ಕನ್ನಡಪ್ರಭ ವಾರ್ತೆ ಬೆಂಗಳೂರು
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಹಕಾರ ಸಪ್ತಾಹವು ಸಹಕಾರಿಗಳಿಗೆ ಹಬ್ಬವಿದ್ದಂತೆ. ಸಾವಿರಾರು ಸಹಕಾರಿಗಳು ಸಹಕಾರ ಚಳವಳಿಯ ಸಾಧನೆ-ವೈಫಲ್ಯಗಳ ಕುರಿತು ಜನರಿಗೆ ಮನವರಿಕೆ ಮಾಡಿಕೊಡಲಿದ್ದಾರೆ. 7 ದಿನಗಳ ಕಾಲ ವಿವಿಧ ವಿಷಯಗಳ ತಜ್ಞ ಉಪನ್ಯಾಸಕರಿಂದ ಉಪನ್ಯಾಸ ಕಾರ್ಯಕ್ರಮಗಳು ನಡೆಯಲಿವೆ. ಜತೆಗೆ ರಾಜ್ಯ ಮತ್ತು ಜಿಲ್ಲಾಮಟ್ಟದಲ್ಲಿ ಸಹಕಾರ ಸಂಘಗಳು ವಿವಿಧ ಕಾರ್ಯಕ್ರಮಗಳನ್ನು ನಡೆಸಿಕೊಡಲಾಗುತ್ತದೆ. ಈ ಬಾರಿ ಆತ್ಮನಿರ್ಭರ ಭಾರತ ಸಾಧನೆಗೆ ವಾಹಕಗಳಾಗಿ ಸಹಕಾರ ಸಂಸ್ಥೆಗಳು ಎಂಬ ವಿಷಯದ ಅಡಿ ಕಾರ್ಯಕ್ರಮಗಳು ನಡೆಯಲಿವೆ ಎಂದರು.
ಶುಕ್ರವಾರ ಕಾರ್ಯಕ್ರಮ ಉದ್ಘಾಟನೆ ವೇಳೆ ಸಹಕಾರ ಕ್ಷೇತ್ರದಲ್ಲಿ ಸಾಧನೆ ಮಾಡಿದ 70ಕ್ಕೂ ಹೆಚ್ಚು ಮಂದಿಗೆ ‘ಸಹಕಾರ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಚಿವರಾದ ಕೆ.ಎನ್.ರಾಜಣ್ಣ, ಎಸ್.ಟಿ. ಸೋಮಶೇಖರ್, ಶಾಸಕ ಕೆ.ಷಡಕ್ಷರಿ ಸೇರಿ ಹಲವು ಗಣ್ಯರು ಉಪಸ್ಥಿತರಿರಲಿದ್ದಾರೆ ಎಂದು ಮಾಹಿತಿ ನೀಡಿದರು.ನ.15ರಂದು ರಾಯಚೂರು, ನ.16ರಂದು ಮಂಗಳೂರು, ನ.17ರಂದು ಹೊಸಪೇಟೆ, ನ.18ರಂದು ಹಾವೇರಿ, ನ.19ರಂದು ಕೊಪ್ಪಳ ಮತ್ತು ನ.20ರಂದು ಚಾಮರಾಜನಗರದಲ್ಲಿ ರಾಜ್ಯಮಟ್ಟದ ಸಹಕಾರ ಸಪ್ತಾಹ ನಡೆಯಲಿದೆ. ಸಹಕಾರ ಸಪ್ತಾಹದ ಅಂಗವಾಗಿ ಅಂತಾರಾಷ್ಟ್ರೀಯ ಸಹಕಾರ ಚಳವಳಿಯ ಮುಖಂಡತ್ವ ವಹಿಸಿದ್ದ ಬಿ.ಎಸ್.ವಿಶ್ವನಾಥ್ ಅವರ ಕಂಚಿನ ಪುತ್ಥಳಿಯನ್ನು ಸಹಕಾರ ಮಹಾಮಂಡಳ ಕಚೇರಿ ಮುಂಭಾಗದಲ್ಲಿ ಇಡಲಾಗುವುದು. ಅದನ್ನು ಸಿಎಂ ಸಿದ್ದರಾಮಯ್ಯ ಅನಾವರಣಗೊಳಿಸಲಿದ್ದಾರೆ ಎಂದು ಹೇಳಿದರು.
---
ಸಹಕಾರ ಕ್ಷೇತ್ರದ ಕುರಿತು ಈಗಿನ ಯುವ ಪೀಳಿಗೆಗೆ ತಿಳಿಸಲು ಪದವಿ ಪೂರ್ವ ಅಥವಾ ಪದವಿ ಪಠ್ಯದಲ್ಲಿ ಸಹಕಾರ ವಿಷಯ ಸೇರ್ಪಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಲಾಗುವುದು. ಅದರ ಜತೆ ಸಹಕಾರ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ 2 ಲಕ್ಷ ಸಿಬ್ಬಂದಿಯನ್ನು ಕಾಯಂ ಮಾಡಬೇಕು ಎಂದು ಆಗ್ರಹಿಸಲಾಗುವುದು ಎಂದು ಜಿ.ಟಿ. ದೇವೇಗೌಡ ಹೇಳಿದರು.===
ನ.14: ಬೆಂಗಳೂರು- ಕಾರ್ಯದಕ್ಷತೆ, ಉತ್ತರದಾಯಿತ್ವ ಮತ್ತು ಪಾರದರ್ಶಕತೆ ಹೆಚ್ಚಿಸಲು ಡಿಜಟಲೀಕರಣಕ್ಕೆ ಪ್ರೋತ್ಸಾಹಿಸುವುದು.
ನ.16: ಮಂಗಳೂರು-ಸಹಕಾರ ಸಂಸ್ಥೆಗಳ ಮೂಲಕ ಗ್ರಾಮೀಣ ಅಭಿವೃದ್ಧಿ.
ನ.18: ಹಾವೇರಿ-ಸಹಕಾರಿ ಉದ್ಯಮಶೀಲತೆಯಿಂದ ಯುವಜನ, ಮಹಿಳಾ ಮತ್ತು ಅಬಲ ವರ್ಗದ ಸಬಲೀಕರಣ.
ನ.20: ಚಾಮರಾಜನಗರ-ಜಾಗತಿಕ ಸ್ಪರ್ಧಾತ್ಮಕತೆಗಾಗಿ ನವನಾವೀನ್ಯತೆಯ ಸಹಕಾರಿ ವ್ಯವಹಾರದ ಮಾದರಿಗಳು.