ಆಡಳಿತದಲ್ಲಿ ಭ್ರಷ್ಟಾಚಾರ, ಸ್ವಜನಪಕ್ಷಪಾತ, ಅಶಿಸ್ತು ಸಲ್ಲದು

KannadaprabhaNewsNetwork |  
Published : Oct 31, 2025, 03:30 AM IST
ಹುಕ್ಕೇರಿಯಲ್ಲಿ ಕರ್ನಾಟಕ ಲೋಕಾಯುಕ್ತ ಆಯೋಜಿಸಿದ ಜಾಗೃತಿ ಅರಿವು ಸಪ್ತಾಹವನ್ನು ಲೋಕಾಯುಕ್ತ ಪೊಲೀಸ್ ನಿರೀಕ್ಷಕ ವೆಂಕಟೇಶ ಯಡಹಳ್ಳಿ ಉದ್ಘಾಟಿಸಿದರು. | Kannada Prabha

ಸಾರಾಂಶ

ಸರ್ಕಾರಿ ಅಧಿಕಾರಿ-ಸಿಬ್ಬಂದಿ ಆಡಳಿತ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ಅಶಿಸ್ತು ತೋರಬಾರದು. ಸಾರ್ವಜನಿಕರಿಗೆ ಅತ್ಯುತ್ತಮ ಆಡಳಿತ ಸೇವೆ ಒದಗಿಸಲು ಪ್ರಾಮಾಣಿಕತೆ ಮತ್ತು ಪಾರದರ್ಶಕತೆ ಕಾಯ್ದುಕೊಂಡು ಕರ್ತವ್ಯ ನಿರ್ವಹಿಸಬೇಕು ಎಂದು ಲೋಕಾಯುಕ್ತ ಪೊಲೀಸ್ ನಿರೀಕ್ಷಕ ವೆಂಕಟೇಶ ಯಡಹಳ್ಳಿ ಕಿವಿಮಾತು ಹೇಳಿದರು.

