ಕನ್ನಡಪ್ರಭ ವಾರ್ತೆ ಬೆಳಗಾವಿ
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಸ್ತೆ ಅಭಿವೃದ್ಧಿ ಕಾಮಗಾರಿ ಹಿನ್ನೆಲೆಯಲ್ಲಿ ಆಸ್ತಿ ಕಳೆದುಕೊಂಡ ಸಂತ್ರಸ್ತರಿಗೆ ₹20 ಕೋಟಿ ಪರಿಹಾರ ನೀಡುವಂತೆ ಹೈಕೋರ್ಟ್ ಆದೇಶ ನೀಡಿದೆ. ಹಾಗಾಗಿ, ಬೆಳಗಾವಿ ಪಾಲಿಕೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಈ ಪ್ರಕರಣದ ಕುರಿತು ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಅದಕ್ಕೆ ಕಾನೂನು ಹೋರಾಟ ಮಾಡಲಾಗುವುದು. ಪಾಲಿಕೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಯಾವುದೇ ಕಾರಣಕ್ಕೂ ವೇತನ ನಿಲ್ಲಲ್ಲ ಎಂದು ಸ್ಪಷ್ಟಪಡಿಸಿದರು.ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವುದಕ್ಕಾಗಿ ನಗರೋತ್ಥಾನ ಇಲಾಖೆಯಿಂದ ₹125 ಕೋಟಿ ಅನುದಾನ ಒದಗಿಸಲಾಗುವುದು ಎಂದರು.ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರವೇನೂ ಇಲ್ಲ. ಬಿಜೆಪಿ-ಜೆಡಿಎಸ್ ಮಿತ್ರ ಪಕ್ಷಗಳು ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಷಡ್ಯಂತ್ರ ಮಾಡುತ್ತಿವೆ. ಆದರೆ, ಅದರಲ್ಲಿ ಅವು ಯಶಸ್ವಿಯಾಗುವುದಿಲ್ಲ. ಕಾಂಗ್ರೆಸ್‌ನ ಎಲ್ಲ ಶಾಸಕರು, ಸಚಿವರು ಸಿಎಂ ಸಿದ್ದರಾಮಯ್ಯ ಅವರ ಪರವಾಗಿದ್ದಾರೆ ಎಂದು ತಿಳಿಸಿದರು.ನಗರದಲ್ಲಿ ಸರಣಿ ಸರಗಳ್ಳತನ ಪ್ರಕರಣ ಹೆಚ್ಚುತ್ತಿದ್ದು, ಈ ಕುರಿತು ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ. ನಗರದ ವಿವಿಧೆದೆ ಬೀದಿ ದೀಪಗಳು ಬಂದ್ ಆಗಿದ್ದು, ಕೂಡಲೇ ದೀಪ ಅಳವಡಿಸಲು ಕ್ರಮ ಕೈಗೊಳ್ಳಲು ಪಾಲಿಕೆ ಹಾಗೂ ಹೆಸ್ಕಾಂ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.