ಗಜೇಂದ್ರಗಡ: ಪಟ್ಟಣದಲ್ಲಿ ನಡೆಯುತ್ತಿರುವ ೧೦ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಜ.೧೯ ರಂದು ಜಕ್ಕಲಿ ಗ್ರಾಮದಲ್ಲಿ ಕನ್ನಡ ಜ್ಯೋತಿ ಹಾಗೂ ತಾಯಿ ಭುವನೇಶ್ವರಿ ಭಾವಚಿತ್ರದ ಮೆರವಣಿಗೆಗೆ ವಿದ್ಯುಕ್ತವಾಗಿ ಚಾಲನೆ ನೀಡಿದ್ದು, ರೋಣ ರಸ್ತೆಯ ಸಿಬಿಎಸ್‌ಸಿ ಶಾಲೆಯಲ್ಲಿ ಜ. ೨೦ ಹಾಗೂ ೨೧ ರಂದು ಕನ್ನಡ ಸಾಹಿತ್ಯ ಸಮ್ಮೇಳನ ಅದ್ಧೂರಿಯಾಗಿ ನಡೆಯಲಿದೆ.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು,ಗಜೇಂದ್ರಗಡ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಡೆಯಲಿರುವ ೧೦ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳದಲ್ಲಿ ಜ.೨೦ರ ಬೆಳಗ್ಗೆ ೮ ಕ್ಕೆ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಸ್ವಾಗತ ಸಮಿತಿ ಅಧ್ಯಕ್ಷ, ಶಾಸಕ ಜಿ.ಎಸ್.ಪಾಟೀಲ ರಾಷ್ಟ್ರಧ್ವಜಾರೋಹಣ ನೆರವೇರಿಸಲಿದ್ದು, ಕಸಾಪ ಜಿಲ್ಲಾಧ್ಯಕ್ಷ ವಿವೇಕಾನಂದಗೌಡ ಪಾಟೀಲ ಅವರಿಂದ ಪರಿಷತ್ತಿನ ಧ್ವಜಾರೋಹಣ ಹಾಗೂ ಕಸಾಪ ತಾಲೂಕಾಧ್ಯಕ್ಷ ಅಮರೇಶ ಗಾಣಗೇರ ಕನ್ನಡ ಧ್ವಜಾರೋಹಣ ನೆರವೇರಿಸಲಿದ್ದಾರೆ.ಬಳಿಕ ಬೆಳಗ್ಗೆ ೮:೩೦ಕ್ಕೆ ಇಲ್ಲಿನ ಮೈಸೂರಮಠದಿಂದ ತಾಯಿ ಭುವನೇಶ್ವರಿ ಹಾಗೂ ಸಮ್ಮೇಳನ ಸರ್ವಾಧ್ಯಕ್ಷರ ಮೆರವಣಿಗೆ ಆರಂಭವಾಗಲಿದ್ದು, ಮೈಸೂರ ಮಠದ ವಿಜಯಮಹಾಂತ ಸ್ವಾಮೀಜಿ, ಟಕ್ಕೆದ ಬಾಬಾ ಹಜರತ್ ನಿಜಾಮುದ್ಧೀನಶಾಹ ಮಕಾನದಾರ ಅಶರಫಿ ಸಾನ್ನಿಧ್ಯದಲ್ಲಿ ಇರಲಿದೆ. ಮೆರವಣಿಗೆಗೆ ಪುರಸಭೆ ಅಧ್ಯಕ್ಷ ಸುಭಾಸ ಮ್ಯಾಗೇರಿ ಚಾಲನೆ ನೀಡಲಿದ್ದಾರೆ.
ಜ. ೨೦ರ ಬೆಳಗ್ಗೆ ೧೧ ಕ್ಕೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಗದಗ ತೋಂಟದಾರ್ಯ ಸಂಸ್ಥಾನ ಮಠದ ಸಿದ್ದರಾಮ ಸ್ವಾಮೀಜಿ, ಮೈಸೂರ ಮಠದ ವಿಜಯಮಹಾಂತ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ವಿಧಾನ ಪರಿಷತ್ತ ಸಭಾಪತಿ ಬಸವರಾಜ ಹೊರಟ್ಟಿ ಘನ ಉಪಸ್ಥಿತಿಯಲ್ಲಿ ಹಾಗೂ ಸಚಿವ ಡಾ. ಎಚ್.ಕೆ.ಪಾಟೀಲ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಚಿವ ಶಿವರಾಜ ತಂಗಡಗಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಷಾರ್ಚನೆ ಸಲ್ಲಿಸಲಿದ್ದಾರೆ.ಸಮ್ಮೇಳನದ ಸರ್ವಾಧ್ಯಕ್ಷ ಪ್ರೊ. ಚಂದ್ರಶೇಖರ ವಸ್ತ್ರದ ಹಾಗೂ ಸ್ವಾಗತ ಸಮಿತಿ ಅಧ್ಯಕ್ಷ ಜಿ.ಎಸ್. ಪಾಟೀಲ ಅಧ್ಯಕ್ಷತೆ ವಹಿಸಲಿದ್ದು, ನಾಡೋಜ ಡಾ.ಮಹೇಶ ಜೋಶಿ ಇವರಿಂದ ಅಂತರಗಂಗೆ ಸ್ಮರಣ ಸಂಚಿಕೆ ಲೋಕಾರ್ಪಣೆ ಮಾಡಲಿದ್ದಾರೆ.