ಕನ್ನಡಪ್ರಭ ವಾರ್ತೆ ಹುಕ್ಕೇರಿ

ಸರ್ಕಾರಿ ಅಧಿಕಾರಿ-ಸಿಬ್ಬಂದಿ ಆಡಳಿತ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ಅಶಿಸ್ತು ತೋರಬಾರದು. ಸಾರ್ವಜನಿಕರಿಗೆ ಅತ್ಯುತ್ತಮ ಆಡಳಿತ ಸೇವೆ ಒದಗಿಸಲು ಪ್ರಾಮಾಣಿಕತೆ ಮತ್ತು ಪಾರದರ್ಶಕತೆ ಕಾಯ್ದುಕೊಂಡು ಕರ್ತವ್ಯ ನಿರ್ವಹಿಸಬೇಕು ಎಂದು ಲೋಕಾಯುಕ್ತ ಪೊಲೀಸ್ ನಿರೀಕ್ಷಕ ವೆಂಕಟೇಶ ಯಡಹಳ್ಳಿ ಕಿವಿಮಾತು ಹೇಳಿದರು.ಇಲ್ಲಿನ ತಾಲೂಕು ಪಂಚಾಯತಿ ಸಭಾಭವನದಲ್ಲಿ ಗುರುವಾರ ಕರ್ನಾಟಕ ಲೋಕಾಯುಕ್ತ ಆಯೋಜಿಸಿದ ಜಾಗೃತಿ ಅರಿವು ಸಪ್ತಾಹ ಉದ್ಘಾಟಿಸಿ ಮಾತನಾಡಿದ ಅವರು, ಸಾರ್ವಜನಿಕರ ಆಪಾದನೆಗಳು ಮತ್ತು ಕುಂದುಕೊರತೆಗಳಿಗೆ ಸ್ಪಂದಿಸಿ ಅವುಗಳನ್ನು ಪರಿಹರಿಸುವಲ್ಲಿ ಯಾವುದೇ ರೀತಿಯಲ್ಲಿ ವಿಳಂಬ ಮಾಡಬಾರದು ಎಂದರು.ಆಡಳಿತಾತ್ಮಕ ಕ್ರಮಗಳ ವಿರುದ್ಧದ ದೂರುಗಳನ್ನು ಪರಿಶೀಲನೆ ಮಾಡಿ ಸಾರ್ವಜನಿಕ ಆಡಳಿತದ ಮಾನದಂಡಗಳನ್ನು ಸುಧಾರಿಸಬೇಕು. ಕಚೇರಿಗಳಿಗೆ ಬರುವ ನಾಗರೀಕರ ಕುಂದು-ಕೊರತೆಗಳನ್ನು ನಿವಾರಿಸಲು ಕಾನೂನಿನಡಿ ಕ್ರಮ ವಹಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗಳಿಗೂ ತಲುಪುವಂತೆ ಸೇವೆ ಸಲ್ಲಿಸಬೇಕು. ಇದರೊಂದಿಗೆ ಸಾರ್ವಜನಿಕರ ಜೀವನಮಟ್ಟವನ್ನು ಸುಧಾರಿಸುವಲ್ಲಿ ಪ್ರಯತ್ನಿಸಬೇಕು ಎಂದು ಸಲಹೆ ಮಾಡಿದರು.ಜನಸಾಮಾನ್ಯರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು. ಆಡಳಿತ ಯಂತ್ರದಲ್ಲಿ ಭ್ರಷ್ಟಾಚಾರ ನಿರ್ಮೂಲನೆಗೆ ಸಂಬಂಧಿಸಿದ ಮೇಲಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು. ಈ ಮೂಲಕ ಆಡಳಿತಾತ್ಮಕ ಶಿಸ್ತು ಕಾಪಾಡಿಕೊಳ್ಳಬೇಕು. ಕಳಪೆ ಕಾಮಗಾರಿಗಳು ಮತ್ತು ಸರ್ಕಾರಿ ಹಣದ ದುರುಪಯೋಗ ಆಗದಂತೆ ನೋಡಿಕೊಳ್ಳಬೇಕು. ಕರ್ತವ್ಯ ನಿರ್ವಹಣೆಯಲ್ಲಿ ಉದಾಸೀನತೆ ತೋರುವ ಅಧಿಕಾರಿ-ಸಿಬ್ಬಂದಿ ವಿರುದ್ಧ ನಿರ್ಧಾಕ್ಷೀಣ್ಯ ಕ್ರಮ ವಹಿಸಲಾಗುವುದು ಎಂದು ಎಚ್ಚರಿಸಿದರು.ತಹಸೀಲ್ದಾರ್‌ ಬಲರಾಮ ಕಟ್ಟಿಮನಿ, ತಾಲೂಕು ಪಂಚಾಯತಿ ಇಒ ಟಿ.ಆರ್.ಮಲ್ಲಾಡದ, ಲೋಕಾಯುಕ್ತ ಸಿಬ್ಬಂದಿಯರಾದ ಎಲ್.ಎಸ್.ಹೊಸಮನಿ, ಆರ್.ಜಿ.ಬೋಸಲೆ, ಕೆ.ಧನಂಜಯ, ವ್ಯವಸ್ಥಾಪಕ ಅವಿನಾಶ ಹೊಳೆಪ್ಪಗೋಳ, ಸಿಬ್ಬಂದಿ ಶಶಿಕಾಂತ ಹೊಸಮನಿ, ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.ಬಿಸಿಯೂಟ ಯೋಜನೆ ಸಹಾಯಕಿ ನಿರ್ದೇಶಕಿ ಸವಿತಾ ಹಲಕಿ ಸ್ವಾಗತಿಸಿದರು. ತಾಪಂ ಯೋಜನಾಧಿಕಾರಿ ಪ್ರಶಾಂತ ಮುನ್ನೋಳಿ ನಿರೂಪಿಸಿದರು. ಇದೇ ವೇಳೆ ಸಭೆಯಲ್ಲಿದ್ದ ಅಧಿಕಾರಿ-ಸಿಬ್ಬಂದಿಯರಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಜೊತೆಗೆ ವಿವಿಧ ಇಲಾಖೆಗಳ ಕಚೇರಿಗಳಿಗೆ ಕರಪತ್ರಗಳನ್ನು ಅಂಟಿಸಲಾಯಿತು.

PREV

Recommended Stories

ಕಸ ಸುರಿಯುವ ಹಬ್ಬದಿಂದ ಜನರಲ್ಲಿ ಜಾಗೃತಿ - ಕಂಡಲ್ಲಿ ಕಸ ಹಾಕುವವರ ಮನೆ ಮುಂದೆ ತ್ಯಾಜ್ಯ
ಟನಲ್ ರಸ್ತೆ, ಎ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ: ಡಿಕೆಶಿ