ಸಹಕಾರಿ ವ್ಯವಸ್ಥೆ ದೇಶದ ಆರ್ಥಿಕತೆಗೆ ಪೂರಕ: ವೆಂಕಟೇಶ್

KannadaprabhaNewsNetwork |  
Published : Nov 16, 2025, 02:00 AM IST
೧೪ಬಿಹೆಚ್‌ಆರ್ ೧: ಬಾಳೆಹೊನ್ನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದ ಸಹಕಾರ ಸಪ್ತಾಹದಲ್ಲಿ ಸಂಘದ ಅಧ್ಯಕ್ಷ ಕೆ.ಕೆ.ವೆಂಕಟೇಶ್ ಧ್ವಜಾರೋಹಣ ನೆರವೇರಿಸಿದರು. ಕೋಕಿಲಮ್ಮ, ವೆಂಕಟೇಶ್, ಟಿ.ಎಂ.ಉಮೇಶ್, ಗೌತಮ್, ಸತೀಶ್, ಜುಹೇಬ್, ಸುನೀಲ್ ಇದ್ದರು. | Kannada Prabha

ಸಾರಾಂಶ

ಬಾಳೆಹೊನ್ನೂರು, ಸಹಕಾರ ವ್ಯವಸ್ಥೆ ದೇಶದ ಆರ್ಥಿಕತೆಗೆ ಪೂರಕವಾಗಿದೆ ಎಂದು ಪಿಎಸಿಎಸ್ ಅಧ್ಯಕ್ಷ ಕೆ.ಕೆ.ವೆಂಕಟೇಶ್ ಹೇಳಿದರು.ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದ ಸಹಕಾರ ಸಪ್ತಾಹದಲ್ಲಿ ಸಹಕಾರಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ದೇಶದ ಬೆಳವಣಿಗೆಗೆ ಸಹಕಾರ ಕ್ಷೇತ್ರ ತನ್ನದೇ ಆದ ವಿಶೇಷ ಕೊಡುಗೆ ನೀಡಿದೆ. ದೇಶದಲ್ಲಿ ಎಲ್ಲ ಕ್ಷೇತ್ರ ಕ್ಕಿಂತ ಸಹಕಾರ ಕ್ಷೇತ್ರ ಇಂದು ಮುಂಚೂಣಿಯಲ್ಲಿದೆ. ದೇಶದ ಬೆಳವಣಿಗೆಗೆ ತನ್ನದೇ ಆದ ಕೊಡುಗೆ ನೀಡುತ್ತಿದೆ. ಸ್ಥಳೀಯ ಸಹಕಾರ ಸಂಘಗಳಲ್ಲಿ ರೈತರಿಗೆ ಬೇಕಾದ ಎಲ್ಲ ಸವಲತ್ತು ದೊರೆಯುವಂತಾಗಬೇಕು.

ಸಹಕಾರ ಸಪ್ತಾಹದಲ್ಲಿ ಸಹಕಾರಿ ಧ್ವಜಾರೋಹಣ

ಕನ್ನಡಪ್ರಭ ವಾರ್ತೆ, ಬಾಳೆಹೊನ್ನೂರು

ಸಹಕಾರ ವ್ಯವಸ್ಥೆ ದೇಶದ ಆರ್ಥಿಕತೆಗೆ ಪೂರಕವಾಗಿದೆ ಎಂದು ಪಿಎಸಿಎಸ್ ಅಧ್ಯಕ್ಷ ಕೆ.ಕೆ.ವೆಂಕಟೇಶ್ ಹೇಳಿದರು.ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದ ಸಹಕಾರ ಸಪ್ತಾಹದಲ್ಲಿ ಸಹಕಾರಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ದೇಶದ ಬೆಳವಣಿಗೆಗೆ ಸಹಕಾರ ಕ್ಷೇತ್ರ ತನ್ನದೇ ಆದ ವಿಶೇಷ ಕೊಡುಗೆ ನೀಡಿದೆ. ದೇಶದಲ್ಲಿ ಎಲ್ಲ ಕ್ಷೇತ್ರ ಕ್ಕಿಂತ ಸಹಕಾರ ಕ್ಷೇತ್ರ ಇಂದು ಮುಂಚೂಣಿಯಲ್ಲಿದೆ. ದೇಶದ ಬೆಳವಣಿಗೆಗೆ ತನ್ನದೇ ಆದ ಕೊಡುಗೆ ನೀಡುತ್ತಿದೆ. ಸ್ಥಳೀಯ ಸಹಕಾರ ಸಂಘಗಳಲ್ಲಿ ರೈತರಿಗೆ ಬೇಕಾದ ಎಲ್ಲ ಸವಲತ್ತು ದೊರೆಯುವಂತಾಗಬೇಕು.

