

ದೊಡ್ಡಬಳ್ಳಾಪುರ: ಕುರುಬ ಸಮುದಾಯಕ್ಕೆ ಜಮೀನು ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಹಿಂದುಳಿದ ವರ್ಗಗಳ ಅಭ್ಯುದಯದ ಆಶಯಕ್ಕೆ ಪೂರಕವಾಗಿ ಯೋಜನೆಗಳ್ನು ಅನುಷ್ಠಾನಗೊಳಿಸುವ ಅಗತ್ಯವಿದೆ ಎಂದು ಶಾಸಕ ಧೀರಜ್‌ ಮುನಿರಾಜ್‌ ಹೇಳಿದರು.

ನಗರದ ರಾಮಾಂಜನೇಯ ಕಲ್ಯಾಣ ಮಂಟಪದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪತ್ತಿನ ಸಹಕಾರ ಸಹಕಾರ ಸಂಘದಿಂದ ಕುರುಬ ಸಮಾಜದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರ್ತಿಸಿ ಪುರಸ್ಕಾರ ನೀಡುವ ಕಾರ್ಯ ಶ್ಲಾಘನೀಯ. ಇಂತಹ ಕಾರ್ಯವನ್ನು ಪ್ರತಿ ವರ್ಷ ಹಮ್ಮಿಕೊಳ್ಳುತ್ತಿರುವ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪತ್ತಿನ ಸಹಕಾರ

ಸಂಘದ ಕಾರ್ಯ ಅಭಿನಂದನೀಯ. ಹಿಂದುಳಿದ ವರ್ಗಗಳ ಎಲ್ಲಾ ಸಮಾಜಗಳಿಗೆ ಜಮೀನು ಮಂಜೂರಾತಿ ವಿಚಾರದಲ್ಲಿ ಆದ್ಯತಾವಾರು ಗಮನ ಹರಿಸಲಾಗುವುದು ಎಂದರು.

ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ಬಡವರ ಪರ ಕಾಳಜಿ ಇರುವ ಸಿದ್ದರಾಮಯ್ಯ ರಾಜ್ಯದ ಮುಖ್ಯಮಂತ್ರಿ ಯಾಗಿರುವುದು ಹೆಮ್ಮೆಯ ಸಂಗತಿ. ಕುರುಬ ಸಮಾಜದ ಅಶೋತ್ತರಗಳಿಗೆ ತಮ್ಮ ಅಧಿಕಾರಾವಧಿಯಲ್ಲಿ ಪೂರಕವಾಗಿ ಕೆಲಸ ನಿರ್ವಹಿಸಲಾಗಿದೆ. ಸಮುದಾಯಕ್ಕೆ ಜಮೀನು ಮಂಜೂರಾತಿ ವಿಚಾರದಲ್ಲಿ ಈಗಾಗಲೇ ಹಲವಾರು ಬಾರಿ ಪ್ರಯತ್ನಿಸಲಾಗಿದ್ದು, ಎಲ್ಲರೂ ಒಗ್ಗೂಡಿ ಪ್ರಯತ್ನಿಸಿದರೆ ಯಶಸ್ಸು ಖಂಡಿತ ಎಂದು ಹೇಳಿದರು.

ಗತಿಪರ ಚಿಂತಕ ನಿಕೇತ್ ರಾಜ್ ಮೌರ್ಯ ಮಾತನಾಡಿ, ದೇಶಾಭಿಮಾನ, ದೇಶಭಕ್ತಿ, ಶೌರ್ಯ, ಸಾಹಸಕ್ಕೆ ಮತ್ತೊಂದು ಹೆಸರೇ ಸಂಗೊಳ್ಳಿ ರಾಯಣ್ಣ. ಅದರಲ್ಲೂ ಸ್ವಾಭಿಮಾನ ಹಾಗೂ ಜನ್ಮಭೂಮಿಯ ಅಭಿಮಾನದ ವಿಚಾರದಲ್ಲಿ ರಾಯಣ್ಣ ಇತರರಿಗೆ ಮಾದರಿ ಎಂದರು.

