ಮಹಿಳೆಯರ ಉತ್ಪನ್ನಗಳಿಗೆ ಬ್ರ್ಯಾಂಡಿಂಗ್, ಲೇಬಲ್ ಬಗ್ಗೆ ತರಬೇತಿಗೆ ಸಹಕಾರ: ಜಿ.ಪಂ ಸಿ.ಇ.ಒ

KannadaprabhaNewsNetwork |  
Published : Sep 02, 2025, 12:00 AM IST
ಗೃಹೋಪಯೋಗಿ ಉತ್ಪನ್ನಗಳ ಪ್ರದರ್ಶನ, ಮಾರಾಟ | Kannada Prabha

ಸಾರಾಂಶ

ಮಂಗಳೂರು ತಾಲೂಕು ಪಂಚಾಯತ್ ಆವರಣದಲ್ಲಿ ಇತ್ತೀಚೆಗೆ ಗಣೇಶ ಹಬ್ಬದ ವಿಶೇಷ ಸಂಜೀವಿನಿ ಮಾಸಿಕ ಸಂತೆ, ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಸಂಪನ್ನಗೊಂಡಿತು.

ಮಂಗಳೂರು: ಸಂಜೀವಿನಿ ವಿವಿಧ ಸ್ವಸಹಾಯ ಸಂಘದ ಗ್ರಾಮೀಣ ಮಹಿಳೆಯರು ತಯಾರಿಸಿದ ಉತ್ಪನ್ನಗಳ ಮಾರಾಟವ ಮಹಿಳೆಯರನ್ನು ಆರ್ಥಿಕ ಸಬಲರನ್ನಾಗಿಸಲು ಸಹಕರಿಸುತ್ತದೆ. ಮಹಿಳೆಯರು ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಲು ಅವರ ಉತ್ಪನ್ನಗಳ ಮಾರಾಟಕ್ಕೆ ಉತ್ತೇಜನ ನೀಡಲಾಗುತ್ತದೆ ಎಂದು ದ.ಕ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ ಕಾರ್ಬಾರಿ ಹೇಳಿದರು.

ಅವರು ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮತ್ತು ಮಂಗಳೂರು ತಾಲೂಕು ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ತಾಲೂಕು ಪಂಚಾಯತ್ ಆವರಣದಲ್ಲಿ ಇತ್ತೀಚೆಗೆ ನಡೆದ ಗಣೇಶ ಹಬ್ಬದ ವಿಶೇಷ ಸಂಜೀವಿನಿ ಮಾಸಿಕ ಸಂತೆ, ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಉದ್ಘಾಟಿಸಿ ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಯಿಂದ ಎನ್.ಆರ್.ಎಲ್.ಎಮ್ ಸಂಜೀವಿನಿ ಒಕ್ಕೂಟದ ಸ್ತ್ರೀಯರು ಆಗಮಿಸಿದ್ದು, ಇನ್ನು ಮುಂದೆಯೂ ಒಕ್ಕೂಟದ ಮಹಿಳೆಯರಿಗೆ ಅವರವರ ಉತ್ಪನ್ನಗಳಿಗೆ ಸಂಬಂಧಿಸಿದಂತೆ ಬ್ರ್ಯಾಂಡಿಂಗ್, ಲೇಬಲ್ ಮುಂತಾದದರ ಬಗ್ಗೆ ತರಬೇತಿ ಸೇರಿದಂತೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದರು. ಈ ರೀತಿಯ ಮಾರಾಟ ಮೇಳಗಳನ್ನು ಆಯೋಜಿಸುವುದರಿಂದ ಮಹಿಳೆಯರು ತಾವು ಕರಗತ ಮಾಡಿಕೊಂಡ ಕೌಶಲ್ಯದಿಂದ ಉತ್ಪಾದಿಸಿದ ಉತ್ಪನ್ನಗಳಿಂದ ಹೆಚ್ಚಿನ ಆದಾಯ ಗಳಿಸಬಹುದು ಎಂದು ಅವರು ಹೇಳಿದರು.

ಮಾರಾಟ ಮಳಿಗೆಗಳಲ್ಲಿ ಉತ್ತಮ ಗುಣಮಟ್ಟದ ಆಯುರ್ವೇದಿಕ್ ಉತ್ಪನ್ನಗಳು, ಗೃಹ ಬಳಕೆ ವಸ್ತುಗಳು, ಕೃತಕ ಆಭರಣ, ಉಡುಪುಗಳು, ಅಲಂಕಾರ ವಸ್ತುಗಳು, ಮಹಿಳೆಯರು ಸ್ವತಃ ತಯಾರಿಸಿದ ಉಪ್ಪಿನಕಾಯಿ, ಹಪ್ಪಳ ಮುಂತಾದ ಆಹಾರ ಪದಾರ್ಥಗಳು, ಕರಕುಶಲ ಉತ್ಪನ್ನಗಳು ನೋಡುಗರ ಕಣ್ಸೆಳೆಯಿತು.

ಮಂಗಳೂರು ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ, ಜಿಲ್ಲಾ ಪಂಚಾಯತ್ ಯೋಜನಾಧಿಕಾರಿ ಜಯರಾಂ, ಮಂಗಳೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಕುಮಾರ್ ಹೊಳ್ಳ ಇದ್ದರು.

ಸಹಾಯಕ ನಿರ್ದೇಶಕ ಮಹೇಶ್ ಅಂಬೆಕಲ್ ನಿರೂಪಿಸಿದರು. ತಾಲೂಕು ಪಂಚಾಯತ್ ಸಹಾಯಕ ಲೆಕ್ಕಾಧಿಕಾರಿ ಪರಮೇಶ್ವರ್ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು