23ಕ್ಕೆ ಮುಖ್ಯಶಿಕ್ಷಕರ ಹುದ್ದೆ ಬಡ್ತಿಗೆ ಕೌನ್ಸೆಲಿಂಗ್‌

KannadaprabhaNewsNetwork |  
Published : Nov 20, 2026, 01:15 AM IST
ಫೋಟೋ- ನಮೋಶಿ | Kannada Prabha

ಸಾರಾಂಶ

ಕಲಬುರಗಿ ಪ್ರೌಢಶಾಲಾ ಸಹಶಿಕ್ಷಕರಿಂದ ಮುಖ್ಯಶಿಕ್ಷಕರ ಹುದ್ದೆಗೆ ಬಡ್ತಿ ನೀಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕೆಂಬ ಶಿಕ್ಷಕರ ಬಹುದಿನಗಳ ಬೇಡಿಕೆಗೆ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ. ನಮೋಶಿಯವರು ನಡೆಸಿದ ನಿರಂತರ ಪ್ರಯತ್ನದ ಫಲವಾಗಿ ಈಗ ಮಹತ್ವದ ಸ್ಪಂದನೆ ದೊರೆತಿದೆ.

ಕಲಬುರಗಿ ಪ್ರೌಢಶಾಲಾ ಸಹಶಿಕ್ಷಕರಿಂದ ಮುಖ್ಯಶಿಕ್ಷಕರ ಹುದ್ದೆಗೆ ಬಡ್ತಿ ನೀಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕೆಂಬ ಶಿಕ್ಷಕರ ಬಹುದಿನಗಳ ಬೇಡಿಕೆಗೆ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ. ನಮೋಶಿಯವರು ನಡೆಸಿದ ನಿರಂತರ ಪ್ರಯತ್ನದ ಫಲವಾಗಿ ಈಗ ಮಹತ್ವದ ಸ್ಪಂದನೆ ದೊರೆತಿದೆ.ಕಳೆದ ಹಲವು ವರ್ಷಗಳಿಂದ ಮುಖ್ಯಶಿಕ್ಷಕರ ಹುದ್ದೆಯ ಬಡ್ತಿಗಾಗಿ ಅರ್ಹ ಶಿಕ್ಷಕರು ಕಾಯುತ್ತಿದ್ದರು. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ ಶಶೀಲ್ ಜಿ. ನಮೋಶಿಯವರು ಶಿಕ್ಷಕರ ಪರವಾಗಿ ನಿರಂತರವಾಗಿ ಧ್ವನಿ ಎತ್ತಿ, ಶಾಲಾ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸತತ ಸಂಪರ್ಕದಲ್ಲಿದ್ದು, ಬಡ್ತಿ ಪ್ರಕ್ರಿಯೆ ಶೀಘ್ರವಾಗಿ ಪೂರ್ಣಗೊಳಿಸುವಂತೆ ವೈಯಕ್ತಿಕ ಮುತುವರ್ಜಿ ವಹಿಸಿ ಒತ್ತಾಯಿಸಿದ್ದರು.

ಶಿಕ್ಷಕರ ಈ ಬಹುದಿನಗಳ ಬೇಡಿಕೆ ಕೇವಲ ಮನವಿಗೆ ಸೀಮಿತವಾಗದೆ ಕಾರ್ಯರೂಪಕ್ಕೆ ಬರಬೇಕು ಎಂಬ ಉದ್ದೇಶದಿಂದ ಇಲಾಖೆಯ ಮಟ್ಟದಲ್ಲಿ ನಿರಂತರ ಪ್ರಯತ್ನ ನಡೆಸಿ ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆಯುವ ಮೂಲಕ ಬಡ್ತಿ ಪ್ರಕ್ರಿಯೆಗೆ ವೇಗ ನೀಡಲು ಶಶೀಲ್ ಜಿ. ನಮೋಶಿಯವರು ಪ್ರಾಮಾಣಿಕ ಪ್ರಯತ್ನ ನಡೆಸಿದ್ದರು.

ಅವರ ನಿರಂತರ ಪ್ರಯತ್ನಗಳ ಫಲವಾಗಿ ಕಲಬುರಗಿ ವಿಭಾಗದ ಅಪರ ಆಯುಕ್ತರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯವರು ನ.17ರಂದು ಆದೇಶ ಹೊರಡಿಸಿದ್ದು, ಅದರಂತೆ ನ.23ರಂದು ಬೆಳಗ್ಗೆ 11:30 ಗಂಟೆಗೆ ಕಲಬುರಗಿಯ ಕ್ಷೇತ್ರ ಆಯುಕ್ತರ ಕಚೇರಿಯಲ್ಲಿ ಬಡ್ತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸ್ಥಳ ಆಯ್ಕೆ ಕೌನ್ಸೆಲಿಂಗ್ ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ.

ಶಿಕ್ಷಕರ ಸಮಸ್ಯೆಗಳನ್ನು ಕೇವಲ ಆಲಿಸುವುದಷ್ಟೇ ಅಲ್ಲದೆ, ಅವುಗಳ ಪರಿಹಾರಕ್ಕಾಗಿ ನಿರಂತರವಾಗಿ ಪ್ರಯತ್ನಿಸಿದಾಗ ಸಕಾರಾತ್ಮಕ ಫಲಿತಾಂಶ ದೊರೆಯುತ್ತದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಶಿಕ್ಷಕರ ಹಿತಾಸಕ್ತಿಯೇ ತಮ್ಮ ಆದ್ಯತೆಯಾಗಿದ್ದು, ಶಿಕ್ಷಕರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಸದಾ ಬದ್ಧನಾಗಿದ್ದೇನೆ ಎಂದು ಶಶೀಲ್ ನಮೋಶಿಯವರು ತಿಳಿಸಿದ್ದಾರೆ. ಬಹುದಿನಗಳಿಂದ ಬಡ್ತಿಗಾಗಿ ಕಾಯುತ್ತಿದ್ದ ಅರ್ಹ ಶಿಕ್ಷಕರಿಗೆ ಈ ಪ್ರಮುಖ ಬೆಳವಣಿಗೆ ಹೊಸ ಭರವಸೆ ಮೂಡಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಟ್ರ್ಯಾಕ್ಟರ್‌ಗಳಲ್ಲಿ ಹಾಡುಗಳ ಅಬ್ಬರ, ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಖಾಸಗಿ ಶಾಲಾ ಶಿಕ್ಷಕರ ಪ್ರತಿಭಟನೆ