ಇಂದಿನಿಂದ 14ರ ವರೆಗೆ ಸಹಾಕರ ಸಪ್ತಾಹ: ಜಯಕರ ಶೆಟ್ಟಿ ಇಂದ್ರಾಳಿ

KannadaprabhaNewsNetwork |  
Published : Nov 14, 2025, 03:45 AM IST
13ಜಯಕರಸಹಕಾರ ಸಪ್ತಾಹದ ಬಗ್ಗೆ ಜಯಕರ ಶೆಟ್ಟಿ ಇಂದ್ರಾಳಿ ಮಾಹಿತಿ ನೀಡಿದರು | Kannada Prabha

ಸಾರಾಂಶ

ಬೆಳಗ್ಗೆ 10.30ಕ್ಕೆ ಮಂದಾರ್ತಿಯ ಶ್ರೀದುರ್ಗಾ ಸಹಕಾರ ಸೌಧದಲ್ಲಿ ಸಹಕಾರ ಸಪ್ತಾಹವನ್ನು ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ. ಕುಂದಾಪುರ ಶಾಸಕ ಕಿರಣ್‌ಕುಮಾರ್ ಕೊಡ್ಲಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಭಾ ಕಾರ್ಯಕ್ರಮಕ್ಕೂ ಮೊದಲು ಒಂದು ವಾರ ಜಿಲ್ಲಾದ್ಯಂತ ಸಂಚರಿಸುವ ಸಹಕಾರ ರಥಕ್ಕೆ ಚಾಲನೆ ನೀಡಲಾಗುವುದು.

