- ಶಿವಗಂಗೋತ್ರಿಯ ದಾವಿವಿ ಕೇಂದ್ರದಲ್ಲಿ ಮತ ಎಣಿಕೆ ಕಾರ್ಯಕ್ಕೆ ಸಜ್ಜು: ಜಿಲ್ಲಾಧಿಕಾರಿ ಮಾಹಿತಿ
ದಾವಣಗೆರೆ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯವು ತಾಲೂಕಿನ ಶಿವಗಂಗೋತ್ರಿಯ ದಾವಣಗೆರೆ ವಿಶ್ವವಿದ್ಯಾನಿಲಯದ ಮತ ಎಣಿಕಾ ಕೇಂದ್ರದಲ್ಲಿ ಜೂ.4ರಂದು ಬೆಳಗ್ಗೆ 8ರಿಂದ ಆರಂಭವಾಗಲಿದೆ. ಮಧ್ಯಾಹ್ನದ ವೇಳೆ ಇಡೀ ಕ್ಷೇತ್ರದ ಫಲಿತಾಂಶ ಹೊರಬೀಳಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ ಹೇಳಿದರು.
ನಗರದಲ್ಲಿ ಡಿಸಿ ಕಚೇರಿ ಸಭಾಂಗಣದಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 6.30ರಿಂದ ಭದ್ರತಾ ಕೊಠಡಿ ತೆರೆಯಲಿದ್ದು, 8 ಗಂಟೆಯಿಂದ ಮತ ಎಣಿಕೆ ಶುರುವಾಗಲಿದೆ. ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸಿದ್ದ ಎಲ್ಲ 30 ಅಭ್ಯರ್ಥಿಗಳ ಫಲಿತಾಂಶ ಮಧ್ಯಾಹ್ನದ ಹೊತ್ತಿಗೆ ಹೊರಬರುವ ಸಾಧ್ಯತೆ ಇದೆ ಎಂದರು.ಹರಪನಹಳ್ಳಿ ಸೇರಿದಂತೆ ದಾವಣಗೆರೆ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರ ಸೇರಿದಂತೆ ಒಟ್ಟು 8 ಕ್ಷೇತ್ರಗಳನ್ನು ಒಳಗೊಂಡ ದಾವಣಗೆರೆ ಲೋಕಸಭಾ ಕ್ಷೇತ್ರದ ಮತ ಎಣಿಕೆ ಶಿವಗಂಗೋತ್ರಿಯ ದಾವಿವಿಯಲ್ಲಿ ನಡೆಯಲಿದೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ 14 ಟೇಬಲ್‌ಗಳಲ್ಲಿ ಮತ ಎಣಿಕೆ ನಡೆಯಲಿದೆ. ಗರಿಷ್ಠ 19 ಸುತ್ತುಗಳಲ್ಲಿ ಮತ ಎಣಿಕೆ ಆಗಲಿದೆ. ಪ್ರತಿ ಸುತ್ತಿನಲ್ಲೂ ಎಲ್ಲಾ ಕ್ಷೇತ್ರಗಳಲ್ಲಿ ಎಣಿಕೆ ನಡೆದ ನಂತರ ಮುಂದಿನ ಸುತ್ತಿನ ಎಣಿಕೆ ಆರಂಭಿಸಲಾಗುವುದು ಎಂದು ಹೇಳಿದರು.
ಪ್ರತ್ಯೇಕ ಟೇಬಲ್‌ನಲ್ಲಿ ಅಂಚೆ ಮತ ಎಣಿಕೆ:
565 ಸೇವಾ ಮತದಾರರು:
ಮತಗಟ್ಟೆಗಳು, ಎಣಿಕೆ ಸುತ್ತುಗಳ ವಿವರ:
- - - * ದಾವಣಗೆರೆ ಕ್ಷೇತ್ರಕ್ಕೆ ಶೇ.76.978 ಮತದಾನ
- - - * ಎಣಿಕೆ ಕೇಂದ್ರಕ್ಕೆ 3 ಹಂತದ ಭದ್ರತಾ ವ್ಯವಸ್ಥೆ ಮತ ಎಣಿಕೆ ಕೇಂದ್ರ ಸುತ್ತಮುತ್ತ 4 ಹಂತಗಳಲ್ಲಿ ಭದ್ರತೆ ಒದಗಿಸಲಾಗಿದೆ. ಮೊದಲ ಹಂತದಲ್ಲಿ ಕೇಂದ್ರ ಸಶಸ್ತ್ರ ಮೀಸಲು ಪೊಲೀಸ್ ಪಡೆ, ಎರಡನೇ ಹಂತದಲ್ಲಿ ರಾಜ್ಯ ಸಶಸ್ತ್ರ ಮೀಸಲು ಪೊಲೀಸ್ ಪಡೆ ಹಾಗೂ 3ನೇ ಹಂತದಲ್ಲಿ ಸಿವಿಲ್ ಪೊಲೀಸ್ ವ್ಯವಸ್ಥೆಯ ಭದ್ರತೆ ಒದಗಿಸಲಾಗಿದೆ. ಅಭ್ಯರ್ಥಿಗಳ ಎಣಿಕೆ ಏಜೆಂಟರು, ಎಣಿಕೆ ಸಿಬ್ಬಂದಿಗಳಿಗೆ ಪ್ರವೇಶಕ್ಕೆ ಗುರುತಿನ ಚೀಟಿ ನೀಡಲಾಗಿದೆ. ಗುರುತಿನ ಚೀಟಿ ಇಲ್ಲದ ಯಾರಿಗೂ ಮತ ಎಣಿಕಾ ಕೇಂದ್ರದ ಒಳಗೆ ಪ್ರವೇಶ ಇರುವುದಿಲ್ಲ.