ಇತಿಹಾಸ ಮತ್ತು ಪರಂಪರೆ ಸಂಶೋಧಕ ಗಿರಿಧರ್ ತಿಮ್ಮಪ್ಪ ನಾಯಕ ಮಾತನಾಡಿ, ಕುರುಬ ಸಮಾಜದ ಮೂಲವನ್ನು ಹುಡುಕಿಕೊಂಡು ಹೊರಟರೆ ಆಫ್ರಿಕಾ, ಹರಪ್ಪ ಮಹಾಂಜೊದಾರೋ ಘಟನೆಗಳಲ್ಲಿ ಕುರುಬರ ಇತಿಹಾಸ ಕಾಣ ಸಿಗುತ್ತದೆ. ಆಫ್ರಿಕಾ ಖಂಡದಲ್ಲಿ ಪಶುಪಾಲಕರನ್ನು ಕುರುಮ್ಬರ್ ಎಂದೇ ಕರೆಯುತ್ತಿದ್ದುದು ಇತಿಹಾಸ. ಈ ಬಗ್ಗೆ ಅರಿವು ಮೂಡಿಸಿಕೊಂಡು, ಮುಂದಿನ ಪೀಳಿಗೆಗಯವರಿಗೆ ಕುರುಬರ ಇತಿಹಾಸದ ಬಗ್ಗೆ ಅರಿವು ಮೂಡಿಸುವ ಕಾರ್ಯ ಮಾಡಬೇಕಿದೆ ಎಂದರು.

ಕುರುಬ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು. ಸಮಾಜದ ಹಿರಿಯರನ್ನು ಗುರುತಿಸಿ ಸನ್ಮಾನಿಸಲಾಯಿತು. ವಿಜಯಪುರ ಜಿಲ್ಲೆಯ ಶಿರೂರು ಸಂಸ್ಥಾನದ ಶರಬಯ್ಯ ಸ್ವಾಮೀಜಿ ಆಶೀರ್ವಚನ ನೀಡಿದರು.

ಕರ್ನಾಟಕ ಪ್ರದೇಶ ಕುರುಬರ ಸಂಘದ ಖಜಾಂಚಿ ಕೆ. ಎಂ. ಕೃಷ್ಣಮೂರ್ತಿ, ನಗರಸಭೆ ಉಪಾಧ್ಯಕ್ಷ ಎಂ. ಮಲ್ಲೇಶ್, ತೂಬಗೆರೆ ಹೋಬಳಿ ಕಾಂಗ್ರೆಸ್ ಅಧ್ಯಕ್ಷ ರವಿ ಸಿದ್ದಪ್ಪ, ಅರಳು ಮಲ್ಲಿಗೆ ಗ್ರಾ.ಪಂ. ಮಾಜಿ ಅಧ್ಯಕ್ಷ ಮಲ್ಲೇಶ್, ಕೆಂಪಣ್ಣ, ಆಲಳ್ಳಿ ಚಂದ್ರು, ವಕೀಲರ ಸಂಘದ ಎ. ಕೃಷ್ಣಮೂರ್ತಿ ಮತ್ತಿತರರು ಭಾಗವಹಿಸಿದ್ದರು.

ಪೋಟೋ-

20ಕೆಡಿಬಿಪಿ4- ದೊಡ್ಡಬಳ್ಳಾಪುರದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪತ್ತಿನ ಸಹಕಾರ ಸಹಕಾರ ಸಂಘದಿಂದ ಕುರುಬ ಸಮಾಜದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.

PREV

Recommended Stories

ಗುತ್ತಲದಲ್ಲಿ ಸಂಭ್ರಮದ ವೀರಭದ್ರೇಶ್ವರ ಜಾತ್ರಾ ಮಹೋತ್ಸವ
ಹಳಿಯಾಳದ ಮೆಕ್ಕೆಜೋಳದಲ್ಲಿ ಕೀಟನಾಶಕಗಳ ಪ್ರಮಾಣ ಅಧಿಕ