ಸಂಭ್ರಮದ ಕ್ರಿಸ್‌ಮಸ್‌ ಆಚರಣೆಗೆ ಕ್ಷಣಗಣನೆ

KannadaprabhaNewsNetwork |  
Published : Dec 25, 2025, 02:30 AM IST
ಮುಂಡಗೋಡ: ಹಿಂದೂ, ಮುಸ್ಲಿಂ, ಕ್ರೈಸ್ತ, ಟಿಬೇಟಿಯನ್, ಜೈನ್ ಸೇರಿದಂತೆ ಹತ್ತಾರು ರ‍್ಮ ನೂರಾರು ಜಾತಿ ಜನಾಂಗವನ್ನೊಳಗೊಂಡು ಭಾವೈಕ್ಯತೆಗೆ ಹೆಸರಾಗಿರುವ ಮುಂಡಗೋಡ ತಾಲೂಕಿನಲ್ಲಿ ಈಗ ಏಸು ಕ್ರಿಸ್ತನ ಜನ್ಮದಿನದ ಅಂಗವಾಗಿ ಆಚರಿಸಲ್ಪಡುವ ಕ್ರಿಶ್ಚಿಯನ್ ಸಮುದಾಯದ ಏಕೈಕವಾದ ಪವಿತ್ರ ಹಬ್ಬ ಕ್ರಿಸ್‌ಮಸ್ ಗೆ ನಿರೀಕ್ಷಿತ ಸಕಲ ಸಿದ್ದತೆಗಳಾಗಿದ್ದು, ಲೋಕ ರಕ್ಷಕ ಯೇಸುವಿನ ಜನ್ಮ ದಿನಾಚರಣೆ ಮೇರಿ ಕ್ರಿಸ್‌ಮಸ್ ಹಬ್ಬವನ್ನು ಕ್ರೈಸ್ತ ಭಾಂದವರು ವಿಜೃಂಬಣೆಯಿಂದ ಆಚರಿಸಲು ಸಿದ್ದವಾಗಿದ್ದು, ಚರ್ಚ್ ಹಾಗೂ ಕ್ರಿಶ್ಚಿಯನ್ ಸಮುದಾಯದವರ ಮನೆಗಳು ದೀಪಾಲಂಕಾರದಿಂದ  ಶೃಂಗರಿಸಕೊಂಡು ಕಂಗೊಳಿಸುತ್ತಿವೆ. ಎಲ್ಲೆಂದರಲ್ಲಿ ಈಗ ಕ್ರಿಸ್ ಮಸ್ ಕರ‍್ಯಕ್ರಮಗಳು ಜರುಗುತ್ತಿದ್ದು, ಕ್ರಿಶ್ಚಿಯನ್ ಭಾಂಧವದರಲ್ಲಿ ಸಡಗರ ಸಂಭ್ರಮದ ವಾತಾವರಣ ಮನೆ ಮಾಡಿದೆ.  | Kannada Prabha

ಸಾರಾಂಶ

ಭಾವೈಕ್ಯತೆಗೆ ಹೆಸರಾಗಿರುವ ತಾಲೂಕು ಈಗ ಕ್ರಿಸ್‌ಮಸ್‌ ಆಚರಣಗೆ ಸಜ್ಜುಗೊಂಡಿದೆ. ಕ್ರೈಸ್ತ ಭಾಂದವರು ವಿಜೃಂಭಣೆಯಿಂದ ಹಬ್ಬ ಆಚರಿಸಲು ಸಿದ್ಧವಾಗಿದೆ.

ಕನ್ನಡಪ್ರಭ ವಾರ್ತೆ ಮುಂಡಗೋಡ

ಭಾವೈಕ್ಯತೆಗೆ ಹೆಸರಾಗಿರುವ ತಾಲೂಕು ಈಗ ಕ್ರಿಸ್‌ಮಸ್‌ ಆಚರಣಗೆ ಸಜ್ಜುಗೊಂಡಿದೆ. ಕ್ರೈಸ್ತ ಭಾಂದವರು ವಿಜೃಂಭಣೆಯಿಂದ ಹಬ್ಬ ಆಚರಿಸಲು ಸಿದ್ಧವಾಗಿದ್ದು, ಚರ್ಚ್ ಹಾಗೂ ಕ್ರಿಶ್ಚಿಯನ್ ಸಮುದಾಯದವರ ಮನೆಗಳು ದೀಪಾಲಂಕಾರದಿಂದ ಕಂಗೊಳಿಸುತ್ತಿವೆ. ಎಲ್ಲೆಂದರಲ್ಲಿ ಈಗ ಕ್ರಿಸ್‌ಮಸ್ ಕರ‍್ಯಕ್ರಮಗಳು ಜರುಗುತ್ತಿದ್ದು, ಕ್ರಿಶ್ಚಿಯನ್ ಭಾಂದವರಲ್ಲಿ ಸಡಗರ ಸಂಭ್ರಮದ ವಾತಾವರಣ ಮನೆ ಮಾಡಿದೆ.

