ರಾಮನಗರ: ಅಭಿವೃದ್ಧಿ ವಿಚಾರದಲ್ಲಿ ಹಿಂದುಳಿದಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಕೆಡವಲು ನಾವು ಬಿಜೆಪಿಗೆ ಸಹಕಾರ ನೀಡಬೇಕು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಜೆಡಿಎಸ್ ಶಾಸಕರು, ಮುಖಂಡರು ಮತ್ತು ಕಾರ್ಯಕರ್ತರಿಗೆ ಸಲಹೆ ನೀಡಿದರು.
ರಾಮನಗರ: ಅಭಿವೃದ್ಧಿ ವಿಚಾರದಲ್ಲಿ ಹಿಂದುಳಿದಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಕೆಡವಲು ನಾವು ಬಿಜೆಪಿಗೆ ಸಹಕಾರ ನೀಡಬೇಕು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಜೆಡಿಎಸ್ ಶಾಸಕರು, ಮುಖಂಡರು ಮತ್ತು ಕಾರ್ಯಕರ್ತರಿಗೆ ಸಲಹೆ ನೀಡಿದರು.
ಬಿಡದಿ ಬಳಿಯ ಕೇತಿಗಾನಹಳ್ಳಿ ತೋಟದ ಮನೆಯಲ್ಲಿ ನಡೆದ ಜೆಡಿಎಸ್ ಪಕ್ಷದ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಸಚಿವರು, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
2018ರಲ್ಲಿ 2013ರಿಂದ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ 75 ಸ್ಥಾನಗಳಿಗೆ ಕುಸಿಯಿತು. ಸಾಮಾನ್ಯ ಚುನಾವಣೆಯ ಚಿತ್ರಣವೇ ಬೇರೆ, ಉಪಚುನಾವಣೆ ಚಿತ್ರಣವೇ ಬೇರೆಯಾಗಿದೆ. ಸ್ವತಃ ಅವರ ಪಕ್ಷದ ಶಾಸಕರೇ ಅಭಿವೃದ್ಧಿಗೆ ಹಣವಿಲ್ಲ ಎಂದು ಸ್ಪಷ್ಟವಾಗಿ ಹೇಳುತ್ತಿದ್ದಾರೆ. ಈ ಸರ್ಕಾರವನ್ನು ಕೆಡವಲು ನಾವು ಬಿಜೆಪಿಯೊಂದಿಗೆ ನಿಲ್ಲಬೇಕಿದೆ ಎಂದು ತಿಳಿಸಿದರು.
ಪಕ್ಷ ಬಲವರ್ಧನೆ ಮತ್ತು ಸಂಘಟನೆಯ ದೃಷ್ಟಿಯಿಂದ ರಾಜ್ಯಾದ್ಯಂತ ಮತ್ತೆ ಸದಸ್ಯತ್ವ ನೋಂದಣಿ ಪುನಾರಂಭವಾಗಬೇಕು. ನೀವು ಪಟ್ಟ ಶ್ರಮದಿಂದ ಜೆಡಿಎಸ್ ಪಕ್ಷಕ್ಕೆ ಮತ್ತಷ್ಟು ಬಲ ಬಂದಿದೆ. ಇದು ಮುಂದಿನ ಸವಾಲುಗಳಿಗೆ ತಯಾರಾಗಲು ಸೂಚನೆ ಎಂದರು. ಪ್ರತಿ ಬೂತ್‌ಗಳಲ್ಲಿ ಸದಸ್ಯತ್ವ ನೋಂದಣಿ ಚಾಲನೆ ಆಗಬೇಕು. ಇನ್ನು ಕೆಲವು ಜಿಲ್ಲೆಗಳಲ್ಲಿ ಸದಸ್ಯತ್ವ ಚಾಲನೆ ನಿಂತಿದೆ ಅದನ್ನು ಮತ್ತೆ ಆರಂಭಿಸಬೇಕು. ಉಪಚುನಾವಣೆ ಫಲಿತಾಂಶಗಳು ಪಕ್ಷದ ಭವಿಷ್ಯವನ್ನು ತೀರ್ಮಾನಿಸುವುದಿಲ್ಲ ಸಚಿವರು ತಿಳಿಸಿದರು.
ಜೆಡಿಎಸ್ ಎಂದಿಗೂ ಹಿಂದಕ್ಕೆ ಬಿದ್ದಿಲ್ಲ :
ಜೆಡಿಎಸ್ ಪಕ್ಷ ಎಂದಿಗೂ ಹಿಂದಕ್ಕೆ ಬಿದ್ದಿಲ್ಲ. ದೇವೇಗೌಡರು ಸಿಎಂ ಆದರು, ನಂತರ ಪ್ರಧಾನಿ ಆದರು. ಈಗ 2023ರ ಚುನಾವಣೆಯಲ್ಲಿ ಕೇವಲ 18 ಸ್ಥಾನಗಳನ್ನು ಗೆದ್ದಿದ್ದರೂ ನಾನು ಕೇಂದ್ರ ಸಚಿವನಾಗಿದ್ದೇನೆ. ಪ್ರಧಾನಮಂತ್ರಿ ಮೋದಿ ಹೆಮ್ಮೆ ಪಡುವಂತೆ ಕೆಲಸ ಮಾಡಬೇಕು ಎಂದು ಅವರು, ನನಗೆ ಮಾರ್ಗದರ್ಶನ ನೀಡಿದರು. ನಾನು ಆ ಜವಾಬ್ದಾರಿಯನ್ನು ಪರಿಶ್ರಮದಿಂದ ಪೂರೈಸುತ್ತಿದ್ದೇನೆ ಎಂದು ಕುಮಾರಸ್ವಾಮಿ ತಿಳಿಸಿದರು.
