ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಪಟ್ಟಣದ ಬೆಂಗಳೂರು- ಮೈಸೂರು ಹೆದ್ದಾರಿ ಬಳಿಯ ಕುವೆಂಪು ವೃತ್ತದಲ್ಲಿ ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ನೇತೃತ್ವದಲ್ಲಿ ಸಾವಿರಾರು ಕಾರ್ಯಕರ್ತರು ಹಾಗೂ ಮುಖಂಡರ ಸಮ್ಮುಖದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ ಶ್ರೀಚಾಮುಂಡೇಶ್ವರಿ ದೇವಾಲಯಕ್ಕೆ ತೆರಳುವ ಮುನ್ನ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.
ಮಂಡ್ಯ ಜಿಲ್ಲೆಯ ಜನತೆ ಬಗ್ಗೆ ನನಗೆ ಅಪಾರ ಅಭಿಮಾನವಿದೆ. ಜಿಲ್ಲೆಯ ಜನರ ಋಣ ತೀರಿಸುವ ಜವಾಬ್ದಾರಿ ನನ್ನ ಮೇಲಿದೆ. ಇದಕ್ಕಾಗಿ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸಚಿವ ಸಂಪುಟದಲ್ಲಿ ಎರಡು ದೊಡ್ಡ ಸಚಿವ ಸ್ಥಾನ ದೊರೆತಿದೆ. ರಾಜ್ಯದಲ್ಲಿ ನಿರುದ್ಯೋಗ ನಿವಾರಣೆಗೆ ಬೃಹತ್ ಕೈಗಾರಿಕೆ ಸ್ಥಾಪಿಸಲು ಉತ್ಸುಕನಾಗಿದ್ದೇನೆ. ರಾಜ್ಯ ಸರ್ಕಾರ ಅಗತ್ಯ ಜಾಗ ನೀಡಲು ಸಹಕಾರ ನೀಡಬೇಕು ಎಂದರು.ಕೈಗಾರಿಕೆ ಸ್ಥಾಪನೆಗೆ ಅಗತ್ಯ ಜಾಗ, ನೀರು, ವಿದ್ಯುತ್ ಸೇರಿದಂತೆ ಮೌಲ ಸೌಕರ್ಯಗಳನ್ನು ರಾಜ್ಯ ಸರ್ಕಾರದ ಕೆಲವು ಒಪ್ಪಿಗೆ ಬೇಕಿದೆ. ಬಂಡವಾಳ ಹೂಡುವವರನ್ನು ಕರೆ ತರುವುದು ಮುಖ್ಯವಲ್ಲ. ಸರ್ಕಾರವೂ ಸಹ ಕೈ ಜೋಡಿಸಿದರೆ ಮಾತ್ರ ಬೃಹತ್ ಕೈಗಾರಿಕೆ ಸ್ಥಾಪಿಸುವುದು ಖಚಿತ ಎಂದರು.
ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಮಾತನಾಡಿ, ಕೇಂದ್ರದಲ್ಲಿ ದೇಶದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಇರುವಂತೆ ರಾಜ್ಯದಲ್ಲಿ ರಾಜ್ಯದ ಅಭಿವೃದ್ಧಿಗೆ ಕುಮಾರಣ್ಣ ಅವರ ಸಾರಥ್ಯ ಅಗತ್ಯವಾಗಿದೆ. ಅವರ ಆರೋಗ್ಯ ವೃದ್ಧಿಗಾಗಿ ಶ್ರೀ ರಂಗನಾಥಸ್ವಾಮಿ, ಶ್ರೀಲಕ್ಷ್ಮಿದೇವಿ ದೇವಸ್ಥಾನ, ಶ್ರೀಚಾಮುಂಡೇಶ್ವರಿ ದೇವಾಲಯ, ಶ್ರೀಕ್ಷಣಾಂಭಿಕ ದೇವಾಲಯ, ಶ್ರೀ ನಿಮಿಷಾಂಬ ದೇವಿ ದೇವಾಲಯಗಳು ಸೇರಿದಂತೆ ಇಲ್ಲಿನ ಪ್ರಮುಖ ಶಕ್ತಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ ಅವರಿಗೆ ಪ್ರಸಾದ ನೀಡಿರುವುದಾಗಿ ತಿಳಿಸಿದರು.ಇದೇ ವೇಳೆ ವೇದಬ್ರಹ್ಮ ಡಾ.ಭಾನುಪ್ರಕಾಶ್ ಶರ್ಮಾ ನೇತೃತ್ವದ ವೈಧಿಕರ ತಂಡ ವೇದ ಘೋಷಗಳೊಂದಿಗೆ ಕುಮಾರಸ್ವಾಮಿ ಅವರ ಆರೋಗ್ಯ ವೃದ್ಧಿಗೆ ಪ್ರಾರ್ಥನೆ ಸಲ್ಲಿಸಿದರು. ಸಾವಿರಾರು ಅಭಿಮಾನಿಗಳು ಹಾಗೂ ಕಾರ್ಯಕರ್ತರು ಜಮಾವಣೆಗೊಂಡು ಬೃಹತ್ ಗಾತ್ರದ ಹೂವಿನ ಹಾರ ಹಾಕಿ, ಪಠಾಕಿ ಸಿಡಿಸಿ, ಸಿಹಿ ಹಂಚಿ ಕುಮಾರಸ್ವಾಮಿ ಅವರ ಹುಟ್ಟುಹಬ್ಬ ಆಚರಿಸಿದರು.
ಈ ವೇಳೆ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಮಾಜಿ ಶಾಸಕ ಸುರೇಶ್ ಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್, ಬಿ.ಆರ್. ರಾಮಚಂದ್ರು, ಪಿಇಟಿ ಅಧ್ಯಕ್ಷ ವಿಜಯಾನಂದ್, ಜಿಪಂ ಮಾಜಿ ಸದಸ್ಯ ಮರೀಗೌಡ, ತಾಲೂಕ ಜೆಡಿಎಸ್ ಅಧ್ಯಕ್ಷ ದಶರಥ, ಕಾರ್ಯಾಧ್ಯಕ್ಷ ತಿಲಕ್, ಮುಖಂಡರಾದ ನೆಲಮನೆ ದಯಾನಂದ್, ಕಿರಂಗೂರು ಗ್ರಾಪಂ ಮಾಜಿ ಅಧ್ಯಕ್ಷ ನಾರಾಯಣ್, ನಗುವನಹಳ್ಳಿ ಶಿವಸ್ವಾಮಿ, ಪುರಸಭೆ ಮಾಜಿ ಸದಸ್ಯ ಸಾಯಿಕುಮಾರ್, ಕೆ.ಶೆಟ್ಟಹಳ್ಳಿ ಯತೀಶ್, ನೆಲಮನೆ ಗುರುಪ್ರಸಾದ್, ಯುವ ಘಟಕ ಅಧ್ಯಕ್ಷ ಸಂಜಯ್, ಕೆ.ನಾರಾಯಣ್ ಸೇರಿದಂತೆ ಇತರರು ಉಪಸ್ಥಿತರಿದ್ದರು.