ಕನ್ನಡಪ್ರಭ ವಾರ್ತೆ ಉಡುಪಿ
ಕರ್ನಾಟಕ ರಾಜ್ಯ ಮಕ್ಕಳ ಘಟಕಗಳ ರಕ್ಷಣಾ ಆಯೋಗದ ನಿಕಟಪೂರ್ವ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ. ಟಿ. ಕಾರ್ಯಾಗಾರ ನಡೆಸಿಕೊಟ್ಟು, ಮಕ್ಕಳ ರಕ್ಷಣೆ ಕೇವಲ ಒಂದು ಇಲಾಖೆಗೆ ಸಂಬಂಧಪಟ್ಟ ವಿಚಾರ ಅಲ್ಲ, ಮಕ್ಕಳ ರಕ್ಷಣೆಯ ವಿಚಾರ ಬಂದಾಗ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕಾಗುತ್ತದೆ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪ್ರೇಮಮೂರ್ತಿ ಕೆ. ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ಸುಮಾರು 47 ಇಲಾಖೆಗಳು ನೇರ ಅಥವಾ ಪರೋಕ್ಷವಾಗಿ ಜವಾಬ್ದಾರರಾಗಿರುತ್ತದೆ. ಮಕ್ಕಳ ಹಕ್ಕುಗಳ ರಕ್ಷಣೆಗೆಂದೇ 30 ಕಾಯ್ದೆಗಳನ್ನು ಜಾರಿಗೆ ತರಲಾಗಿದೆ ಎಂದರು.ಕುಂದಾಪುರ ಡಿವೈಎಸ್ಪಿ ಹೆಚ್.ಡಿ. ಕುಲಕರ್ಣಿ, ಮಕ್ಕಳ ಕಲ್ಯಾಣ ಸಮಿತಿ ಸದಸ್ಯೆ ಅಶ್ವಿತಾ ಶಾಲೆಟ್, ಮಂಗಳೂರಿನ ಪಡಿ ಸಂಸ್ಥೆಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರೆನಿ ಪೀಟರ್ ಡಿಸೋಜ ಉಪಸ್ಥಿತರಿದ್ದರು. ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ನಾಗರತ್ನ ನಾಯಕ್ ಸ್ವಾಗತಿಸಿ, ಮಕ್ಕಳ ಸಹಾಯವಾಣಿ ಯೋಜನಾ ಸಂಯೋಜಕಿ ಜ್ಯೋತಿ ನಿರೂಪಿಸಿ ವಂದಿಸಿದರು.