ಕಸಾಪ ಜಿಲ್ಲಾಧ್ಯಕ್ಷ ವಿವೇಕಾನಂದಗೌಡ ಪಾಟೀಲ ಆಶಯ ನುಡಿ ಸಲ್ಲಿಸಲಿದ್ದಾರೆ. ಸಂಸದ ಬಸವರಾಜ ಬೊಮ್ಮಾಯಿ ಅವರಿಂದ ಸಮ್ಮೇಳನಾಧ್ಯಕ್ಷರ ಭಾಷಣ ಪ್ರತಿ ಲೋಕಾರ್ಪಣೆ ಮಾಡಲಿದ್ದು, ಸಂಸದ ಪಿ.ಸಿ. ಗದ್ದಿಗೌಡ್ರ ವಸ್ತು ಪ್ರದರ್ಶನ ಉದ್ಘಾಟನೆ, ಶಾಸಕ ಸಿ.ಸಿ. ಪಾಟೀಲ ಗ್ರಂಥಗಳ ಲೋಕಾರ್ಪಣೆ ಮಾಡಲಿದ್ದಾರೆ. ಶಾಸಕ ಚಂದ್ರು ಲಮಾಣಿ ಪುಸ್ತಕ ಮಳಿಗೆ ಉದ್ಘಾಟಿಲಿದ್ದು, ಶಾಸಕ ಎಸ್.ವಿ. ಸಂಕನೂರ ಚಿತ್ರಕಲಾ ಪ್ರದರ್ಶನ ಉದ್ಘಾಟಿಸಲಿದ್ದಾರೆ.ವಿಶೇಷ ಆಮಂತ್ರಿರಾಗಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ, ಜಿಪಂ ಅಧಿಕಾರಿ ಭರತ ಎಸ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ್ರ ಆಗಮಿಸಲಿದ್ದಾರೆ.
ಮಧ್ಯಾಹ್ನ ೨ಗಂಟೆಗೆ ಹಳೆ ಹೊನ್ನು ಕವಿಗೋಷ್ಠಿ ನಂತರ ಗೋಷ್ಠಿ-೨ ಗದಗ ಜಿಲ್ಲೆ ಬೆಳ್ಳಿ ಬೆಳಕು ನಡೆಯಲಿದೆ. ಸಂಜೆ ೬ ಗಂಟೆಗೆ ಸಾಧಕರಿಗೆ ಸುರ್ವಣ ಸಿರಿ ಗೌರ ಸನ್ಮಾನ ಕಾರ್ಯಕ್ರಮ ಸಂಜೆ ೭ ಗಂಟೆ ಸಾಂಸ್ಕೃತಿಕ ಕಾರ್ಯಕ್ರಮ.ಜ. ೨೧ ಮಂಗಳವಾರ ಬೆಳಗ್ಗೆ ೭ಕ್ಕೆ ವಿಶೇಷ ಗೋಷ್ಠಿ:
ಗಜೇಂದ್ರಗಡ ಇತಿಹಾಸ ಮತ್ತು ಪರಂಪರೆ ಅಂದು ಬೆಳಗ್ಗೆ ೧೧ಕ್ಕೆ ಗೋಷ್ಠಿ-೩ ಗದಗ ಜಿಲ್ಲೆಯ ವಿಶೇಷ, ಮಧ್ಯಾಹ್ನ ೧ಕ್ಕೆ ಗೋಷ್ಠಿ-೪ ಸಮ್ಮೇಳಾನಧ್ಯಕ್ಷರ ಬದುಕು ಮತ್ತು ಬರಹ, ೨ ಗಂಟೆಗೆ ಕವಿಗೋಷ್ಠಿ, ಮಧ್ಯಾಹ್ನ ೪ ಗಂಟೆಗೆ ಬಹಿರಂಗ ಅಧಿವೇಶನ ಸಂಜೆ ೪.೩೦ಕ್ಕೆ ಸಾಧಕರಿಗೆ ಸುರ್ವಣ ಸಂಭ್ರಮ ಗೌರವ ಸನ್ಮಾನ ಸಂಜೆ ೬ ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಮುಂಡರಗಿಯ ಡಾ. ಅನ್ನದಾನೀಶ್ವರ ಸ್ವಾಮೀಜಿ, ಫಕೀರೇಶ್ವರ ಸಂಸ್ಥಾನಮಠದ ಜ. ಫಕೀರ ದಿಂಗಾಲೇಶ್ವರ ಸ್ವಾಮೀಜಿ, ಅನ್ನದಾನೀಶ್ವರ ಸಂಸ್ಥಾನಮಠದ ಮುಪ್ಪಿನ ಬಸಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಪ್ರೊ. ಚಂದ್ರಶೇಖರ ವಸ್ತ್ರದ ಸಮ್ಮೇಳನಾಧ್ಯಕ್ಷ ನುಡಿಗಳನ್ನಾಡಲಿದ್ದಾರೆ. ಶಾಸಕ ಜಿ.ಎಸ್. ಪಾಟೀಲ, ಸಿದ್ದಲಿಂಗೇಶ್ವರ ಪಾಟೀಲ, ಬಸವರಾಜ ನವಲಗುಂದ, ವಿ.ಬಿ. ಸೋಮನಕಟ್ಟಿಮಠ ಸೇರಿ ಇತರರು ಉಪಸ್ಥಿತಿ ಇರಲಿದ್ದಾರೆ.