ಕನ್ನಡಪ್ರಭ ವಾರ್ತೆ ಮಂಡ್ಯಕೇರಳದಲ್ಲಿ ಕೊರೋನಾ ರೂಪಾಂತರಿ ತಳಿ ಪ್ರಕರಣಗಳು ಹೆಚ್ಚುತ್ತಿರುವ ನಡುವೆಯೇ ಜಿಲ್ಲೆಯ ಮದ್ದೂರು ತಾಲೂಕಿನ ವ್ಯಕ್ತಿಯೊಬ್ಬರಲ್ಲಿ ಕೊರೋನಾ ಸೋಂಕು ಪತ್ತೆಯಾಗಿರುವುದು ಆತಂಕ ಮೂಡಿಸಿದೆ.
ನೆರೆ ರಾಜ್ಯದಲ್ಲಿ ಕೊರೋನಾ ರೂಪಾಂತರಿ ತಳಿಯ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಜಿಲ್ಲೆಯೊಳಗೂ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಜಿಲ್ಲೆಯ ಆರು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಐಸಿಯು ಬೆಡ್‌ಗಳನ್ನು ಸಿದ್ಧಪಡಿಸಿಕೊಳ್ಳಲಾಗಿದೆ. ವೆಂಟಿಲೇಟರ್‌ಗಳನ್ನು ಸಜ್ಜುಗೊಳಿಸಲಾಗಿದೆ. ಜಂಬೋಸಿಲಿಂಡರ್‌ಗಳನ್ನು ಪೂರ್ಣಪ್ರಮಾಣದಲ್ಲಿ ತುಂಬಿಸಿಟ್ಟುಕೊಂಡಿದ್ದು, ಆಸ್ಪತ್ರೆಗಳಲ್ಲಿ ಆಕ್ಸಿಜನ್ ಬೆಡ್‌ಗಳನ್ನು ಸಿದ್ಧಪಡಿಸಿಟ್ಟುಕೊಳ್ಳುವಂತೆ ಸೂಚಿಸಲಾಗಿದೆ ಎಂದು ವಿವರಿಸಿದರು.
ಜಿಲ್ಲೆಯ ಆರು ತಾಲೂಕುಗಳಲ್ಲಿ ಆಕ್ಸಿಜನ್ ಪ್ಲಾಂಟ್‌ಗಳು ಕಾರ್ಯಾಚರಣೆಗೆ ಸಿದ್ಧಗೊಂಡಿವೆ. ಶ್ರೀರಂಗಪಟ್ಟಣದ ಪ್ಲಾಂಟ್‌ನ ಸೆನ್ಸಾರ್ ಕೆಟ್ಟಿರುವುದರಿಂದ ಅದನ್ನು ಸರಿಪಡಿಸುವುದಕ್ಕೆ ಕ್ರಮ ವಹಿಸಲಾಗಿದೆ. ಕೊರೋನಾ ರೂಪಾಂತರಿ ತಳಿಯನ್ನು ಎದುರಿಸಲು ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿರುವುದಾಗಿ ಹೇಳಿದರು.