ನಬಾರ್ಡ್ ಪ್ರಾಯೋಜಕತ್ವದಲ್ಲಿ ಸಹಕಾರ ಬ್ಯಾಂಕ್‌ ಅಭಿವೃದ್ಧಿ: ಕೊಡಂದೇರ ಪಿ.ಗಣಪತಿ

KannadaprabhaNewsNetwork |  
Published : Nov 25, 2025, 03:00 AM IST
ಸಹಕಾರಿ | Kannada Prabha

ಸಾರಾಂಶ

ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಸಹಕಾರ ಯೂನಿಯನ್‌ ಅಧ್ಯಕ್ಷ ಪಿ ಯು ರಾಬಿನ್‌ ದೇವಯ್ಯ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಸೋಮವಾರಪೇಟೆ

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಹಾಗೂ ಸೋಮವಾರಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಈಚೆಗೆ ಮಹಿಳಾ ಸಹಕಾರ ಸಮಾಜದ ಸಭಾಂಗಣದಲ್ಲಿ ರಾಷ್ಟ್ರೀಯ ಸಹಕಾರ ನೀತಿಯ ಪರಿಸರ ವ್ಯವಸ್ಥೆ ಭಾರತದ ಸಹಕಾರ ಸಂಸ್ಥೆಗಳಿಗೆ ರಚನಾತ್ಮಕ ಮಾರ್ಗಸೂಚಿ ದಿನಾಚರಣೆ ನಡೆಯಿತು. ಹಿರಿಯ ಸಹಕಾರಿಗಳಿಗೆ ಸನ್ಮಾನ ನಡೆಸಿದ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಕೊಡಂದೇರ ಪಿ.ಗಣಪತಿ ಅವರು ಮಾತನಾಡಿ ಸಹಕಾರ ಸಂಘಗಳ ಬ್ಯಾಂಕ್‌ನಲ್ಲಿ ಏಕರೂಪದ ತಂತ್ರಾಂಶ ಅಳವಡಿಸಿಕೊಳ್ಳಲಾಗಿದೆ. ಇದರೊಂದಿಗೆ ರಾಷ್ಟ್ರೀಕೃತ ಬ್ಯಾಂಕ್ ಮಾದರಿಯಲ್ಲಿ ಸಹಕಾರ ಬ್ಯಾಂಕ್ ಗಳಲ್ಲಿಯೂ ಡಿಜಿಟಲೀಕರಣಕ್ಕೆ ಮಾಡಲಾಗುತ್ತಿದೆ. ನಬಾರ್ಡ್ ಪ್ರಾಯೋಜಕತ್ವದಲ್ಲಿ ಸಹಕಾರ ಬ್ಯಾಂಕನ್ನು ಇನ್ನೂ ಹೆಚ್ಚಿನ ಅಭಿವೃದ್ಧಿ ಮಾಡಲಾಗುತ್ತದೆ. ಸಹಕಾರ ಬ್ಯಾಂಕ್ ಗಳಲ್ಲಿ ಪಾರದರ್ಶಕತೆ ಅಳವಡಿಸಿಕೊಂಡು ಬ್ಯಾಂಕುಗಳನ್ನು ಮತ್ತಷ್ಟು ಅಭಿವೃದ್ಧಿ ಪಡಿಸಲಾಗುತ್ತದೆ. ಎಲ್ಲ ಸಹಕಾರಿಗಳು ನಮ್ಮ ಕಾರ್ಯಕ್ರಮಕ್ಕೆ ಕೈಜೋಡಿಸಬೇಕೆಂದರು. ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಪಿ.ಯು ರಾಬಿನ್ ದೇವಯ್ಯ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಜಿ.ಬಿ. ಸೋಮಯ್ಯ ವಹಿಸಿದ್ದರು. ದಿನದ ಮಹತ್ವದ ಕುರಿತು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕಿ ಎಂ.ಎಂ. ಶ್ಯಾಮಲ ಮಾತನಾಡಿದರು. ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಉಪಾಧ್ಯಕ್ಷರಾದ ಎಚ್.ಕೆ. ಮಾದಪ್ಪ, ಕೆ.ಎಸ್. ಹರೀಶ್ ಪೂವಯ್ಯ ಹಾಗೂ ನಿರ್ದೇಶಕರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರಾದ ಎ.ಕೆ. ಮನು ಮುತ್ತಪ್ಪ, ಕೆ.ಎಂ. ತಮ್ಮಯ್ಯ, ಹಿರಿಯ ಸಹಕಾರಿಗಳಾದ ಬಿ.ಡಿ. ಮಂಜುನಾಥ್, ಬಿ.ಎಸ್. ಅನಂತ್ ರಾಮ್, ಎಂ.ಎಸ್. ಲಕ್ಷ್ಮಿಕಾಂತ್, ಎನ್.ಎಂ. ರಾಜಶೇಖರಪ್ಪ ಇವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

PREV

Recommended Stories

ಧರ್ಮಸ್ಥಳ ಗ್ರಾಮದಲ್ಲಿ ಶವ ಬಗ್ಗೆ ಬುರುಡೆ ಬಿಟ್ಟ ಚಿನ್ನಯ್ಯಗೆ ಬೇಲ್
ಕೈ ರೆಬೆಲ್ಸ್‌ ಜತೆ ಸೇರಿ ನಾವು ಸರ್ಕಾರ ಮಾಡಲ್ಲ : ಅಶೋಕ್‌