ಕೊಂಕಣಿ ಭಾಷೆ ಮಾತನಾಡುವ ಕೆಥೋಲಿಕ್, ಮಲಯಾಳಂ ಭಾಷಿಕ ಮಲಬಾರಿ ಕ್ರಿಶ್ಚಿಯನ್ ಹಾಗೂ ತಮಿಳು ಭಾಷಿಕ ಕ್ರಿಶ್ಚಿಯನ್ ಸೇರಿದಂತೆ ಕೆಥೋಲಿಕ್, ಮರ‍್ಥೋಮಾ, ಇಮ್ಯಾನ್ಯುಯಲ್ ಸೇರಿದಂತೆ ಹೀಗೆ ಹಲವು ಪಂಗಡಗಳ ಸಾವಿರಾರು ಸಂಖ್ಯೆಯಲ್ಲಿ ಕ್ರಿಶ್ಚಿಯನ್ ಜನಾಂಗ ಮುಂಡಗೋಡದಲ್ಲಿ ನೆಲೆಸಿದೆ. ತಾಲೂಕಿನ ಮೈನಳ್ಳಿ, ಕೆಂದಲಗೇರಿ, ಉಗ್ಗಿನಕೇರಿ ಮುಂತಾದ ಭಾಗದ ಅರಣ್ಯ ವಾಸಿ ಸಿದ್ದಿ ಜನಾಂಗದಲ್ಲಿಯೂ ಬಹುತೇಕ ಕ್ರಿಶ್ಚಿಯನ್ ಧರ್ಮ ಪಾಲಕರಾಗಿದ್ದಾರೆ. ಅವರಿಗೂ ಕೂಡ ಕ್ರಿಸ್‌ಮಸ್ ದೊಡ್ಡ ಹಬ್ಬವಾಗಿದೆ. ಕ್ರಿಶ್ಚಿಯನ್ ಜನಾಂಗ ಮಾತ್ರವಲ್ಲದೇ ಏಸುವಿನ ಅನುಯಾಯಿಗಳಾದ ಇತರೇ ಧರ್ಮಿಯರು ಕೂಡ ಕ್ರಿಸ್‌ಮಸ್ ಆಚರಣೆ ಮಾಡುವಲ್ಲಿ ಯಾವುದೇ ರೀತಿ ಹಿಂದೆ ಬಿದ್ದಿಲ್ಲ.

ಪಟ್ಟಣ ಸೇರಿದಂತೆ ಮಳಗಿ, ಮೈನಳ್ಳಿ, ಇಂದೂರ, ಕೊಪ್ಪ, ಶಾಂತಿನಗರ, ಅರಶಿಣಗೇರಿ, ಕರಗೊಳ್ಳಿ ಗ್ರಾಮ ಹೀಗೆ ತಾಲೂಕಿನಲ್ಲಿ ಹತ್ತಾರು ಚರ್ಚ್‌ಗಳಿದ್ದು, ವಿವಿಧೆಡೆಗಳಲ್ಲಿ ಕ್ರಿಸ್‌ಮಸ್ ಅಂಗವಾಗಿ ಕ್ರೈಸ್ತ ಧರ್ಮ ಗುರುಗಳ ನೇತೃತ್ವದಲ್ಲಿ ವಿಶೇಷ ಪೂಜೆಗಳನ್ನು ನಡೆಸಲಾಗಿದ್ದು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸಾಂತಾ ವೇಷ ಧರಿಸಿ ಹಾಡು ನೃತ್ಯದ ಮೂಲಕ ಕ್ರಿಶ್ಚಿಯನ್ ಸಮುದಾಯದವರಿಗೆ ಏಸುವಿನ ಸಂದೇಶಗಳ ಬಗ್ಗೆ ಮನವರಿಕೆ ಮಾಡಲಾಗುತ್ತಿದೆ. ಪಟ್ಟಣದ ಲೊಯೋಲಾ ವಿಕಾಸ ಕೇಂದ್ರ ಸೇರಿದಂತೆ ವಿವಿಧ ಚರ್ಚ್‌ ಆವರಣಗಳಲ್ಲಿ ಏಸು ಹಾಗೂ ಸೆಂಟ್ ಮೇರಿ ರೂಪ ಉಳ್ಳ ಗೊಂಬೆಗಳ ಗೋದಳಿ ನಿರ್ಮಾಣ ಮಾಡಲಾಗಿದೆ. ಕ್ರಿಸ್‌ಮಸ್ ಗಿಡಗಳಿಗೆ ದೀಪಾಲಂಕಾರ ಮಾಡಲಾಗಿದ್ದು, ಕ್ರೈಸ್ತರ ಮನೆಗಳಲ್ಲಿ ಗೋದಳಿಗಳನ್ನು ನಿರ್ಮಿಸಿ ಕೇಕ್ ಕತ್ತರಿಸುವ ಮೂಲಕ ಯೇಸುವಿನ ಹುಟ್ಟುಹಬ್ಬ ಆಚರಣೆ ಮಾಡಲು ಭರದ ಸಿದ್ಧತೆ ನಡೆಸಲಾಗಿದೆ.

ಡಿ. ೨೫ರಂದು ಕ್ರಿಸ್‌ಮಸ್ ಗೀತೆ ಹೇಳಿ ಸಿಹಿ ತಿಂಡಿ, ತಯಾರಿಸಿ ನೆರೆ ಹೊರೆಯವರಿಗೆ ಹಂಚುವ ಮೂಲಕ ಸಂಬಂಧಿಕರು ಹಾಗೂ ಸ್ನೇಹಿತರಿಗೆ ಔತಣ ಕೂಟ ನೀಡಿ ಆತಿಥ್ಯ ಸತ್ಕಾರ ಮಾಡಲಾಗುತ್ತದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಹಿಳೆ, ಮಕ್ಕಳ ಮೇಲಿನ ದೌರ್ಜನ್ಯ ತಡೆಯಲು ಶ್ರಮಿಸಲಿ: ಮಂಜುನಾಥ ಕಂಬಳಿ
ಸೀತಾರಾಂ ತಾಂಡಾ ಗ್ರಾಪಂ ಚುನಾವಣೆ: ಫಲಿತಾಂಶ ಪ್ರಕಟ