ಹಿರೇಮುಗದೂರು ಗ್ರಾಮ ಪಂಚಾಯಿತಿಯಲ್ಲಿ ಅವ್ಯವಹಾರ, ತನಿಖೆಗೆ ಆಗ್ರಹ

KannadaprabhaNewsNetwork |  
Published : Jun 19, 2025, 12:35 AM IST
18ಎಚ್‌ವಿಆರ್3 | Kannada Prabha

ಸಾರಾಂಶ

ಹಿರೇಮಗದೂರು ಹಾಗೂ ಕಳಸೂರ ಗ್ರಾಮ ಪಂಚಾಯಿತಿ ಪಿಡಿಒ ಆಗಿರುವ ಜರಿನಾ ಬೇಗಂ ಸರ್ಕಾರದ ಮಾರ್ಗಸೂಚಿಗಳನ್ನು ಗಾಳಿಗೆ ತೂರಿ ಲಕ್ಷಾಂತರ ರು. ಹಣದ ಗೋಲ್‌ಮಾಲ್ ನಡೆಸಿದ್ದಾರೆ ಎಂದು ಕರ್ನಾಟಕ ಕಿಸಾನ್ ಕಲ್ಯಾಣ ಸಂಘದ ಅಧ್ಯಕ್ಷ ಶಿವಕುಮಾರ ತಳವಾರ ಅವರು ಆರೋಪಿಸಿದ್ದಾರೆ.