ಮತ ಎಣಿಕಾ ಕೇಂದ್ರದೊಳಗೆ ಅನುಮತಿಸಿದ ಅಧಿಕಾರಿಗಳನ್ನು ಹೊರತುಪಡಿಸಿ ಇತರೆ ಯಾರಿಗೂ ಎಣಿಕೆ ಕೇಂದ್ರದೊಳಗೆ ಮೊಬೈಲ್ ಫೋನ್ ತರಲು ಅವಕಾಶ ಇರುವುದಿಲ್ಲ. ಎಣಿಕೆ ಕೇಂದ್ರದೊಳಗೆ ಸ್ಮಾರ್ಟ್ ವಾಚ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ತೆಗೆದುಕೊಂಡು ಹೋಗುವಂತಿಲ್ಲ. ಆಯುಧ, ಬೆಂಕಿಪೊಟ್ಟಣ, ಲೈಟರ್, ನೀರಿನ ಬಾಟಲಿಗಳನ್ನು ಸಹ ಒಯ್ಯುವಂತಿಲ್ಲ. ಮೂರು ಹಂತದಲ್ಲಿ ಚೆಕ್ ಮಾಡುವ ಮೂಲಕ ಏಜೆಂಟರು ಹಾಗೂ ಇತರೆ ಸಿಬ್ಬಂದಿಗಳನ್ನು ಒಳಬಿಡಲಾಗುತ್ತದೆ. ಅಭ್ಯರ್ಥಿಗಳ ಎಣಿಕೆ ಏಜೆಂಟರಾಗಿ ಆಗಮಿಸುವವರಿಗೆ ಪಾವತಿ ಆದಾರದ ಮೇಲೆ ಉಪಾಹಾರ, ಶುದ್ದ ಕುಡಿಯುವ ನೀರು, ಲಸ್ಸಿ, ಮಜ್ಜಿಗೆ ವ್ಯವಸ್ಥೆ ಮಾಡಲಾಗಿದ್ದು ಅಂತಹವರಿಗೆ ಎಷ್ಟು ಅಗತ್ಯವಿದೆಯೋ ಅಷ್ಟೂ ಕೂಪನ್ ಪಡೆಯಲು ಅವಕಾಶವಿದೆ.
ಧ್ವನಿವರ್ಧಕ ಮೂಲಕ ಫಲಿತಾಂಶ ವಿವರ:ಪ್ರತಿ ಸುತ್ತಿನ ಮತ ಎಣಿಕೆ ನಂತರ ಸಾರ್ವಜನಿಕವಾಗಿ ಧ್ವನಿವರ್ಧಕ ಮೂಲಕ ಸಾರ್ವಜನಿಕರಿಗೆ ಎಣಿಕೆ ವಿವರವನ್ನು ತಿಳಿಸಲಾಗುವುದು. ಸಾರ್ವಜನಿಕರು ಸೇರಿದಂತೆ ಪಕ್ಷಗಳ ಕಾರ್ಯಕರ್ತರು ತಾಳ್ಮೆ ವಹಿಸುವ ಮೂಲಕ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ ಮನವಿ ಮಾಡಿದರು.
