ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಲಸಿಕಾಕರಣ ಅಭಿಯಾನ
ಜಿಲ್ಲೆಯಲ್ಲಿ ದಡಾರ, ರುಬೆಲ್ಲಾ ಮತ್ತಿತರ ಕಾಯಿಲೆಗಳನ್ನು ಸಂಪೂರ್ಣವಾಗಿ ನಿಯಂತ್ರಿಸಲು ಲಸಿಕಾಕರಣ ಅಭಿಯಾನವನ್ನು ಸಮರ್ಪಕವಾಗಿ ಮುಂದುವರೆಸಬೇಕಾಗಿರುತ್ತದೆ. ಗರ್ಭಿಣಿ ಮಹಿಳೆಯರು ಮತ್ತು 0-5 ವರ್ಷಗಳ ಒಳಗಿನ ಮಕ್ಕಳ ಮಾಹಿತಿಯನ್ನು ಆಶಾ, ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಹಂಚಿಕೊಳ್ಳುವುದು. ಮನೆ ಮನೆ ಭೇಟಿ ನೀಡಿ ಲಸಿಕೆ ಪಡೆಯಬೇಕಾಗಿರುವ ಮತ್ತು ಪಡೆಯದೆ ಬಿಟ್ಟು ಹೋಗಿರುವವರ ವಿವರವನ್ನು ಪರಿಶೀಲಿಸಬೇಕು. ಅಂತಹವರ ವಿವರಗಳವನ್ನು ಲಸಿಕಾಕರಣದ ದಿನಾಂಕಗಳಂದು ಬಳಸಿಕೊಂಡು ಶೇ. 100 ರಷ್ಟು ಲಸಿಕಾಕರಣದ ಗುರಿಸಾಧಿಸಬೇಕು ಎಂದರು.ಹೊಸದಾಗಿ ಮಕ್ಕಳನ್ನು ಶಾಲೆಗೆ ನೋಂದಣಿ ಮಾಡಿಕೊಳ್ಳುವ ಸಮಯದಲ್ಲಿ ಈ ಹಿಂದೆ ಪಡೆದಿರುವ ಲಸಿಕೆಗಳ ವಿವರವನ್ನು ಶಿಕ್ಷಣ ಇಲಾಖೆಯವರು ಪರಿಶೀಲಿಸಬೇಕು. ಲಸಿಕಾಕರಣದ ಗುರಿ ಸಾಧನೆಯ ಸಮೀಕ್ಷೆ ನಡೆಸಲು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಅಂತಿಮ ವರ್ಷದ ಪದವಿ ಪಡೆಯುತ್ತಿರುವ ವೈದ್ಯಕೀಯ ಮತ್ತು ನರ್ಸಿಂಗ್ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಬೇಕು. ಗ್ರಾಮಾಂತರ ಪ್ರದೇಶಗಳಲ್ಲಿ ಲಸಿಕೆ ನಿರಾಕರಿಸುವ ಕುಟುಂಬಗಳ ಮನವೊಲಿಸಲು ಮುಂದಾಗಬೇಕು ಎಂದು ಹೇಳಿದರು.
ಈ ಕೊರತೆಯನ್ನು ತಗ್ಗಿಸಲು ಭ್ರೂಣ ಲಿಂಗ ಪತ್ತೆ ಕೇಂದ್ರಗಳ ಮೇಲೆ ಆರೋಗ್ಯ ಇಲಾಖೆ ಹಾಗೂ ಸಂಬಂಧಪಟ್ಟ ಇತರ ಇಲಾಖೆಗಳ ಅಧಿಕಾರಿಗಳು ಅನಿರೀಕ್ಷಿತ ದಾಳಿಗಳನ್ನು ನಡೆಸಿ ಕೇಂದ್ರಗಳು ನಿಯಮಾವಳಿ ರೀತ್ಯ ಕಾರ್ಯನಿರ್ವಹಿಸುತ್ತಿವೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಬೇಕು. ನಿಯಮಗಳನ್ನು ಉಲ್ಲಂಘಿಸುವ ಕೇಂದ್ರಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮವನ್ನು ಜರುಗಿಸಬೇಕು. ಜಿಲ್ಲೆಯಲ್ಲಿ ಹೆಣ್ಣು ಭ್ರೂಣ ಹತ್ಯೆಯನ್ನು ಸಂಪೂರ್ಣವಾಗಿ ತಡೆಗಟ್ಟಬೇಕು ಎಂದರು. ಕಫಾ ಪರೀಕ್ಷೆ ಮಾಡಿಸಿಕೊಳ್ಳಿ
ಸಾರ್ವಜನಿಕರಲ್ಲಿ, ಶಾಲಾ ಮಕ್ಕಳಲ್ಲಿ ಕ್ಷಯ ರೋಗದ ಬಗ್ಗೆ ವ್ಯಾಪಕ ಅರಿವು ಮೂಡಿಸಬೇಕು. ಲಭ್ಯವಿರುವ ಆರೋಗ್ಯ ಚಿಕಿತ್ಸೆಗಳ ಬಗ್ಗೆ ತಿಳಿಸಿಕೊಡಬೇಕು. ಮನೆಗಳ ಸುತ್ತ ಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಶುಚಿತ್ವ ಕಾಪಾಡಲು ಪ್ರೆರೇಪಿಸಬೇಕು. ಮಳೆಯ ಪ್ರಮಾಣದಲ್ಲಿ ಏರಿಕೆ ಕಂಡುಬರುತ್ತಿರುವುದರಿಂದ ಡೆಂಗ್ಯೂ, ಚಿಕುಂಗುನ್ಯ, ಕಾಲರಾ ಇನ್ನು ಮುಂತಾದ ಜಲಜನ್ಯ ಹಾಗೂ ಕೀಟಜನ್ಯ ಕಾಯಿಲೆಗಳು ಹೆಚ್ಚುವ ಸಾಧ್ಯತೆ ಇರುತ್ತದೆ. ಸಾರ್ವಜನಿಕರು ಸೊಳ್ಳೆ ಪರದೆ, ಸೊಳ್ಳೆ ನಿಯಂತ್ರಣ ದ್ರಾವಕ ಮುಂತಾದ ರೋಗ ನಿರೋಧಕ ಕ್ರಮಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ಮಹೇಶ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.