ಸವಣೂರು: ತಾಲೂಕಿನ ಹಿರೇಮುಗದೂರು ಗ್ರಾಮ ಪಂಚಾಯಿತಿಯಲ್ಲಿ 15ನೇ ಹಣಕಾಸು ಮತ್ತು ನರೇಗಾ ಅಡಿಯಲ್ಲಿ ಮೂಲ ಸೌಲಭ್ಯದ ಸಾಮಗ್ರಿಗಳ ಖರೀದಿ ಹಾಗೂ ಕಾಮಗಾರಿಯಲ್ಲಿ ಹಣ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಕರ್ನಾಟಕ ಕಿಸಾನ್ ಕಲ್ಯಾಣ ಸಂಘದ ಅಧ್ಯಕ್ಷ ಶಿವಕುಮಾರ ತಳವಾರ ಅವರು ಜಿಲ್ಲಾ ಪಂಚಾಯಿತಿ ಸಿಇಒ ರುಚಿ ಬಿಂದಲ್ ಅವರಿಗೆ ದೂರು ನೀಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಹಿರೇಮಗದೂರು ಹಾಗೂ ಕಳಸೂರ ಗ್ರಾಮ ಪಂಚಾಯಿತಿ ಪಿಡಿಒ ಆಗಿರುವ ಜರಿನಾ ಬೇಗಂ ಸರ್ಕಾರದ ಮಾರ್ಗಸೂಚಿಗಳನ್ನು ಗಾಳಿಗೆ ತೂರಿ ಲಕ್ಷಾಂತರ ರು. ಹಣದ ಗೋಲ್‌ಮಾಲ್ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಗ್ರಾಪಂ ಸಾಮಾನ್ಯ ಸಭೆಯಲ್ಲಿ ಕೆಲವು ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಬೇಕಾಬಿಟ್ಟಿ ಕಾಮಗಾರಿ ನಡೆಸಿದ್ದಾರೆ. ಇನ್ನು ಗ್ರಾಪಂ ವ್ಯಾಪ್ತಿಯಲ್ಲಿ ಬೀದಿದೀಪ ಅಳವಡಿಕೆ ಹಿನ್ನೆಲೆಯಲ್ಲಿ ಒಟ್ಟು 120 ಬಲ್ಬ್ ಗಳನ್ನು ಹಾವೇರಿ ನಗರದ ಖಾಸಗಿ ಎಲೆಕ್ಟ್ರಿಕಲ್ ಅಂಗಡಿಯಿಂದ ಖರೀದಿಸಿದ್ದಾರೆ. ಅವುಗಳ ಪ್ರತಿ ಬಲ್ಬ್ ದರ ₹3500 ಎಂದು ಪಾವತಿ ಮಾಡಿದ್ದು, ಅವುಗಳ ನೈಜ ಬೆಲೆ ₹1420 ಆಗಿದೆ. ಈ ಕುರಿತು ಸರ್ಕಾರಿ ಏಜೆನ್ಸಿ ಕೂಡ ಅದರ ದರವನ್ನು ಖಚಿತ ಪಡಿಸಿದೆ. ಅದೇ ರೀತಿ ಕಲಕೋಟಿ ಗ್ರಾಪಂನಲ್ಲಿ ನರೇಗಾ ಅಡಿಯಲ್ಲಿ ಬದು ನಿರ್ಮಾಣ ಕಾಮಗಾರಿ ಮಾಡಿ, ಇದರ ಹೆಸರಿನಲ್ಲಿ ಹಿರೇಮುಗದೂರು ಮತ್ತು ಕಳಸೂರ ಗ್ರಾಪಂನ ಎರಡೂ ಕಡೆ ಕಾರ್ಮಿಕರ ವೇತನ ಪಾವತಿ, ಕಂಪ್ಯೂಟರ್ ಮತ್ತು ಕಸದ ತೊಟ್ಟಿ ಖರೀದಿಯಲ್ಲೂ ಗೋಲ್‌ಮಾಲ್ ನಡೆದಿದೆ. ಇನ್ನು ಮಾಹಿತಿ ಹಕ್ಕಿನಡಿ ಅರ್ಜಿ ಸಲ್ಲಿಸಿ ಮಾಹಿತಿ ಕೇಳಿದರೆ, ಹಳೆಯ ಮಾಹಿತಿ ನೀಡಿ ಹೊಸ ಮಾಹಿತಿ ಮುಚ್ಚಿಹಾಕಲು ಗ್ರಾಪಂನ ಗ್ರೇಡ್- 2 ಕಾರ್ಯದರ್ಶಿ ಮುಂದಾಗಿದ್ದಾರೆ ಎಂದು ದೂರಿದ್ದಾರೆ.ಈ ಕುರಿತು ಜಿಪಂ ಸಿಇಒ ರುಚಿ ಬಿಂದಲ್ ಅವರಿಗೆ ಮನವಿ ಸಲ್ಲಿಸಿದ್ದು, ಕೂಡಲೇ ಇದರ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಅಗತ್ಯ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದಾರೆ.ಶಾಲೆಗೆ ಹೋದ ವಿದ್ಯಾರ್ಥಿನಿ ಮೇಲೆ ಬೀದಿನಾಯಿ ದಾಳಿಹಾನಗಲ್ಲ: ಏಳು ವರ್ಷದ ಬಾಲಕಿ ಮೇಲೆ ಬೀದಿನಾಯಿಗಳು ದಾಳಿ ನಡೆಸಿ, ಕಚ್ಚಿ ಗಾಯಗೊಳಿಸಿದ ಘಟನೆ ಬುಧವಾರ ತಾಲೂಕಿನ ವರ್ದಿ ಗ್ರಾಮದಲ್ಲಿ ನಡೆದಿದೆ.ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೨ನೇ ತರಗತಿಯಲ್ಲಿ ಓದುತ್ತಿರುವ ಬಾಲಕಿ ಸುಪ್ರೀತಾ ಲಕಮಾಪುರ (೭) ಗಾಯಗೊಂಡವಳು ಎಂದು ಗುರುತಿಸಲಾಗಿದೆ. ಬಾಲಕಿ ಮೇಲೆ ಬೀದಿನಾಯಿಗಳ ದಾಳಿ ಮಾಡುತ್ತಿದ್ದಂತೆ ಬಾಲಕಿಯ ಚೀರಾಟ ಕಂಡು ಶಾಲಾ ಸಿಬ್ಬಂದಿ ಹಾಗೂ ಸ್ಥಳೀಯರು ಬಾಲಕಿಯನ್ನು ನಾಯಿಗಳಿಂದ ರಕ್ಷಣೆ ಮಾಡಿದ್ದಾರೆ. ಕೈ, ಕಾಲು ಸೇರಿದಂತೆ ಬಾಲಕಿಯ ದೇಹದ ವಿವಿಧೆಡೆ ನಾಯಿಗಳ ಹಿಂಡು ದಾಳಿ ಮಾಡಿ ಕಚ್ಚಿ ಗಾಯಗೊಳಿಸಿದೆ. ಕೂಡಲೇ ಬಾಲಕಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ.ಎಂದಿನಂತೆ ಬಾಲಕಿ ಬುಧವಾರ ಬೆಳಗ್ಗೆ ಶಾಲೆಗೆ ತೆರಳಿದ್ದ ವೇಳೆ ಬೀದಿನಾಯಿಗಳು ದಾಳಿ ಮಾಡಿ ಬಾಲಕಿಯನ್ನು ಕಚ್ಚಿ ಗಾಯಗೊಳಿಸಿದೆ. ಶಾಲೆಗೆ ಕಾಂಪೌಂಡ್ ಇಲ್ಲದೇ ಇರುವುದರಿಂದ ಶಾಲಾ ಆವರಣದಲ್ಲೇ ಬಿಡಾರ ಹೂಡಿರುವ ಬೀದಿನಾಯಿಗಳ ಹಿಂಡು ಬಾಲಕಿ ಮೇಲೆ ದಾಳಿ ಮಾಡಿವೆ. ಬೀದಿನಾಯಿಗಳ ಹಾವಳಿ ಮಿತಿ ಮೀರಿದ್ದು, ಬುಧವಾರದ ಘಟನೆ ಮತ್ತೆ ಮರುಕಳಿಸಬಾರದು. ಹೀಗಾಗಿ ಬೀದಿನಾಯಿಗಳ ಹಾವಳಿಗೆ ಕಡಿವಾಣ ಹಾಕುವಂತೆ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಮಂಜುನಾಥ ಪರಮ್ಮನವರ ಒತ್ತಾಯಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕ್ಷೇತ್ರದ ಕೆಲಸವನ್ನು ತಲೆಮೇಲೆ ಹೊತ್ತು ಮಾಡುವೆ
ಜಾತಿ ವೈಷಮ್ಯಕ್ಕೆ ಅವಕಾಶವಿಲ್ಲ:ಡಾ. ತೌಫೀಕ್‌ ಪಾರ್ಥನಳ್ಳಿ