ಕನ್ನಡಪ್ರಭ ವಾರ್ತೆ ಮೇಲುಕೋಟೆ
ಮೇಲುಕೋಟೆಯ ಕವಿ ಪುತಿನ ವ್ಯಾಸಂಗ ಮಾಡಿದ ಶಾಲೆಗೆ ಭೇಟಿ ನೀಡಿ ವೀಕ್ಷಿಸಿದ ನಂತರ ಮಾತನಾಡಿದ ಅವರು, ಶಾಲೆಯ ಪರಿಸರ ಉತ್ತಮವಾಗಿದೆ. ಪ್ರತಿಭಾವಂತ ಶಿಕ್ಷಕರಿದ್ದರೂ ಶಾಲೆಯಲ್ಲಿ ಮಕ್ಕಳ ಕೊರತೆ ಎದುರಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದರು.
ಮಕ್ಕಳ ದಾಖಲಾತಿಗೆ ಶ್ರಮಿಸೋಣ. ಮಕ್ಕಳಲ್ಲಿ ಭಾಷಾ ಬೆಳವಣಿಗೆಗೆ ಪೂರಕವಾದ ಎಲ್ಲಾ ಚಟುವಟಿಕೆ ಹಮ್ಮಿಕೊಂಡು ಶಾಲಾಭಿವೃದ್ಧಿ ಮಾಡಿ ಸರ್ಕಾರದ ವತಿಯಿಂದ ಶಾಲೆಗೆ ಬೇಕಾದ ಅಗತ್ಯ ಮೂಲ ಸೌಲಭ್ಯಗಳನ್ನು ಕೊಡಿಸಲು ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು.ಪುತಿನ ವ್ಯಾಸಂಗ ಮಾಡಿದ ಶಾಲೆ ವಾರ್ಷಿಕೋತ್ಸವ ಅರ್ಥಪೂರ್ಣವಾಗಿ ನಡೆಯಬೇಕು. ಹೀಗಾಗಿ ಈ ವರ್ಷ ಪುತಿನ ಕಲಾಮಂದಿರದಲ್ಲಿ ಶಾಲಾ ವಾರ್ಷಿಕೋತ್ಸವ ನಡೆಸಿ ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ ಮಾಡಬೇಕು. ಇದಕ್ಕೆ ಟ್ರಸ್ಟ್ ಸಹಕಾರ ನೀಡುತ್ತದೆ. ನಾವೆಲ್ಲರೂ ನಿಮ್ಮೊಡನೆ ವಾರ್ಷಿಕೋತ್ಸವದಲ್ಲಿ ಭಾಗಿಯಾಗುತ್ತೇವೆ ಎಂದು ಹೇಳಿದರು.
ಮುಖ್ಯಶಿಕ್ಷಕ ಸಂತಾನರಾಮನ್, ಪುತಿನ ಕಲಾಮಂದಿರ ವ್ಯವಸ್ಥಾಪಕ ವೆಂಕಟೇಶ್, ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕಲಾವಿದ ಕದಲಗೆರೆ ಶಿವಣ್ಣಗೌಡ, ಸಹಶಿಕ್ಷಕರಾದ ಮಹಾಲಕ್ಷ್ಮೀ, ಜಯಂತಿ, ಪೂರ್ಣಿಮ, ಶೃತಿ, ಗಿರಿಜ ಇದ್ದರು. ಶಾಲೆಗೆ ಭೇಟಿ ನೀಡಿದ ಕೃಷ್ಣೇಗೌಡರಿಗೆ ಮಕ್ಕಳು ಹೂಗುಚ್ಚನೀಡಿ ಬರಮಾಡಿಕೊಂಡರು.