- ನಾಗರೀಕ ಪೊಲೀಸ್, ಡಿಎಆರ್, ಕೆಎಸ್‌ಆರ್‌ಪಿ, ಐಟಿಬಿಪಿ ಪಡೆ, ಹೋಂ ಗಾರ್ಡ್ಸ್ ನಿಯೋಜನೆ - ಸಂಪೂರ್ಣ ಕಣ್ಗಾವಲಿಡಲು ವೀಡಿಯೋಗ್ರಾಫರ್ಸ್, ಡ್ರೋಣ್ ಕ್ಯಾಮೆರಾ ಬಳಕೆ: ಎಸ್‌ಪಿ ಉಮಾ - - - ಕನ್ನಡಪ್ರಭ ವಾರ್ತೆ, ದಾವಣಗೆರೆ
ಜಿಲ್ಲಾದ್ಯಂತ ಬಂದೋಬಸ್ತ್‌ಗಾಗಿ ಹೆಚ್ಚಿನ ನಾಗರೀಕ ಪೊಲೀಸ್ ಅಧಿಕಾರಿ, ಸಿಬ್ಂದಿ ಹಾಗೂ ಜಿಲ್ಲಾ ಪೊಲೀಸ್ ಮೀಸಲುಪಡೆ, ಕರ್ನಾಟಕ ರಾಜ್ಯ ಮೀಸಲು ಪಡೆ ತುಕಡಿಗಳನ್ನು ನಿಯೋಜಿಸಲಾಗಿದೆ. ನಾಗರಿಕ ಪೊಲೀಸ್ ಅಧಿಕಾರಿ, ಸಿಬ್ಬಂದಿ, ಡಿಎಆರ್ 8 ತುಕಡಿ, ಐಟಿಬಿಪಿ 1 ತುಕಡಿ, ಕೆಎಸ್‌ಆರ್ 4 ತುಕಡಿ, ಹೋಂ ಗಾರ್ಡ್ಸ್ ಸಿಬ್ಬಂದಿ ಬಂದೋಬಸ್ತ್‌ಗೆ ನಿಯೋಜಿಸಲಾಗಿದೆ. ಸಂಪೂರ್ಣ ಕಣ್ಗಾವಲಿಗಾಗಿ ವಿಡಿಯೋಗ್ರಾಫರ್ಸ್, ಡ್ರೋನ್ ಕ್ಯಾಮೇರಾಗಳನ್ನು ನಿಯೋಜಿಸಲಾಗಿದೆ ಎಂದು ಹೇಳಿದ್ದಾರೆ.
ಮತ ಎಣಿಕೆ ಹಿನ್ನೆಲೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ವ್ಯತಿರಿಕ್ತ ಪೋಸ್ಟ್‌ಗಳ ಮೇಲೆ ಪೊಲೀಸ್ ಠಾಣಾ ಮಟ್ಟದಲ್ಲಿ ಹಾಗೂ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ತೀವ್ರ ನಿಗಾ ವಹಿಸಲಾಗಿದೆ. ಜಿಲ್ಲಾದ್ಯಂತ ಈಗಾಗಲೇ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಗಳ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಆಸಾಮಿಗಳು, ಗೂಂಡಾ ವ್ಯಕ್ತಿಗಳು, ಮತೀಯ ಗೂಂಡಾ ಆಸಾಮಿಗಳಿಗೆ ಚುನಾವಣಾ ಮತ ಎಣಿಕೆ ಸಮಯದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರದಂತೆ ನಡವಳಿಕೆ ಹೊಂದಿರುವಂತೆ ಎಚ್ಚರಿಕೆ ನೀಡಲಾಗಿದೆ.- - - ಬಾಕ್ಸ್ * ಮತ ಎಣಿಕೆ ದಿನ ಏನು ಮಾಡಬೇಕು, ಏನು ಮಾಡಬಾರದು? 1) ಜಿಲ್ಲೆಯಲ್ಲಿ ಮತ ಎಣಿಕೆ ದಿನ ಯಾವುದೇ ಅಹಿತಕರ ಘಟನೆ ಕಂಡು ಬಂದರೆ ತಕ್ಷಣವೇ ತುರ್ತು ಸಹಾಯವಾಣಿ 112 ನಂಬರ್‌ಗೆ ಕರೆ ಮಾಡಬೇಕು, ಸ್ಥಳೀಯ ಪೊಲೀಸ್ ಅಧಿಕಾರಿಗಳ ಗಮನಕ್ಕೆ ತರಬೇಕು. ಮತ ಎಣಿಕೆ ದಿನದಂದು ಜಿಲ್ಲಾದ್ಯಂತ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಆ ಸಮಯದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಬಾರದು. ಈಗಾಗಲೇ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಜೂ.1ರ ಸಂಜೆ 6ರಿಂದ ಜೂ.3ರ ಸಂಜೆ 6ರವರೆಗೆ ಮದ್ಯ ಮಾರಾಟ ನಿಷೇಧಿಸಿದೆ.
