ಸರ್ಕಾರಿ ಶಾಲೆಗಳ ಉಳಿವಿಗೆ ಸಹಕಾರ ಅಗತ್ಯ: ಬಿ.ಬಸವರಾಜು

KannadaprabhaNewsNetwork |  
Published : Nov 17, 2026, 01:45 AM IST
16ಕೆಎಂಎನ್ ಡಿ19 | Kannada Prabha

ಸಾರಾಂಶ

ದಾನ-ಧರ್ಮ ಮಾಡುವ ಮನಸ್ಸು ಪ್ರತಿಯೊಬ್ಬರಿಗೂ ಬರುವುದಿಲ್ಲ. ಸೇವಾ ಮನೋಭಾವ ಹೊಂದಿರುವವರಿಗೆ ಮಾತ್ರಇಂತಹ ಕಾರ್ಯಗಳನ್ನು ಮಾಡಲು ಸಾಧ್ಯ. ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳು ಅಭಿವೃದ್ಧಿ ಹೊಂದಿದಾಗ ಮಾತ್ರ ಬಡ ಹಾಗೂ ಮಧ್ಯಮ ವರ್ಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಕ್ಕಂತಾಗುತ್ತದೆ.

ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ

ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳನ್ನು ಉನ್ನತ ಮಟ್ಟಕ್ಕೆಕೊಂಡೊಯ್ಯುವ ನಿಟ್ಟಿನಲ್ಲಿ ಸರ್ಕಾರದ ಸೌಲಭ್ಯಗಳ ಜೊತೆಗೆ ಸಮಾಜ ಸೇವಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಶ್ಲಾಘನೀಯ ಎಂದು ಮದ್ದೂರು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಬಿ.ಬಸವರಾಜು ತಿಳಿಸಿದರು.

ಸಮೀಪದ ಕಾಡುಕೊತ್ತನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಂಗಳೂರಿನ ಆಕೃತಿ ಎನ್‌ಜಿಒ ಸಂಸ್ಥೆ ವತಿಯಿಂದ ಶಾಲೆಗೆ ಡೆಸ್ಕ್‌ಗಳು ಹಾಗೂ ಅಗತ್ಯ ಪೀಠೋಪಕರಣಗಳನ್ನು ವಿತರಿಸಿ ಮಾತನಾಡಿದರು.

ದಾನ-ಧರ್ಮ ಮಾಡುವ ಮನಸ್ಸು ಪ್ರತಿಯೊಬ್ಬರಿಗೂ ಬರುವುದಿಲ್ಲ. ಸೇವಾ ಮನೋಭಾವ ಹೊಂದಿರುವವರಿಗೆ ಮಾತ್ರಇಂತಹ ಕಾರ್ಯಗಳನ್ನು ಮಾಡಲು ಸಾಧ್ಯ. ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳು ಅಭಿವೃದ್ಧಿ ಹೊಂದಿದಾಗ ಮಾತ್ರ ಬಡ ಹಾಗೂ ಮಧ್ಯಮ ವರ್ಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಕ್ಕಂತಾಗುತ್ತದೆ ಎಂದರು.

ಸರ್ಕಾರದ ಸೌಲಭ್ಯಗಳ ಸದ್ಬಳಕೆಯೊಂದಿಗೆ ಸಮಾಜದ ಪ್ರತಿಯೊಬ್ಬರೂ ಪಕ್ಷಾತೀತವಾಗಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕೈಜೋಡಿಸಬೇಕು. ವಿವಿಧ ಸಂಘ-ಸಂಸ್ಥೆಗಳು ಗ್ರಾಮೀಣ ಶಾಲೆಗಳನ್ನು ದತ್ತು ಪಡೆದು ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಮುಂದಾಗಬೇಕು ಎಂದುಕರೆ ನೀಡಿದರು.

ಸಮಾಜ ಸೇವಕ ಕೃಷ್ಣ ಮಾತನಾಡಿ, ಸರ್ಕಾರಿ ಶಾಲೆಗಳ ಶ್ರೇಯೋಭಿವೃದ್ಧಿಗೆ ಶಿಕ್ಷಣ ಇಲಾಖೆಯ ಸೌಲಭ್ಯಗಳೊಂದಿಗೆ ನಮ್ಮಎನ್‌ಜಿಒ ಸಂಸ್ಥೆ ಮುಖ್ಯಸ್ಥರಾದ ಶ್ರೇಯಸ್ಸು ಹಾಗೂ ಮಾನಸ ದಂಪತಿಗಳ ಮಾರ್ಗದರ್ಶನದಲ್ಲಿರಾಜ್ಯಾದ್ಯಂತ ಹಲವು ಸರ್ಕಾರಿ ಶಾಲೆಗಳಿಗೆ ಅಗತ್ಯ ಪರಿಕರಗಳು ಮತ್ತು ಮೂಲಸೌಕರ್ಯಗಳನ್ನು ಒದಗಿಸುವ ಕೆಲಸ ಮಾಡಲಾಗುತ್ತಿದೆ ಎಂದರು.

ಸರ್ಕಾರಿ ಶಾಲೆಗಳು ಬಲಗೊಂಡರೆ ಮಾತ್ರ ಶೈಕ್ಷಣಿಕವಾಗಿ ಮತ್ತು ಸಾಮಾಜಿಕವಾಗಿ ನಿಜವಾದ ಪ್ರಗತಿ ಸಾಧಿಸಲು ಸಾಧ್ಯ. ಮುಂದಿನ ದಿನಗಳಲ್ಲಿಯೂ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಂಸ್ಥೆ ವತಿಯಿಂದ ಸಾಧ್ಯವಾದಷ್ಟು ನೆರವು ನೀಡಲಾಗುವುದು ಎಂದರು.

ಇದೇ ವೇಳೆ ಆಕೃತಿ ಎನ್‌ಜಿಒ ಸಂಸ್ಥೆಯ ಕೃಷ್ಣ ಸೇರಿದಂತೆ ಸಂಸ್ಥೆ ಪ್ರತಿನಿಧಿಗಳು ಹಾಗೂ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಶಿಕ್ಷಣ ಸಂಯೋಜಕ ರವಿ, ಕೆ.ಕೆ.ಹಳ್ಳಿ ಸಿಆರ್‌ಪಿ ನಾಗರಾಜು, ಶಾಲೆ ಮುಖ್ಯ ಶಿಕ್ಷಕಿ ಜಾನ್ಸಿ, ತಾಪಂ ಮಾಜಿ ಸದಸ್ಯ ಕಪನಿಗೌಡ, ಗ್ರಾಪಂ ಮಾಜಿ ಅಧ್ಯಕ್ಷ ಸ್ವಾಮಿ, ಸದಸ್ಯರಾದ ಕೆ.ಎಸ್.ನಂಜಪ್ಪ, ಇ.ರಾಮಣ್ಣ, ಜಯಕುಮಾರ್, ಇ.ರುದ್ರಯ್ಯ, ರಾಜು ಶಾಲೆ ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರು, ವಿವಿಧ ಮುಖಂಡರು, ಶಿಕ್ಷಕರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೇಶೀಯ ಕ್ರೀಡೆಗಳಿಂದ ಆರೋಗ್ಯ: ಹನುಮಂತಗೌಡ ಎಂ. ಗುಡಿಹಿಂದಿನ
ಯೋಗಾಸನ ಸ್ಪರ್ಧೆ: ಇಬ್ಬರು ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