-ನ.13 ರಂದು ಭ್ರಷ್ಟ ಅಧಿಕಾರಿಗಳ ವಿರುದ್ಧ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ
-----ಕನ್ನಡಪ್ರಭ ವಾರ್ತೆ ಹಿರಿಯೂರು
ತಾಲೂಕಿನ ಎಲ್ಲಾ ಸರ್ಕಾರಿ ಇಲಾಖೆಗಳಲ್ಲಿ ಮೀತಿ ಮೀರಿದ ಭ್ರಷ್ಟಾಚಾರ ತಾಂಡವಾಡುತ್ತಿದೆ ಎಂದು ರೈತ ಸಂಘದ ಅಧ್ಯಕ್ಷ ಕೆಟಿ ತಿಪ್ಪೇಸ್ವಾಮಿ ಆರೋಪಿಸಿದರು. ನಗರದ ರೈತ ಸಂಘದ ಕಛೇರಿಯಲ್ಲಿ ನಡೆದ ರೈತ ಮುಖಂಡರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.ಭ್ರಷ್ಟಾಚಾರದ ಬಗ್ಗೆ ಇಲಾಖೆಗಳ ಮುಖ್ಯಸ್ಥರಿಗೆ ಪತ್ರ ಬರೆದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಇದುವರೆಗೂ ಯಾವುದೇ ಕ್ರಮ ಕೈಗೊಂಡ ಕುರುಹುಗಳು ಸಹ ಕಾಣುತ್ತಿಲ್ಲ. ರೈತರ ಹೆಸರಿನಲ್ಲಿ ಪಿಎನ್ ಸಿ ಕಂಪನಿ ಹಾಗೂ ಉಪಗುತ್ತಿಗೆದಾರರು ನಿಯಮ ಉಲ್ಲಂಘನೆ ಮಾಡಿ ಸರ್ಕಾರಕ್ಕೆ ನೂರಾರು ಕೋಟಿ ತೆರಿಗೆ ಕಟ್ಟದೆ ವಂಚಿಸುತ್ತಿರುವ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದರೂ ಕ್ರಮ ವಹಿಸದೆ ಅಧಿಕಾರಿಗಳು ಕಂಪನಿಯೊಂದಿಗೆ ಶಾಮೀಲಾಗಿ ನಿರಂತರ ಅಕ್ರಮ ನಡೆಯಲು ಕಾರಣರಾಗಿದ್ದಾರೆ.
ನ.13 ರಂದು ಭ್ರಷ್ಟ ಅಧಿಕಾರಿಗಳ ವಿರುದ್ಧ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಕೈಗೊಂಡಿದ್ದು ಸಚಿವರು ಧರಣಿ ಸ್ಥಳಕ್ಕೆ ಬಂದರೆ ಭ್ರಷ್ಟರ ದಾಖಲೆ ನೀಡಲಾಗುವುದು. ತಾಲೂಕಿನ ವಿವಿಧ ಇಲಾಖೆಗಳಲ್ಲಿ ಕಾಮಗಾರಿ ನಡೆಸದೆ ಹಣ ಪಡೆದಿರುವ ಬಗ್ಗೆ ದಾಖಲೆ ನೀಡುತ್ತೇವೆ. ಸಂಬಂಧಪಟ್ಟ ಕಂದಾಯ, ಕೃಷಿ, ನೀರಾವರಿ, ಗ್ರಾಮೀಣ ಅಭಿವೃದ್ಧಿ, ಇಂಧನ, ಅಬಕಾರಿ ಹಾಗೂ ಅರಣ್ಯ ಇಲಾಖೆಗಳ ಅಧಿಕಾರಿಗಳನ್ನು ಅಮಾನತು ಮಾಡಬೇಕು. ತಾಲೂಕಿನಲ್ಲಿ ನಿಜವಾದ ಫಲಾನುಭವಿಗಳಿಗೆ ಬಗರ್ ಹುಕುಂ ಸಾಗುವಳಿ ಹಕ್ಕು ಪತ್ರ ಕೊಡದೆ ಭೂಗಳ್ಳರಿಗೆ, ರಾಜಕೀಯ ಮುಖಂಡರಿಗೆ ಅಧಿಕಾರಿಗಳು ಮಣೆ ಹಾಕುತ್ತಿದ್ದಾರೆ ಎಂದರು......(ಬಾಕ್ಸ್ )....
ಡಿಸೆಂಬರ್‌ನಲ್ಲಿ ಹಿರಿಯೂರು ಬಂದ್ತಾಲೂಕಿನ ಜವನಗೊಂಡನಹಳ್ಳಿ ಹೋಬಳಿಯ ಗಾಯಿತ್ರಿ ಜಲಾಶಯ ಸೇರಿದಂತೆ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವಂತೆ ಆಗ್ರಹಿಸಿ ರೈತ ಸಂಘದಿಂದ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಮುಂದುವರಿದಿದ್ದು, ಜವನಗೊಂಡನಹಳ್ಳಿ ಹಾಗೂ ಐಮಂಗಲ ಹೋಬಳಿ ಕೆರೆಗಳಿಗೆ ನೀರು ತುಂಬಿಸುವಂತೆ ಆಗ್ರಹಿಸಿ ಡಿಸೆಂಬರ್ ತಿಂಗಳಲ್ಲಿ ಹಿರಿಯೂರು ಬಂದ್ ಹಮ್ಮಿಕೊಳ್ಳಲಾಗುವುದು ಎಂದು ಕೆಟಿ ತಿಪ್ಪೇಸ್ವಾಮಿ ತಿಳಿಸಿದರು.
-----ಈ ಸಂದರ್ಭದಲ್ಲಿ ರೈತ ಮುಖಂಡರಾದ ಆಲೂರು ಸಿದ್ದರಾಮಣ್ಣ, ಅರಳಿಕೆರೆ ತಿಪ್ಪೇಸ್ವಾಮಿ, ಆರ್.ಕೆ.ಗೌಡ, ನಾಗರಾಜಪ್ಪ, ತಿಮ್ಮಾರೆಡ್ಡಿ, ರಂಗಸ್ವಾಮಿ, ಶಿವಣ್ಣ, ಜಯಣ್ಣ, ರಂಗಸ್ವಾಮಿ, ಬಾಷಾ, ಬಾಲಕೃಷ್ಣ, ರಾಮಣ್ಣ, ತಿಪ್ಪೇಸ್ವಾಮಿ, ರಾಮಕೃಷ್ಣ ಮುಂತಾದವರು ಹಾಜರಿದ್ದರು.
----ಚಿತ್ರ 1,2 ನಗರದ ರೈತ ಸಂಘದ ಕಛೇರಿಯಲ್ಲಿ ಸೋಮವಾರ ನಡೆದ ರೈತ ಮುಖಂಡರ ಸಭೆಯನ್ನು ಉದ್ದೇಶಿಸಿ ತಾಲೂಕು ಅಧ್ಯಕ್ಷ ಕೆಟಿ ತಿಪ್ಪೇಸ್ವಾಮಿ ಮಾತನಾಡಿದರು.