ಡೆಂಘೀ ನಿಯಂತ್ರಣಕ್ಕೆ ಪೋಷಕರು, ಶಿಕ್ಷಕರ ಸಹಕಾರ ಅಗತ್ಯ: ಡಾ.ಪುಷ್ಪಲತಾ

KannadaprabhaNewsNetwork |  
Published : Jul 30, 2024, 12:31 AM IST
29ಎಚ್ಎಸ್ಎನ್6 : ಅರಕಲಗೂಡು ತಾಲೂಕು ಹೊನ್ನವಳ್ಳಿ ಗ್ರಾಮದ ಹೇಮಾವತಿ ಪ್ರೌಢಶಾಲೆಯಲ್ಲಿ ಆರೋಗ್ಯ ಇಲಾಖೆ ವತಿಯಿಂದ ಆರೋಗ್ಯ ಜಾಗೃತಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಂಡು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು. | Kannada Prabha

ಸಾರಾಂಶ

Cooperation, parents, teachers, necessary, control, dengue, Dr. Pushpalatha,hassana, health, dengue, maleria, deasise, karnatakagovernment

ಅರಕಲಗೂಡು: ಮಹಾಮಾರಿ ಡೆಂಘೀ ಹಾಗೂ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರಿಂದಲೂ ಸಹಕಾರ ಬೇಕಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಪುಷ್ಪಲತಾ ತಿಳಿಸಿದರು.

ತಾಲೂಕಿನ ಹೊನ್ನವಳ್ಳಿ ಗ್ರಾಮದ ಹೇಮಾವತಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಆರೋಗ್ಯ ಶಿಕ್ಷಣ ಕುರಿತ ಕಾರ್ಯಕ್ರಮದಲ್ಲಿ ಮಾತನಾಡಿ, ಇತ್ತೀಚೆಗೆ ಡೆಂಘೀ ಸೇರಿ ವಿವಿಧ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ಹೀಗಾಗಿ ಸಾರ್ವಜನಿಕರು ಮನೆಗಳ ಸುತ್ತ ಬೆಳೆದಿರುವ ಗಿಡ-ಗಂಟಿಗಳನ್ನು ತೆರವುಗೊಳಿಸಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ನಮ್ಮ ಆರೋಗ್ಯ ನಮ್ಮ ಕೈಯಲ್ಲಿಯೇ ಇದೆ ಎಂದು ತಿಳಿಸಿದರು.

ಗ್ರಾಮಗಳು, ಶಾಲಾ- ಕಾಲೇಜುಗಳಲ್ಲಿ ಸ್ಥಳೀಯ ಗ್ರಾಪಂ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಡೆಂಘೀ, ಮಲೇರಿಯಾ ಹಾಗೂ ಝೀಕಾವೈರಸ್ ಬಗ್ಗೆ ಜಾಗೃತಿ ಅಭಿಯಾನ ಹಮ್ಮಿಕೊಂಡು ಅರಿವು ಮೂಡಿಸಲಾಗುತ್ತಿದೆ. ಮನೆ ಹಾಗೂ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛತೆಯಿಂದ ಕಾಪಾಡಿಕೊಂಡಲ್ಲಿ ಮಾತ್ರ ಡೆಂಘೀ ಹಾಗೂ ಇತರೆ ಸಾಂಕ್ರಮಿಕ ರೋಗಗಳನ್ನು ನಿಯಂತ್ರಿಸಲು ಸಾಧ್ಯ ಎಂದರು.

ಆರೋಗ್ಯ ನಿರೀಕ್ಷಣಾಧಿಕಾರಿ ವಿಷ್ಣುಪ್ರಕಾಶ್, ಚಂದ್ರೇಗೌಡ, ಪರಮೇಶ್ ಮಾತನಾಡಿ, ಸಾರ್ವಜನಿಕರು ಮನೆಗಳ ಸುತ್ತ ವ್ಯರ್ಥವಾಗಿ ಬಿದ್ದಿರುವ ವೇಸ್ಟ್ ಬಾಟಲ್, ಟೈರ್, ಚಿಪ್ಪು, ಕಾಯಿಮೊಟ್ಟೆ ಹಾಗೂ ಮಡಿಕೆ ಚೂರುಗಳಿದ್ದರೆ ತೆರವುಗೊಳಿಸಬೇಕು. ಮನೆ ಬಳಕೆಗೆಂದು ನೀರು ಸಂಗ್ರಹಿಸುವ ತೆರೆದ ನೀರಿನ ತೊಟ್ಟಿಗಳ ಮುಚ್ಚಳ ಮುಚ್ಚಬೇಕು. ಅಲ್ಲದೆ ವಾರದಲ್ಲಿ ಎರಡು ಬಾರಿ ತೊಳೆದು ಸ್ವಚ್ಛಗೊಳಿಸುವುದರ ಜತೆಗೆ ನೀರು ಬದಲಿಸಬೇಕು. ಆರೋಗ್ಯ ಇಲಾಖೆಯ ಮಾಹಿತಿಗಳನ್ನು ಸಾರ್ವಜನಿಕರು ಸರಿಯಾಗಿ ಪಾಲಿಸಿ ರೋಗಗಳಿಂದ ಮುಕ್ತಿ ಪಡೆಯಬಹುದು ಎಂದು ಸಲಹೆ ನೀಡಿದರು.

ಶಾಲೆಯ ಮುಖ್ಯ ಶಿಕ್ಷಕ ಮಂಜೇಗೌಡ, ದೈಹಿಕ ಶಿಕ್ಷಕ ಸಂಜೀವ್‌ಕುಮಾರ್, ಸಹ ಶಿಕ್ಷಕರಾದ ರವಿಕುಮಾರ್, ರಾಘವೇಂದ್ರ ಗಾಜಿ, ಗಿರೀಶ್, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಸ್ವಯಂ ಸೇವಕರು ಹಾಜರಿದ್ದರು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...