ನಿಖಿಲ್ ಭವಿಷ್ಯದ ನಾಯಕ:
ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ನನ್ನ ಮಗನಾಗಿರುವುದರಿಂದ ನಾನು ಮಾತನಾಡುತ್ತಿಲ್ಲ. ಅವರಿಗಿರುವ ಗುಣದ ಬಗ್ಗೆ ಮಾತಾಡುತ್ತೇನೆ. ಇಂದು ನಾನು ಅವರನ್ನು ಪಕ್ಷಕ್ಕೆ ಒಪ್ಪಿಸುತ್ತಿದ್ದೇನೆ. ಅವನನ್ನು ಮಾರ್ಗದರ್ಶನ ಮಾಡುವ ಜವಾಬ್ದಾರಿ ನಿಮಗೆ ಇದೆ ಎಂದು ಹೇಳಿದರು.
ಸಂಘಟನೆಯ ಏಕತೆ ಮತ್ತು ಸ್ಥಳೀಯ ಸಂಸ್ಥೆ ಚುನಾವಣೆ ತಯಾರಿ:
ಪಕ್ಷದಲ್ಲಿ ಅಸಮಾಧಾನಗಳಿದ್ದರೆ, ಅವನ್ನು ಬಗೆಹರಿಸಿಕೊಳ್ಳಿ. ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಗೆಲ್ಲುವ ದೃಷ್ಟಿಯಿಂದ ಮುಖ್ಯ. ನಮ್ಮ ಪಕ್ಷ ಕಾರ್ಯಕರ್ತರಿಗೋಸ್ಕರ ಇರುವ ಪಕ್ಷ. ಎಲ್ಲ ಸಮುದಾಯಗಳನ್ನು ನಮ್ಮೊಂದಿಗೆ ಕೊಂಡೊಯ್ಯಲು ಬದ್ಧರಾಗಿದ್ದೇವೆ. ನಾವು ಒಗ್ಗಟ್ಟಿನಿಂದ ಇದ್ದರೆ, ನಮ್ಮ ಪಕ್ಷವನ್ನು ಯಾವುದೇ ಶಕ್ತಿಗಳು ಅಂತ್ಯಗೊಳಿಸಲಾರವು ಎಂದು ಕುಮಾರಸ್ವಾಮಿ ಖಚಿತಪಡಿಸಿದರು.
ಸಭೆಯಲ್ಲಿ ಬಂಡೆಪ್ಪ ಖಾಶೆಂಪುರ್, ಹೆಚ್.ಕೆ ಕುಮಾರಸ್ವಾಮಿ, ಸಾ.ರಾ.ಮಹೇಶ್, ಸುರೇಶ ಬಾಬು, ಸಿಎಸ್ ಪುಟ್ಟರಾಜು, ಸಮೃದ್ಧಿ ಮಂಜುನಾಥ, ನಿಖಿಲ್ ಕುಮಾರಸ್ವಾಮಿ, ಬಾಲಕೃಷ್ಣ, ಶಾರದಾ ನಾಯಕ್, ಲೀಲಾದೇವಿ ಪ್ರಸಾದ್, ಎಂಟಿ ಕೃಷ್ಣಪ್ಪ, ಜಿ.ಟಿ.ಹರೀಶ್‌ಗೌಡ, ಮಂಜೇಗೌಡ, ರಮೇಶ್‌ಗೌಡ, ತಿಪ್ಪೇಸ್ವಾಮಿ ಮತ್ತು ನಾಗರಾಜಯ್ಯ ಸೇರಿದಂತೆ ಹಲವು ಪ್ರಮುಖ ನಾಯಕರು ಉಪಸ್ಥಿತರಿದ್ದರು.
ಸಭೆ ಪಕ್ಷವನ್ನು ಬಲಪಡಿಸುವ ಮತ್ತು ಮುಂದಿನ ಸವಾಲುಗಳಿಗೆ ತಯಾರಾಗುವ ನವೀಕೃತ ನಿಶ್ಚಯದೊಂದಿಗೆ ಕೊನೆಗೊಂಡಿತು.
1ಕೆಆರ್ ಎಂಎನ್ 7,8.ಜೆಪಿಜಿ
7.ಬಿಡದಿ ಬಳಿಯ ಕೇತಗಾನಹಳ್ಳಿ ತೋಟದ ಮನೆಯಲ್ಲಿ ನಡೆದ ಜೆಡಿಎಸ್ ಪಕ್ಷದ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಸಚಿವರು , ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರುಗಳ ಸಭೆಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಮಾತನಾಡಿದರು.
8.ಬಿಡದಿ ಬಳಿಯ ಕೇತಗಾನಹಳ್ಳಿ ತೋಟದ ಮನೆಯಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಹಾಗೂ ಜೆಡಿಎಸ್ ಪಕ್ಷದ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಸಚಿವರು , ಪಕ್ಷದ ಮುಖಂಡರು ಪಾಲ್ಗೊಂಡಿರುವುದು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.