ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ಭಗವಾನ್ ಬುದ್ಧ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ನೂತನ ನಿರ್ಮಿಸಿರುವ ಬುದ್ಧ, ಬಸವಣ್ಣ, ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾತನಾಡಿ, ಸರ್ಕಾರದ ಆಡಳಿತದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಮತ್ತೊಂದೆಡೆ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದರು.
ಬೆಂಗಳೂರು ಸುತ್ತಮುತ್ತ ಆಸ್ತಿ ಮೌಲ್ಯದ ಆಧಾರದ ಮೇಲೆ ಲಂಚ ವಸೂಲಿ ನಡೆಯುತ್ತಿದೆ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಪೈಪೋಟಿಯಂತೆ ಜನರಿಂದ ಸುಲಿಗೆ ಮಾಡುತ್ತಿದ್ದಾರೆ. ಮತ್ತೊಂದೆಡೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದು ಆರೋಪಿಸಿದರು.ಕಾಂಗ್ರೆಸ್ ಶಾಸಕ ಬಸವರಾಜು ರಾಯರೆಡ್ಡಿ ಹಾಗೂ ರಾಜು ಕಾಗೆ ಅವರು ಭ್ರಷ್ಟಾಚಾರದಲ್ಲಿ ದೇಶದಲ್ಲೇ ಕರ್ನಾಟಕ ನಂಬರ್ ಒನ್ ಸ್ಥಾನದಲ್ಲಿದೆ ಎಂದು ಆರೋಪಿಸುತ್ತಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಮ್ಮ ಆಡಳಿತದ ವೈಫಲ್ಯ ಮುಚ್ಚಿಕೊಳ್ಳಲು ಜಾತಿ ಸಮೀಕ್ಷೆ, ಒಳ ಮೀಸಲಾತಿ ವಿಚಾರವನ್ನು ಮುನ್ನೆಲೆಗೆ ತಂದು ಜನರ ಗಮನ ಬೇರೆಡೆಗೆ ಸೆಳೆಯುವ ತಂತ್ರ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಕಾಂಗ್ರೆಸ್ ಹೈಕಮಾಂಡ್‌ಗೆ ರಾಜ್ಯ ಸರ್ಕಾರ ಒಂದೇ ಸಂಪನ್ಮೂಲದ ಖಜಾನೆಯಾಗಿದೆ. ಕಪ್ಪ ಕಾಣಿಕೆ ಅರ್ಪಿಸಿ ಹೈಕಮಾಂಡ್ ನ ಒಲವು ಗಿಟ್ಟಿಸಿಕೊಳ್ಳಲು ಸಿಎಂ, ಡಿಸಿಎಂ ಪೈಪೋಟಿಗೆ ಬಿದ್ದಂತೆ ರಾಜ್ಯವನ್ನು ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಈ ವೇಳೆ ಬಿಜೆಪಿ ರಾಜ್ಯ ಸಮಿತಿ ಸದಸ್ಯ ರುದ್ರಯ್ಯ, ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಯಮದೂರು ಸಿದ್ದರಾಜು, ಮುಖಂಡರಾದ ಅಪ್ಪಾಜಿಗೌಡ, ಎಚ್.ಬಸವರಾಜು, ಚಿಕ್ಕಣ್ಣ, ದೇವರಾಜು ಇದ್ದರು.