ಕೂರ್ಗ್ ಹೋಟೇಲ್, ರೆಸಾರ್ಟ್ ಅಸೋಸಿಯೇಷನ್ ನ ನೂತನ ಕಚೇರಿ ಉದ್ಘಾಟನೆ

KannadaprabhaNewsNetwork |  
Published : Nov 13, 2025, 01:30 AM IST

ಸಾರಾಂಶ

ಕೊಡಗಿನ ಮೂಲದ ಯುವ ಪೀಳಿಗೆ ಮತ್ತೆ ಜಿಲ್ಲೆಗೆ ಮರಳುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಸಂಬಂಧಿತ ಯೋಜನೆಗಳು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕೊಡಗಿನ ಮೂಲದ ಯುವಪೀಳಿಗೆ ಮತ್ತೆ ಜಿಲ್ಲೆಗೆ ಮರಳುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಸಂಬಂಧಿತ ಯೋಜನೆಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಜಿಲ್ಲಾಧಿಕಾರಿ ವೆಂಕಟರಾಜಾ ಅಭಿಪ್ರಾಯಪಟ್ಟಿದ್ದಾರೆ.ನಗರದ ಕೊಡಗು ಪ್ರವಾಸೋದ್ಯಮ ಇಲಾಖೆ ಕಚೇರಿಯಲ್ಲಿ ಕೂರ್ಗ್‌ ರೆಸಾರ್ಟ್‌, ಹೋಟೇಲ್ ಅಸೋಸಿಯೇಷನ್ ನ ನೂತನ ಕಚೇರಿ ಉದ್ಘಾಟಿಸಿ ಮಾತನಾಡಿದ ವೆಂಕಟರಾಜಾ, ಉದ್ಯೋಗವಕಾಶ ಅರಸಿ ಹೊರನಾಡಿಗೆ ತೆರಳಿರುವ ಕೊಡಗಿನ ಅನೇಕ ಯುವಕ, ಯುವತಿಯರು ಮತ್ತೆ ಕೊಡಗಿಗೆ ಮರಳಲು ಸ್ಥಳೀಯವಾಗಿ ಪ್ರವಾಸೋದ್ಯಮ ಚಟುವಟಿಕೆಗಳು ಸಹಕಾರಿಯಾಗಬೇಕು. ಪ್ರವಾಸೋದ್ಯಮಿಗಳಲ್ಲಿ ಪರಸ್ಪರ ಸ್ಪರ್ಧೆಗಿಂತ ಎಲ್ಲಾ ಉದ್ಯಮಿಗಳನ್ನು ಪ್ರೋತ್ಸಾಹಿಸಿ ಕೊಡಗಿನಲ್ಲಿ ಸುಸ್ಥಿರ ಪ್ರವಾಸೋದ್ಯಮ ಸುಗಮವಾಗಿರುವಂತೆ ಕಾಯ್ದುಕೊಳ್ಳುವುದು ಮುಖ್ಯವಾಗಬೇಕು ಎಂದು ಹೇಳಿದರು.

ಕೊಡಗಿನ ಪ್ರವಾಸೋದ್ಯಮಿಗಳು ಜನಸ್ನೇಹಿಯಾಗಿದ್ದಲ್ಲಿ ಒಮ್ಮೆ ಭೇಟಿ ನೀಡಿದ ಪ್ರವಾಸಿಗರು ಮತ್ತೆ ಮತ್ತೆ ಕೊಡಗಿಗೆ ಪ್ರವಾಸ ಬರುವುದು ಖಂಡಿತಾ ಎಂದೂ ಕಿವಿಮಾತು ಹೇಳಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಕೂರ್ಗ್‌ ಹೋಟೇಲ್, ರೆಸಾರ್ಟ್ ಅಸೋಸಿಯೇಷನ್ ಕಳೆದ ತಿಂಗಳು ಆಯೋಜಿಸಿದ್ದ ಸ್ವಚ್ಛ ಕೊಡಗು ಸುಂದರ ಕೊಡಗು ಸ್ವಚ್ಛತಾ ಅಭಿಯಾನ ರಾಜ್ಯದ ಗಮನವನ್ನೇ ಸೆಳೆದಿದೆ. ಸ್ವಯಂ ಪ್ರೇರಿತರಾಗಿ ಕೊಡಗಿನ ಜನತೆ ಈ ಅಭಿಯಾನಕ್ಕೆ ಸಹಕಾರ ನೀಡಿದ್ದು ಜಿಲ್ಲೆಯ ಜನತೆಯಲ್ಲಿ ಸ್ವಚ್ಛ ಕೊಡಗಿನ ಬಗೆಗಿನ ಚಿಂತನೆಗೆ ನಿದರ್ಶನವಾಗಿದೆ ಎಂದು ಶ್ಲಾಘಿಸಿದರು.

