ಸಚಿವ ಸಂಪುಟಕ್ಕೆ ಕ್ಷಣಗಣನೆ: ಮಾದಪ್ಪನ ಬೆಟ್ಟ ಜಗಮಗ

KannadaprabhaNewsNetwork |  
Published : Apr 24, 2025, 12:01 AM IST
ಲೈಟಿಂಗ್ | Kannada Prabha

ಸಾರಾಂಶ

ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆಗೆ ಕ್ಷಣಗಣನೆ ಆರಂಭಗೊಂಡಿದ್ದು ಇಡೀ ಕ್ಷೇತ್ರ ವಿದ್ಯುತ್ ದೀಪಾಲಂಕಾರದಿಂದ ಜಗಮಗಿಸುತ್ತಿದೆ.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆಗೆ ಕ್ಷಣಗಣನೆ ಆರಂಭಗೊಂಡಿದ್ದು ಇಡೀ ಕ್ಷೇತ್ರ ವಿದ್ಯುತ್ ದೀಪಾಲಂಕಾರದಿಂದ ಜಗಮಗಿಸುತ್ತಿದೆ.

ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ವಜ್ರಮಲೆ ಭವನ ಸಮೀಪ ಸಚಿವ ಸಂಪುಟ ಸಭೆ ನಡೆಯಲಿದ್ದು ಮೈಸೂರು ವಿಭಾಗದ 8 ಜಿಲ್ಲೆಗಳ ಅಭಿವೃದ್ಧಿ ಬಗ್ಗೆ ಹಲವು ನಿರ್ಣಯ, ಯೋಜನೆ ಘೋಷಣೆ ಆಗಲಿದೆ.

ಚಾಮರಾಜನಗರ ಜಿಲ್ಲೆಗೆ ಸಂಬಂಧಿಸಿದಂತೆ ನೀರಾವರಿ ಯೋಜನೆ, ಮೂಲಸೌಕರ್ಯ ಅಭಿವೃದ್ಧಿ, ಗಿರಿಜನರಿಗೆ ವಸತಿ ಸೌಕರ್ಯ, ಪ್ರವಾಸೋದ್ಯಮಕ್ಕೆ ಉತ್ತೇಜನಕ್ಕೆ ಹೆಚ್ಚು ಅನುದಾನ ಅಥವಾ ವಿಶೇಷ ಪ್ಯಾಕೇಜ್ ಘೋಷಣೆಯಾಗುವ ಸಾಧ್ಯತೆ ಇದೆ.ಕೆ.ವೆಂಕಟೇಶ್, ಜಿಲ್ಲಾ ಉಸ್ತುವಾರಿ ಸಚಿವಮಾದಪ್ಪನ ಬೆಟ್ಟದಲ್ಲಿ ಖಾಕಿ ಸರ್ಪಗಾವಲು:

ಹಲವು ಅಭಿವೃದ್ಧಿ ಕಾಮಗಾರಿಗೆ ಚಾಲನೆ:ಶಂಕುಸ್ಥಾಪನೆ

ಜಾತ್ರೆ ಸಂದರ್ಭದಲ್ಲಿ ಜಗಮಗಿಸುತ್ತಿದ್ದ ಮಲೆಮಹದೇಶ್ವರ ಬೆಟ್ಟ ಸಚಿವ ಸಂಪುಟ ಹಿನ್ನೆಲೆ ಇಡೀ ಕ್ಷೇತ್ರಕ್ಕೆ ವಿದ್ಯುತ್ ದೀಪಾಲಂಕಾರ, ವಿಶೇಷ ಸ್ವಾಗತ ಕಮಾನುಗಳು ಕನ್ಮನ ಸೆಳೆಯುತ್ತಿದೆ. ಸಂಪುಟ ಸಭೆ ಹಿನ್ನೆಲೆ ಖಾಕಿ ಹೈ ಅಲರ್ಟ್ ಆಗಿದ್ದು 2 ಸಾವಿರಕ್ಕೂ ಅಧಿಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಬಂದೋಬಸ್ತ್ ಗಾಗಿ ಇಬ್ಬರು ಡಿಐಜಿ ನೇತೃತ್ವದಲ್ಲಿ ಇಬ್ಬರು ಎಸ್ಪಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ೨, ಡಿವೈಎಸ್ಪಿ ೧೧, ಇನ್ಸ್‌ಪೆಕ್ಟರ್ ೩೧, ಸಬ್ ಇನ್ಸ್‌ಪೆಕ್ಟರ್ ೮೫, ಸಹಾಯಕ ಸಬ್ ಇನ್ಸ್‌ಕ್ಟರ್ ೧೨೫, ಪೇದೆಗಳು೭೯೬, ಮಹಿಳಾಪೇದೆ ೪೧, ಕೆಎಸ್ಆರ್ ಆರ್ ಪಿ, ಡಿಯರ್ ೭, ಗೃಹರಕ್ಷಕ ದಳ ೬ ಸಿಬ್ಬಂದಿ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ಪೊಲೀಸರು ಸೇರಿದಂತೆ 2,000ಕ್ಕೂ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಸಂಪುಟ ಸಭೆ ಬಳಿಕ ಮಲೆಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಸಭೆಯನ್ನು ಸಿದ್ದರಾಮಯ್ಯ ನಡೆಸಲಿದ್ದು ಗುರುವಾರದಂದು ಬೆಟ್ಟದಲ್ಲಿ ಸಿಎಂ ವಾಸ್ತವ್ಯ ಹೂಡಲಿದ್ದಾರೆ. ಒಟ್ಟಿನಲ್ಲಿ ಮಾದಪ್ಪನ ಬೆಟ್ಟದಲ್ಲಿ ನಡೆಯುತ್ತಿರುವ ಸಂಪುಟ ಸಭೆಯಲ್ಲಿ ಗಡಿಜಿಲ್ಲೆ ಜನರು ಅನುದಾನದ ಹೊಳೆಯನ್ನು ನಿರೀಕ್ಷೆ ಮಾಡುತ್ತಿದ್ದಾರೆ.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...