ಕನ್ನಡಪ್ರಭ ವಾರ್ತೆ ಚಾಮರಾಜನಗರ
ಚಾಮರಾಜನಗರ ತಾಲೂಕು ಕುದೇರಿನಲ್ಲಿರುವ ಚಾಮುಲ್‌ನಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, 72ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ನ. 14ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟಿಸಲಿದ್ದು, ಅದರ ಸಮಾರೋಪವನ್ನು ಚಾಮರಾಜನಗರದಲ್ಲಿ ಮಾಡಲು ನಿರ್ಧರಿಸಿದ್ದೇವೆ. ಮೈಸೂರು ವಿಭಾಗದಿಂದ ನಡೆಯುವ ಈ ಕಾರ್ಯಕ್ರಮಕ್ಕೆ ಸುಮಾರು 30 ಸಾವಿರ ಜನರು ಬರುವ ನಿರೀಕ್ಷೆ ಇದ್ದು, ಸಿದ್ಧತೆಯನ್ನು ಮಾಡಲು 10 ಸಮಿತಿಗಳನ್ನು ರಚಿಸಲಾಗಿದ್ದು, ಆಯಾ ಸಮಿತಿಯವರು ಅವರಿಗೆ ಕೊಟ್ಟಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ವಸ್ತು ಪ್ರದರ್ಶನದ ವ್ಯವಸ್ಥೆ, ವಿಷಯ ತಜ್ಞರಿಂದ ಉಪನ್ಯಾಸ ಕಾರ್ಯಕ್ರಮಗಳು ನಡೆಯುತ್ತವೆ. ಒಟ್ಟಾರೆಯಾಗಿ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಸಹಕರಿಸಬೇಕು ಎಂದರು.
ಸಮಾರಂಭಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್, ಸಮಾಜ ಕಲ್ಯಾಣ ಸಚಿವ ಡಾ. ಎಚ್. ಸಿ. ಮಹದೇವಪ್ಪ, ಲೋಕಸಭಾ ಸದಸ್ಯ ಸುನಿಲ್ ಬೋಸ್ ಸೇರಿದಂತೆ ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು, ನಿಗಮ ಮಂಡಳಿಯ ಅಧ್ಯಕ್ಷರು ಆಗಮಿಸಲಿದ್ದಾರೆಂದು ತಿಳಿಸಿದರು.