ಕೊಡಗನ್ನು ಪ್ಲಾಸ್ಟಿಕ್ ಮುಕ್ತ ಜಿಲ್ಲೆಯನ್ನಾಗಿಸುವಲ್ಲಿಯೂ ಜಿಲ್ಲೆಯ ಜನತೆಯ ಸರ್ವ ಸಹಕಾರವನ್ನೂ ಈ ಸಂದರ್ಭ ಜಿಲ್ಲಾಧಿಕಾರಿಗಳು ಕೋರಿದರು. ಕೊಡಗಿಗೆ ಭೇಟಿ ನೀಡುವ ಪ್ರವಾಸಿರಿಗೆ ಸಾಕಷ್ಟು ಮಾಹಿತಿ ನೀಡುವ ನಿಟ್ಟಿನಲ್ಲಿ ಕೂರ್ಗ್ ಹೋಟೇಲ್ , ರೆಸಾರ್ಟ್ ಅಸೋಸಿಯೇಷನ್ ನ ಈ ನೂತನ ಕಚೇರಿ ಸಹಕಾರಿಯಾಗಲಿ ಎಂದೂ ವೆಂಕಟ್ ರಾಜಾ ಹಾರೈಸಿದರು.ಕೂರ್ಗ್ ಹೋಟೇಲ್, ರೆಸಾರ್ಟ್ ಅಸೋಸಿಯೇಷನ್ ಅಧ್ಯಕ್ಷ ಕುಂಡ್ಯೋಳಂಡ ದಿನೇಶ್ ಕಾರ್ಯಪ್ಪ ಮಾತನಾಡಿ, ಜಿಲ್ಲಾಧಿಕಾರಿಗಳ ಸಹಕಾರದೊಂದಿಗೆ ಪ್ರಥಮ ಬಾರಿಗೆ ಕೂರ್ಗ್ ಹೋಟೇಲ್ , ರೆಸಾರ್ಟ್ ಅಸೋಸಿಯೇಷನ್ ಗೆ ಪ್ರತ್ಯೇಕ ಕಚೇರಿ ಲಭಿಸುವಂತಾಗಿದೆ. ಕೊಡಗಿನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ನಿಟ್ಟಿನಲ್ಲಿ ಅಸೋಸಿಯೇಷನ್ ಅನೇಕ ಕಾರ್ಯಯೋಜನೆ ರೂಪಿಸುತ್ತಿದ್ದು, ಕೊಡಗು ಉತ್ಸವದ ಚಿಂತನೆಯೂ ಇದೆ ಎಂದರು.ಕೂರ್ಗ್ ಹೋಟೇಲ್ , ರೆಸಾರ್ಟ್‌ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ನಾಸಿರ್ ಅಹಮ್ಮದ್, ಉಪಾಧ್ಯಕ್ಷರಾದ ಜಾಹೀರ್ ಅಹಮ್ಮದ್, ಬಿ. ಎಸ್. ಸುಂದರ್, ರತೀಶ್, ಬಿ. ಸಿ. ಮಂಜುನಾಥ್, ಜಂಟಿ ಕಾರ್ಯದರ್ಶಿ ಡಿ.ಕೆ. ಮಂಜುನಾಥ್, ಖಚಾಂಜಿ ಸಾಗರ್ ಗಣಪತಿ, ಅಸೋಸಿಯೇಷನ್ ನಿಕಟಪೂರ್ವ ಅಧ್ಯಕ್ಷ ಬಿ.ಆರ್. ನಾಗೇಂದ್ರ ಪ್ರಸಾದ್, ಗೌರವ ಸಲಹೆಗಾರ ಜಿ. ಚಿದ್ವಿಲಾಸ್ ಸೇರಿದಂತೆ ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೋಗಿಲು ನಿರಾಶ್ರಿತರಿಗೆ 5ರ ನಂತರ ವಸತಿ ಭಾಗ್ಯ
ಹೊಸ ವರ್ಷಕ್ಕೆ ಶೇ.40 ಮದ್ಯ ಮಾರಾಟ ಹೆಚ್ಚಳ!