ಜೀತ ಪದ್ಧತಿ ನಿರ್ಮೂಲನೆಗೆ ಸಹಕಾರ ಅಗತ್ಯ: ನ್ಯಾ.ಎನ್.ವಿ. ವಿಜಯ

KannadaprabhaNewsNetwork |  
Published : Feb 10, 2024, 01:51 AM IST
(ಫೋಟೋ 9ಬಿಕೆಟಿ11 ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಅಂಗವಾಗಿ ಜಿಲ್ಲಾ ಪಂಚಾಯತ್ ಹಳೆಯ ಸಭಾಂಗಣದಲ್ಲಿ ಶುಕ್ರವಾರದಂದು ಹಮ್ಮಿಕೊಳ್ಳಲಾಗಿದ್ದ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮವನ್ನು ಉಧ್ಘಾಟಿಸಿ ಮಾತನಾಡಿದ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎನ್.ವಿ.ವಿಜಯ) | Kannada Prabha

ಸಾರಾಂಶ

ಬಾಗಲಕೋಟೆ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ ಜೀತ ಪದ್ಧತಿ ನಿರ್ಮೂಲನಾ ದಿನಾಚರಣೆ ಅಂಗವಾಗಿ ಜಿಲ್ಲಾ ಪಂಚಾಯತಿ ಹಳೆಯ ಸಭಾಂಗಣದಲ್ಲಿ ಶುಕ್ರವಾರ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಉದ್ಘಾಟಿಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎನ್.ವಿ.ವಿಜಯ, ಇಂದಿಗೂ ಕೂಡ ವಿವಿಧ ರೀತಿಯ ಜೀತ ಪದ್ಧತಿ ಕಾಣಬಹುದಾಗಿದ್ದು, ಜನರ ಸಹಕಾರ ನೀಡಿದಲ್ಲಿ ಜೀತ ಪದ್ಧತಿ ನಿರ್ಮೂಲನೆ ಸಾಧ್ಯವಾಗುತ್ತದೆ ಎಂದು ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಇಂದಿಗೂ ಕೂಡ ವಿವಿಧ ರೀತಿಯ ಜೀತ ಪದ್ಧತಿ ಕಾಣಬಹುದಾಗಿದ್ದು, ಜನರ ಸಹಕಾರ ನೀಡಿದಲ್ಲಿ ಜೀತ ಪದ್ಧತಿ ನಿರ್ಮೂಲನೆ ಸಾಧ್ಯವಾಗುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎನ್.ವಿ.ವಿಜಯ ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ ಜೀತ ಪದ್ಧತಿ ನಿರ್ಮೂಲನಾ ದಿನಾಚರಣೆ ಅಂಗವಾಗಿ ಜಿಲ್ಲಾ ಪಂಚಾಯತಿ ಹಳೆಯ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಉದ್ಘಾಟಸಿ ಮಾತನಾಡಿದ ಅವರು, ಒತ್ತಾಯ ಪೂರ್ವಕವಾಗಿ ಕೆಲಸಕ್ಕೆ ಇಟ್ಟುಕೊಳ್ಳುವುದು ಜೀತ ಪದ್ಧತಿಯಾಗಿದೆ. ಇಂತಹ ಹಿನಾಯ ಸ್ಥಿಯಲ್ಲಿರುವ ವ್ಯಕ್ತಿ, ಕಾರ್ಮಿಕರು ಕಂಡು ಬಂದಲ್ಲಿ ಕಾರ್ಮಿಕ ಇಲಾಖೆಗೆ ಮಾಹಿತಿ ನೀಡಬೇಕು. ಆರೋಗ್ಯಕರ ಸಮಾಜ ನಿರ್ಮಿಸುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದರು.

ಹಿರಿಯ ದಿವಾಣಿ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದ್ಯಾವಪ್ಪ ಎಸ್.ಬಿ ಮಾತನಾಡಿ, ಒಬ್ಬ ವ್ಯಕ್ತಿ ಇನ್ನೊಬ್ಬನ ಅಡಿ ಆಳಾಗಿ ದುಡಿಯುತ್ತ ಬದುಕುವುದೇ ಜೀತ ಪದ್ಧತಿ. ಉಳ್ಳವರ ಹತ್ತಿರ ಸಾಲ ಮಾಡಿ ಜೀತದಾಳುಗಳಾಗುವುದು ಬೇಡ. ವಿವಿಧ ಯೋಜನೆಯಡಿ ದೊರೆಯುವ ಸಾಲ ಸೌಲಭ್ಯ ಪಡೆದು ಸ್ವಾವಲಂಬಿಗಳಾಗಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹ ಅಧಿಕಾರಿ ಶಶಿಧರ ಕುರೇರ್ ಮಾತನಾಡಿ, 1976ರ ಫೆ.9 ರಂದು ದೇಶದಲ್ಲಿ ಜೀತ ಪದ್ಧತಿ (ರದ್ದತಿ) ನಿರ್ಮೂಲನೆ ಕಾಯಿದೆ ಜಾರಿಗೆ ತರಲಾಯಿತು. ಆಗ ದೇಶವು 3.15 ಲಕ್ಷ ಜೀತ ಕಾರ್ಮಿಕರನ್ನು ಹೊಂದಿತ್ತು. ಈ ಪೈಕಿ ಶೇ.84 ರಷ್ಟು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರೇ ಇದ್ದಿದ್ದು ವಿಷಾಧನೀಯ. ವಿಷಯ ಅತೀ ಹೆಚ್ಚು ಜೀತಕಾರ್ಮಿಕ ಪ್ರಕರಣಗಳು ಕಂಡು ಬಂದ ರಾಜ್ಯಗಳಲಿ ಕರ್ನಾಟಕವು ಒಂದಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರತಿ ವರ್ಷ ಫೆ.9 ರಂದು ಜೀತಕಾರ್ಮಿಕ ಪದ್ಧತಿ ನಿರ್ಮೂಲನಾ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ. ಕಾರ್ಮಿಕ ವರ್ಗದವರು ಸರ್ಕಾರದ ವಿವಿಧ ಯೋಜನೆಯಡಿ ದೊರೆಯುವ ಸೌಲಭ್ಯಗಳನ್ನು ಪಡೆದು ಆರ್ಥಿಕವಾಗಿ ಸಬಲರಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಡಿ.ಬಿ.ಪೂಜಾರ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ್ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ್ ಸೇರಿದಂತೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

500 ನಾಯಿಗಳಿಗೆ ಚಿಕನ್‌ ರೈಸ್ ನೀಡಲು ವರ್ಷಕ್ಕೆ 1.83 ಕೋಟಿ
ಯಲಹಂಕದಲ್ಲಿ ‘ಚೀನಾದ ಹ್ಯಾಂಗ್‌ಝೌ’ ಮಾದರಿ ರೈಲು ನಿಲ್ದಾಣ