ಕನ್ನಡಪ್ರಭ ವಾರ್ತೆ ಉಡುಪಿ

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಸಹಕಾರ ಇಲಾಖೆ ಹಾಗೂ ಉಡುಪಿ ಜಿಲ್ಲೆಯ ವಿವಿಧ ಸಹಕಾರ ಸಂಸ್ಥೆಗಳ ಸಹಯೋಗದೊಂದಿಗೆ ಇಂದಿನಿಂದ (ನ.14ರಿಂದ) ನ.20ರ ವರೆಗೆ ಉಡುಪಿ ಜಿಲ್ಲಾದ್ಯಂತ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದು ಬೆಳಗ್ಗೆ 10.30ಕ್ಕೆ ಮಂದಾರ್ತಿಯ ಶ್ರೀದುರ್ಗಾ ಸಹಕಾರ ಸೌಧದಲ್ಲಿ ಸಹಕಾರ ಸಪ್ತಾಹವನ್ನು ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ. ಕುಂದಾಪುರ ಶಾಸಕ ಕಿರಣ್‌ಕುಮಾರ್ ಕೊಡ್ಲಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಭಾ ಕಾರ್ಯಕ್ರಮಕ್ಕೂ ಮೊದಲು ಒಂದು ವಾರ ಜಿಲ್ಲಾದ್ಯಂತ ಸಂಚರಿಸುವ ಸಹಕಾರ ರಥಕ್ಕೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.ನ.15ರಂದು ಮಧ್ಯಾಹ್ನ 3 ಗಂಟೆಗೆ ಹೆಮ್ಮಾಡಿಯ ಮತ್ಸ್ಯಜ್ಯೋತಿ ಸಭಾಂಗಣದಲ್ಲಿ ‘ಸಹಕಾರ ಶಿಕ್ಷಣದಲ್ಲಿ ಪರಿವರ್ತನೆ’, ನ.16ರಂದು ಬೆಳಗ್ಗೆ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ‘ಸಹಕಾರ ಸಂಸ್ಥೆಗಳ ಮೂಲಕ ಗ್ರಾಮೀಣ ಅಭಿವೃದ್ಧಿಯ ಬಲವರ್ಧನೆ’, ನ.17ರಂದು ಬೆಳಗ್ಗೆ 9.30ಕ್ಕೆ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯಲ್ಲಿ ‘ರಾಷ್ಟ್ರೀಯ ಸಹಕಾರ ನೀತಿಯ ಪರಿಸರ ವ್ಯವಸ್ಥೆ ಭಾರತದ ಸಹಕಾರ ಸಂಸ್ಥೆಗಳ ರಚನಾತ್ಮಕ ಮಾರ್ಗಸೂಚಿ’, ನ.18ರಂದು ಮಧ್ಯಾಹ್ನ 3 ಗಂಟೆಗೆ ಕೊರಂಗ್ರಪಾಡಿ ಸಹಕಾರಿ ವ್ಯವಸಾಯಿಕ ಸಂಘದಲ್ಲಿ ‘ಸಹಕಾರಿ ಉದ್ಯಮ ಶೀಲತೆಯಿಂದ ಯುವಜನ, ಮಹಿಳಾ ಮತ್ತು ಅಬಲ ವರ್ಗದ ಸಬಲೀಕರಣ’ ಎಂಬ ಬಗ್ಗೆ ಕಾರ್ಯಾಗಾರಗಳು ನಡೆಯಲಿವೆ.ನ.19ರಂದು ಬೆಳಗ್ಗೆ 10.30ಕ್ಕೆ ಹೆಬ್ರಿಯ ಬಂಟರ ಭವನದಲ್ಲಿ ‘ಪ್ರವಾಸೋದ್ಯಮ, ಆರೋಗ್ಯ, ಹಸಿರು ಇಂಧನ, ಫ್ಲಾಟ್ ಫಾರಂ ಸಹಕಾರಿ ಸಂಸ್ಥೆಗಳು, ಕಿಚನ್ ಸಹಕಾರ ಸಂಘಗಳು ಮತ್ತಿತರ ಉದಯೋನ್ಮುಖ ಸಹಕಾರ ಸಂಘಗಳನ್ನು ಅನುಕೂಲಕರ ಪ್ರದೇಶಗಳಿಗೆ ವಿಸ್ತರಣೆ’, 20ರಂದು ಬೆಳಗ್ಗೆ 10.30ಕ್ಕೆ ನಾಗೂರು ಒಡೆಯರಮಠ ಶ್ರೀಗೋಪಾಲಕೃಷ್ಣ ಕಲಾಮಂದಿರದಲ್ಲಿ ‘ಜಾಗತಿಕ ಸ್ಪರ್ಧಾತ್ಮಕತೆಗಾಗಿ ನವನವೀನ್ಯತೆಯ ಸಹಕಾರಿ ವ್ಯವಹಾರದ ಮಾದರಿಗಳು’ ಎಂಬ ವಿಷಯದೊಂದಿಗೆ ಸಪ್ತಾಹದ ಸಮಾರೋಪ ಸಮಾರಂಭ ನಡೆಯಲಿದೆ ಎಂಬವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಸಹಕಾರ ಯೂನಿಯನ್ ನಿರ್ದೇಶಕರಾದ ಹರೀಶ್ ಕಿಣಿ ಅಲೆವೂರು, ಸುಧೀರ್ ಕುಮಾರ್, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅನುಷಾ ಕೋಟ್ಯಾನ್, ಮ್ಯಾನೇಜರ್ ವಿಶ್ವನಾಥ್‌ ಇದ್ದರು.

PREV

Recommended Stories

ಮೊಬೈಲ್‌ ಬಳಕೆ : ಉಗ್ರ, ವಿಕೃತ ಕಾಮಿಗೀಗ ಗ್ರಿಲ್‌
ಸುಪ್ರೀಂನಲ್ಲಿ ರಾಜ್ಯಕ್ಕೆ ಮೇಕೆದಾಟು ವಿಜಯ - ಯೋಜನೆ ಪ್ರಶ್ನಿಸಿದ್ದ ತಮಿಳುನಾಡು ಅರ್ಜಿ ವಜಾ