03) ಮತ ಎಣಿಕಾ ಕೇಂದ್ರದಲ್ಲಿ ಭದ್ರತಾ ದೃಷ್ಟಿಯಿಂದ ಪೊಲೀಸ್ ಇಲಾಖೆಯಿಂದ ಪರಿಶೀಲಿಸುವಾಗ ಕರ್ತವ್ಯನಿರತ ಪೊಲೀಸ್ ಅಧಿಕಾರಿ, ಸಿಬ್ಬಂದಿಯೊಂದಿಗೆ ಸೌಜನ್ಯಯುತವಾಗಿ ಸಹಕರಿಸಬೇಕು. ಮತ ಎಣಿಕಾ ಕೇಂದ್ರದಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಬಾರದು. ಹಾಗೇನಾದರೂ ಶಾಂತಿ, ಕಾನೂನು, ಸುವ್ಯವಸ್ಥೆಗೆ ಧಕ್ಕೆ ತರುವಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದು ನಿಶ್ಚಿತ.
05) ಮತ ಎಣಿಕೆ ಕೇಂದ್ರಕ್ಕೆ ಆಗಮಿಸುವ ಏಜೆಂಟರಿಗೆ ನಿಗಧಿಪಡಿಸಿದ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕೇಂದ್ರಕ್ಕೆ ಮಾತ್ರ ಪ್ರವೇಶಾವಕಾಶವಿರುತ್ತದೆ. ಮತ ಎಣಿಕೆ ಕೇಂದ್ರಕ್ಕೆ ಆಗಮಿಸುವ ಏಜೆಂಟರಿಗೆ ನಿಗಧಿಪಡಿಸಿದ ಕ್ಷೇತ್ರಗಳನ್ನು ಬಿಟ್ಟು ಬೇರೆ ವಿಧಾನಸಬಾ ಕ್ಷೇತ್ರ ಮತ ಎಣಿಕೆ ಕೇಂದ್ರಗಳಿಗೆ ಹೋಗಲು ಅವಕಾಶವಿರುವುದಿಲ್ಲ.
- ಬೀರೂರು-ಸಮ್ಮಸಗಿ ರಾಜ್ಯ ಹೆದ್ದಾರಿಯ ತೋಳಹುಣಸೆ ಮಾರ್ಗ ಬದಲಾವಣೆ: ಎಸ್‌ಪಿ ಕನ್ನಡಪ್ರಭ ವಾರ್ತೆ, ದಾವಣಗೆರೆ
ಸಾರ್ವಜನಿಕರಿಗೆ ಅಂದು ದೈನಂದಿನ ಕೆಲಸ ಕಾರ್ಯಕ್ಕೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವ ಸಲುವಾಗಿ ಮತ ಎಮಿಕಾ ಕೇಂದ್ರದ ಮುಂದೆ ಹಾದು ಹೋಗುವ ಬೀರೂರು, ಸಮ್ಮಸಗಿ ರಾಜ್ಯ ಹೆದ್ದಾರಿಯಲ್ಲಿ ಆ ದಿನ ಬೆಳಿಗ್ಗೆ 6ರಿಂದ ಮತ ಎಣಿಕೆ ಕಾರ್ಯ ಮುಗಿಯುವವರೆಗೂ ಸಾರ್ವಜನಿಕರ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾ ಎಸ್‌ಪಿ ತಿಳಿಸಿದ್ದಾರೆ.
ವಾಹನ ನಿಲುಗಡೆಗೆ ಸ್ಥಳಗಳ ನಿಗದಿ:
- - - (ಸಾಂದರ್ಭಿಕ ಚಿತ್ರ)