ಐತಿಹಾಸಿಕ ಆನೆಗೊಂದಿ ಉತ್ಸವಕ್ಕೆ ಕ್ಷಣಗಣನೆ

KannadaprabhaNewsNetwork | Published : Mar 11, 2024 1:18 AM

ಸಾರಾಂಶ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್. ತಂಗಡಗಿ ಉತ್ಸವದ ಉದ್ಘಾಟನೆ ನೆರವೇರಿಸುವರು.

ಕೊಪ್ಪಳ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಕೊಪ್ಪಳ ಜಿಲ್ಲಾಡಳಿತದ ಸಹಯೋಗದಲ್ಲಿ ಮಾ.11ರಂದು ಆನೆಗೊಂದಿಯಲ್ಲಿ ಆನೆಗೊಂದಿ ಉತ್ಸವ ಕಾರ್ಯಕ್ರಮ ನಡೆಯಲಿದೆ.ಇಂದು ಸಂಜೆ 6.30ಕ್ಕೆ ಆನೆಗೊಂದಿಯ ತಳವಾರಘಟ್ಟ ರಸ್ತೆಯ ಶ್ರೀರಂಗದೇವರಾಯಲು ವೇದಿಕೆಯಲ್ಲಿ ಉತ್ಸವದ ಉದ್ಘಾಟನಾ ಸಮಾರಂಭ ನಡೆಯಲಿದೆ.ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್. ತಂಗಡಗಿ ಉತ್ಸವದ ಉದ್ಘಾಟನೆ ನೆರವೇರಿಸುವರು. ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ. ಪಾಟೀಲ್, ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕ ಹಾಗೂ ಕುಷ್ಟಗಿ ಶಾಸಕ ದೊಡ್ಡನಗೌಡ ಹನುಮಗೌಡ ಪಾಟೀಲ, ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಹಾಗೂ ಶಾಸಕ ಬಸವರಾಜ ರಾಯರಡ್ಡಿ ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು. ಗಂಗಾವತಿ ಶಾಸಕ ಜಿ.ಜನಾರ್ಧನ ರೆಡ್ಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.ಮುಖ್ಯ ಅತಿಥಿಗಳಾಗಿ ಸಂಸದ ಕರಡಿ ಸಂಗಣ್ಣ, ಶಾಸಕ ಕೆ.ರಾಘವೇಂದ್ರ ಹಿಟ್ನಾಳ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ್ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಆನೆಗೊಂದಿ ಗ್ರಾಪಂ ಅಧ್ಯಕ್ಷೆ ಕೆ.ಮಹಾದೇವಿ ಪಾಲ್ಗೊಳ್ಳುವರು.ವಿಶೇಷ ಆಹ್ವಾನಿತರಾಗಿ ಆನೆಗೊಂದಿಯ ರಾಜ ವಂಶಸ್ಥರಾದ ಲಲಿತಾ ರಾಣಿ ಶ್ರೀರಂಗದೇವರಾಯಲು, ರಾಣಿ ಚಂದ್ರಕಾಂತ ದೇವಿ, ರಾಜ ಶ್ರೀ ಅಚ್ಯುತ ದೇವರಾಯ, ರಾಜಾ ಶ್ರೀ ರಾಮ ದೇವರಾಯ ತಿರುಮಲದೇವರಾಯ, ವೀರ ರಾಘವ ರಾಜು ಎನ್.ಕೆ.ರಾಮರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ಎಂ.ಎನ್.ಅಜಯ್ ನಾಗಭೂಷಣ, ಪ್ರವಾಸೋದ್ಯಮ ಇಲಾಖೆ ಸರ್ಕಾರದ ಕಾರ್ಯದರ್ಶಿ ಸಲ್ಮಾ ಕೆ.ಫಾಹಿಮ್, ಕೃಷ್ಣಭಾಗ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ.ಮೋಹನರಾಜ, ಪ್ರವಾಸೋದ್ಯಮ ಇಲಾಖೆ ನಿರ್ದೇಶಕ ಡಾ.ವಿ. ರಾಮ ಪ್ರಸಾತ್ ಮನೋಹರ್, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಡಾ.ಧರಣಿದೇವಿ ಮಾಲಗಿತ್ತಿ ಆಗಮಿಸುವರು.ಜಿಲ್ಲಾಧಿಕಾರಿ ನಳಿನ್ ಅತುಲ್, ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆ, ಎಸ್ಪಿ ಯಶೋದಾ ವಂಟಿಗೋಡಿ, ಜಿಲ್ಲೆಯ ಎಲ್ಲ ಚುನಾಯಿತ ಪ್ರತಿನಿಧಿಗಳು, ಕೈಗಾರಿಕೋದ್ಯಮಿಗಳು, ಹೋಟೆಲ್ ಉದ್ಯಮಿಗಳು, ವ್ಯವಸ್ಥಾಪಕರು ಹಾಗೂ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ವಿವಿಧ ಇಲಾಖೆಗಳು ಮತ್ತು ಜಿಲ್ಲೆಯ ನಾಗರಿಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

Share this article