ತಾನು ಎಲ್ಲರಿಗಾಗಿ, ಎಲ್ಲರೂ ತನಗಾಗಿ ಎಂಬುದು ಸಹಕಾರಿ ತತ್ವ. ಈ ತತ್ವ ಅಳವಡಿಸಿಕೊಂಡು ಮುನ್ನಡೆದಲ್ಲಿ ಅಭಿವೃದ್ಧಿ ಸಾಧ್ಯ. ಗ್ರಾಮೀಣರು ಸಹಕಾರಿ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಯಶಸ್ವಿಯಾಗಬೇಕಿದೆ. ಸಹಕಾರ ಸಪ್ತಾಹದ ಅಂಗವಾಗಿ ದೇಶಾದ್ಯಂತ ಏಳು ದಿನಗಳ ಕಾಲ ಸಹಕಾರಿ ಸಂಸ್ಥೆಗಳಲ್ಲಿ ವಿವಿಧ ಕಾರ್ಯಕ್ರಮ ಹಮ್ಮಿಕೊಂಡು ರೈತರು, ಕೃಷಿಕರಿಗಾಗಿ ವಿಶೇಷ ತರಬೇತಿ ನಡೆಸಲಾಗುತ್ತದೆ. ಇದರೊಂದಿಗೆ ವಿಶೇಷ ಚಿಂತನ, ಮಂಥನ ಮಾಡುತ್ತಾರೆ ಎಂದರು.

ನಿರ್ದೇಶಕ ಕೆ.ಟಿ.ವೆಂಕಟೇಶ್ ಮಾತನಾಡಿ, ಭಾರತದಲ್ಲಿ ಅತೀದೊಡ್ಡ ಕ್ಷೇತ್ರ ಸಹಕಾರಿ ಕ್ಷೇತ್ರ. ದೇಶದ ಜನಸಂಖ್ಯೆ ಹೆಚ್ಚಿನ ಜನರು ಈ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ. ರೈತರು, ಗ್ರಾಹಕರ ಸಮಗ್ರ ಅಭಿವೃದ್ಧಿ ದೃಷ್ಟಿಯಲ್ಲಿ ಕಾರ್ಯನಿರ್ವಹಿಸುತ್ತಿರುವುದೇ ಸಹಕಾರಿ ಕ್ಷೇತ್ರ. ಸಹಕಾರಿ ಕ್ಷೇತ್ರದಲ್ಲಿ ಲಾಭ ಮಾತ್ರ ಮುಖ್ಯವಲ್ಲ. ಸೇವೆಯೇ ಮುಖ್ಯ ಎಂಬುದು ಧ್ಯೇಯ ಎಂದರು.ಸಂಘದ ಉಪಾಧ್ಯಕ್ಷೆ ಕೋಕಿಲಮ್ಮ, ನಿರ್ದೇಶಕರಾದ ಟಿ.ಎಂ.ಉಮೇಶ್ ಕಲ್ಮಕ್ಕಿ, ಎಂ.ಎಸ್.ಅರುಣೇಶ್, ಕೆ.ಕೆ.ಗೌತಮ್, ಎಚ್.ಡಿ.ಸತೀಶ್, ಕೆ.ಕೆ.ಆಶಾ, ಮಹಮ್ಮದ್ ಜುಹೇಬ್, ಸಿ.ವಿ.ಸುನೀಲ್, ಎಂ.ಡಿ.ಕೃಷ್ಣಪ್ಪ, ಕೆ.ಆರ್.ಸತೀಶ್, ಸಿಇಒ ಎಚ್.ಉಮೇಶ್, ಸಿಬ್ಬಂದಿ ಎಚ್.ಎಂ.ವೆಂಕಟೇಶ್, ಅಣ್ಣಪ್ಪ, ಸತೀಶ್, ಡಿ.ರಾಜೇಂದ್ರ, ಚಿರಾಗ್, ಪ್ರಮೀತ್ ಮತ್ತಿತರರು ಹಾಜರಿದ್ದರು.

೧೪ಬಿಹೆಚ್‌ಆರ್ ೧:

ಬಾಳೆಹೊನ್ನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದ ಸಹಕಾರ ಸಪ್ತಾಹದಲ್ಲಿ ಸಂಘದ ಅಧ್ಯಕ್ಷ ಕೆ.ಕೆ.ವೆಂಕಟೇಶ್ ಧ್ವಜಾರೋಹಣ ನೆರವೇರಿಸಿದರು. ಕೋಕಿಲಮ್ಮ, ವೆಂಕಟೇಶ್, ಟಿ.ಎಂ.ಉಮೇಶ್, ಗೌತಮ್, ಸತೀಶ್, ಜುಹೇಬ್, ಸುನೀಲ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯ ರಾಜಕಾರಣಕ್ಕೆ ಎಚ್‌ಡಿಕೆ ಪರೋಕ್ಷ ಇಂಗಿತ
ಜೈಲಿನ ಬ್ಯಾರಕ್‌ಗಳಿಗೆ ಸಿಸಿಟಿವಿ ಕ್ಯಾಮೆರಾ!