ರೈತರಿಗೆ ಸವಲತ್ತು ಒದಗಿಸುತ್ತಿರುವ ಸಹಕಾರಿ ಸಂಘ ಲಾಭ: ಶಶಿಕುಮಾರ್ ರೈ

KannadaprabhaNewsNetwork |  
Published : Oct 24, 2026, 03:00 AM IST
ಫೋಟೋ: ೨೧ಪಿಟಿಆರ್-ಅಭಿನಂದನೆಶಶಿಕುಮಾರ್‌ ರೈ ಬಾಲ್ಯೊಟ್ಟು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.  | Kannada Prabha

ಸಾರಾಂಶ

ತಾಲೂಕಿನ ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ನಿರ್ದೇಶಕರಾಗಿ ಆಯ್ಕೆಯಾದ ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಅಭಿನಂದನೆ ಹಾಗೂ ೨೦೨೫-೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಸಾಧಕ ವಿದ್ಯಾರ್ಥಿಗಳು ಹಾಗೂ ಕ್ರೀಡಾ ಕ್ಷೇತ್ರದ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಬುಧವಾರ ಸಂಘದ ಕೇಂದ್ರ ಕಚೇರಿಯ ರೈತ ಭವನದಲ್ಲಿ ನಡೆಯಿತು.

ಪುತ್ತೂರು : ತಾಲೂಕಿನ ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ನಿರ್ದೇಶಕರಾಗಿ ಆಯ್ಕೆಯಾದ ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಅಭಿನಂದನೆ ಹಾಗೂ ೨೦೨೫-೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಸಾಧಕ ವಿದ್ಯಾರ್ಥಿಗಳು ಹಾಗೂ ಕ್ರೀಡಾ ಕ್ಷೇತ್ರದ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಬುಧವಾರ ಸಂಘದ ಕೇಂದ್ರ ಕಚೇರಿಯ ರೈತ ಭವನದಲ್ಲಿ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿ, ಸನ್ಮಾನ ಸ್ವೀಕರಿಸಿದ ಕರ್ನಾಟಕ ರಾಜ್ಯ ಸಹಕಾರಿ ಯೂನಿಯನ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಮಾತನಾಡಿ, ರೈತರಿಗೆ ವಿವಿಧ ಸವಲತ್ತುಗಳನ್ನು ಒದಗಿಸುತ್ತಿರುವ ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಆರ್ಥಿಕವಾಗಿ ಲಾಭ ಗಳಿಸುತ್ತಿದೆ ಎಂದರು.ಸಂಪನ್ಮೂಲ ವ್ಯಕ್ತಿಯಾಗಿದ್ದ ಸಂಜಯನಗರ ಹಿ.ಪ್ರಾ ಶಾಲಾ ಶಿಕ್ಷಕ ರಮೇಶ್ ಉಳಯ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ನಿರ್ದಿಷ್ಟ ಗುರಿಯಿಟ್ಟುಕೊಳ್ಳಬೇಕು. ಅದು ಕೇವಲ ಮನಸ್ಸಿನಲ್ಲಿರದೆ ಅದನ್ನು ಕಾರ್ಯರೂಪದಲ್ಲಿಟ್ಟುಕೊಂಡು ಕಾರ್ಯ ಸಾಧನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನವೀನ್ ಡಿ ಅಧ್ಯಕ್ಷತೆ ವಹಿಸಿದ್ದರು. ೨೦೨೫-೨೬ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿಯಲ್ಲಿ ಗರಿಷ್ಟ ಅಂಕಗಳಿಸಿದ ೩೭, ಪಿಯುಸಿಯಲ್ಲಿ ಗರೀಷ್ಠ ಅಂಕ ಗಳಿಸಿದ ೩೬, ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಇಬ್ಬರು ವಿದ್ಯಾರ್ಥಿಗಳ ಸಹಿತ ಒಟ್ಟು ೭೫ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಸಂಘದ ಉಪಾಧ್ಯಕ್ಷೆ ಪವಿತ್ರ ಕೆ.ಪಿ., ನಿರ್ದೇಶಕರಾದ ದೇವಪ್ಪ ಗೌಡ ಓಲಾಡಿ, ಪ್ರವೀಣ್ ಕುಮಾರ್ ಶೆಟ್ಟಿ, ಬಾಬು ಶೆಟ್ಟಿ ವೀರಮಂಗಲ, ಶಿವಪ್ರಸಾದ್ ನಾಯ್ಕ, ದೇವಪ್ಪ ಪಜಿರೋಡಿ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವಲಯ ಪ್ರತಿನಿಧಿ ವಸಂತ ಇದ್ದರು.ನಿರ್ದೇಶಕರಾದ ಜಯರಾಮ ಪೂಜಾರಿ ಒತ್ತೆಮುಂಡೂರು ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಧುಕರ ಎಚ್ ವಂದಿಸಿದರು. ವಿಶ್ಚನಾಥ ಬಲ್ಯಾಯ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಈ ಹಂಗಾಮಿನಲ್ಲಿ ಕಬ್ಬಿನ ಇಳುವರಿ ಕಡಿಮೆ
ಚನ್ನಮ್ಮಳ ಶೌರ್ಯ, ದೇಶಪ್ರೇಮ ಮಹಿಳೆಯರಿಗೆ ಸ್ಫೂರ್ತಿ