ಬೆಂಗಳೂರು: ಕರಾವಳಿ ಭಾಗದಲ್ಲಿ ಅಭಿವೃದ್ಧಿ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆಗೆ ಪೂರಕವಾಗಿ ಕರಾವಳಿಯಲ್ಲಿ ಸಚಿವ ಸಂಪುಟ ಸಭೆ ನಡೆಸಲು ತೀರ್ಮಾನಿಸಿದ್ದೇವೆ. ಅಷ್ಟರೊಳಗೆ ಕರಾವಳಿ ನಿಯಂತ್ರಣ ವಲಯ (ಸಿಆರ್‌ಝಡ್) ನೀತಿಯಲ್ಲಿನ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು’ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.
ವಿಧಾನಸೌಧದಲ್ಲಿ ಶುಕ್ರವಾರ ನಡೆದ ಕರಾವಳಿ ಪ್ರವಾಸೋದ್ಯಮ ಕುರಿತ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಕರಾವಳಿ ಭಾಗದಲ್ಲಿ ಅಭಿವೃದ್ಧಿಗೆ ಅಡ್ಡಿಯಾಗುತ್ತಿರುವ ಸಿಆರ್‌ಝಡ್ ಹಾಗೂ ಅರಣ್ಯ ಇಲಾಖೆಯ ತಾಂತ್ರಿಕ ಸಮಸ್ಯೆಗಳ ಕುರಿತು 15-20 ದಿನಗಳಲ್ಲಿ ವರದಿ ನೀಡಬೇಕು. ವರದಿಯಲ್ಲಿ ಸಮಸ್ಯೆಗಳು ಹಾಗೂ ಪರಿಹಾರಗಳ ಕುರಿತು ವಿವರಣೆ ನೀಡಬೇಕು ಸೂಚನೆ ನೀಡಿದರು.
ಕರಾವಳಿಯಲ್ಲಿ ಆರ್ಥಿಕತೆಗೆ ಅತ್ಯುತ್ತಮ ಅವಕಾಶಗಳಿವೆ. ಅಲ್ಲಿ ಹೂಡಿಕೆದಾರರಿಗೆ ಸುಗಮ ಮತ್ತು ಸರಳವಾದ ಮಾರ್ಗಗಳನ್ನು ಸೃಜಿಸಬೇಕು. ಉದ್ಯಮಿಗಳಿಗೆ ಆಗುತ್ತಿರುವ ಇಲಾಖಾ ಕಿರಿಕಿರಿಗಳಿಗೆ ಪರಿಹಾರ ಕಂಡು ಹಿಡಿಯಬೇಕು. ಕರಾವಳಿ ಸಂಸ್ಕೃತಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಾರ ಮಾಡುವ ಜತೆಗೆ ಹೆಚ್ಚು ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆಗೆ ಆದ್ಯತೆ ನೀಡಬೇಕು ಎಂದು ಸ್ಪಷ್ಟ ನಿರ್ದೇಶನ ನೀಡಿದರು ಎಂದು ತಿಳಿದುಬಂದಿದೆ.ಕರ್ನಾಟಕ ಪ್ರವಾಸೋದ್ಯಮ ನೀತಿಯಡಿ 718.63 ಕೋಟಿ ರು. ಅಂದಾಜು ವೆಚ್ಚದಲ್ಲಿ 45 ಯೋಜನೆಗಳ ಹೂಡಿಕೆಗೆ ಅನುಮೋದನೆ ನೀಡಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಅವರು ಸಭೆಯಲ್ಲಿ ಮಾಹಿತಿ ನೀಡಿದರು.ಈ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸದ್ಯ ಅನುಮೋದಿಸಿರುವ 45 ಯೋಜನೆಗಳಿಂದ 4500 ಉದ್ಯೋಗ ಸೃಷ್ಟಿಯಾಗುತ್ತದೆ. ಈ ಪ್ರಮಾಣ ಇನ್ನಷ್ಟು ಹೆಚ್ಚಾಗಬೇಕು. ಅತಿ ಉದ್ದದ ಸಮುದ್ರ ತೀರಗಳು ಇರುವ ಪ್ರದೇಶಗಳಲ್ಲಿ ರಾಜ್ಯದ ಕರಾವಳಿಯೂ ಸೇರಿದೆ. ನಮ್ಮ ಪರಿಸರಕ್ಕೆ ಧಕ್ಕೆ ಆಗದಂತೆ ಸಮುದ್ರ ತೀರಗಳನ್ನು ಪ್ರವಾಸೋದ್ಯಮ ಅಭಿವೃದ್ಧಿಯಲ್ಲಿ ಪರಿಗಣಿಸಬೇಕು ಎಂದು ಸಲಹೆ ನೀಡಿದರು.
ಕಲೆಗೆ ಪ್ರಾಶಸ್ತ್ಯ ಹೆಚ್ಚಿಸಿ-ರಿಷಭ್ ಶೆಟ್ಟಿ:
ಉದ್ಯಮಿಗಳು ಹೆಲಿ ಟೂರಿಸಂ ಅಭಿವೃದ್ಧಿ, ವಿಶೇಷ ಕ್ಷೇತ್ರವಾಗಿ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ, ಪ್ರವಾಸೋದ್ಯಮ ವಲಯ ಮತ್ತು ಬೃಹತ್ ಪ್ರವಾಸೋದ್ಯಮ ಯೋಜನೆ, ಕರಾವಳಿ ಮೇಳ, ಉತ್ಸವಗಳು ಮತ್ತು ಮಾರ್ಕೆಟಿಂಗ್, ಕರಾವಳಿ ಸಂಸ್ಕೃತಿ, ಆಚರಣೆ, ಹೆಮ್ಮೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರ ಮಾಡುವ ಬಗ್ಗೆ ಸಲಹೆಗಳನ್ನು ನೀಡಿದರು.
*ಕರಾವಳಿ ಮೇಳಗಳು, ಉತ್ಸವಗಳು ಮತ್ತು ಮಾರ್ಕೆಟಿಂಗ್*ಕರಾವಳಿ ಸಂಸ್ಕೃತಿ, ಆಚರಣೆ, ಹೆಮ್ಮೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಾರ ಮತ್ತು ಪ್ರಚಾರ ಮಾಡುವುದು.