- - -ಬಾಕ್ಸ್ * ನಿಷೇಧಾಜ್ಞೆ ಜಾರಿ, ಮದ್ಯ ಮಾರುವಂತಿಲ್ಲ - ಗುಂಪು ಸೇರುವಂತಿಲ್ಲ, ಮೆರವಣಿಗೆ, ಪಟಾಕಿ ಸಿಡಿಸುವಂತಿಲ್ಲ
ದಾವಣಗೆರೆ: ಲೋಕಸಭೆ ಚುನಾವಣೆಯ ಮತ ಎಣಿಕೆ ಕಾರ್ಯದ ಹಿನ್ನೆಲೆಯಲ್ಲಿ ಜೂ.4ರಂದು ಸಾರ್ವಜನಿಕ ಶಾಂತಿ, ಕಾನೂನು, ಸುವ್ಯವಸ್ಥೆ ಕಾಪಾಡಲು ಜಿಲ್ಲಾದ್ಯಂತ 144 ಸೆಕ್ಷನ್ ಜಾರಿಗೊಳಿಸಿ, ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ ಹೇಳಿದರು.ನಿಷೇಧಾಜ್ಞೆ ಜಾರಿಗೊಂಡ ಅವಧಿಯಲ್ಲಿ ಜಿಲ್ಲೆಯ ಯಾವುದೇ ಭಾಗದಲ್ಲಿ ಯಾರೂ ಅಕ್ರಮವಾಗಿ ಗುಂಪು ಸೇರುವಂತಿಲ್ಲ, ಮೆರವಣಿಗೆಯನ್ನು ಮಾಡುವಂತಿಲ್ಲ, ಪಟಾಕಿ ಸಿಡಿಸುವುದು, ವಿಜಯೋತ್ಸವ ಆಚರಿಸುವಂತಿಲ್ಲ. ಮತ ಎಣಿಕೆ ದಿನ ಕಾನೂನು ಸುವ್ಯವಸ್ಥೆ ಕಾಪಾಡಲು ಜಿಲ್ಲಾದ್ಯಂತ ಜೂನ್ 4ರಂದು ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಹೇಳಿದರು.
ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ ಮಾತನಾಡಿ, ಮತ ಎಣಿಕೆ ಕೇಂದ್ರದ ಸುತ್ತಮುತ್ತ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಎಣಿಕೆ ಕೇಂದ್ರದೊಳಗೆ ಹೋಗಲು ಮೂರು ಹಂತದ ತಪಾಸಣೆಗೆ ಒಳಗಾಗಬೇಕಾಗುತ್ತದೆ. ಎಲ್ಲ ಕಡೆ ಬ್ಯಾರಿಕೇಡ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.ಏಜೆಂಟರು, ಸಾರ್ವಜನಿಕರಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಕೇಂದ್ರದೊಳಗೆ ಪ್ರವೇಶಿಸುವವರಿಗೆ ಅನುಮತಿಸಲಾದ ಗುರುತಿನ ಚೀಟಿ ಪ್ರದರ್ಶಿಸಿ, ಒಳಗೆ ಹೋಗಬೇಕು. ಪ್ರವೇಶ ಪತ್ರ ಇಲ್ಲದವರಿಗೆ ಮತ ಎಣಿಕಾ ಕೇಂದ್ರದೊಳಗೆ ಪ್ರವೇಶಕ್ಕೆ ಅವಕಾಶ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಜಿಪಂ ಸಿಇಒ, ಸ್ವೀಪ್ ಸಮಿತಿ ಅಧ್ಯಕ್ಷ ಸುರೇಶ ಬಿ. ಇಟ್ನಾಳ್ ಮಾತನಾಡಿ, ಲೋಕಸಭೆ 2019ರ ಚುನಾವಣೆಯ ಮತದಾನಕ್ಕಿಂತ ಶೇ.2024ರ ಚುನಾವಣೆಯಲ್ಲಿ ಶೇ.4ರಷ್ಟು ಮತದಾನವು ಹೆಚ್ಚಳವಾಗಿದೆ. ಮತದಾನ ಪ್ರಮಾಣ ಹೆಚ್ಚಳಕ್ಕಾಗಿ ಸ್ವೀಪ್ ಸಮಿತಿ ಅನೇಕ ಜಾಗೃತಿ ಕಾರ್ಯಕ್ರಮ ರೂಪಿಸಿತ್ತು. ಮತದಾನ ಪ್ರಮಾಣ ಹೆಚ್ಚಳಕ್ಕೆ ಶ್ರಮಿಸಿದ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ಕಾರ್ಯಕ್ಕೆ ಮೆಚ್ಚಿಗೆ ಸೂಚಿಸಿದರು.ಅಪರ ಜಿಲ್ಲಾಧಿಕಾರಿ ಸೈಯ್ಯದಾ ಆಫ್ರೀನ್ ಭಾನು ಎಸ್.ಬಳ್ಳಾರಿ ಇದ್ದರು.
- -- -1ಕೆಡಿವಿಜಿ15, 16:ದಾವಣಗೆರೆ ಡಿಸಿ ಕಚೇರಿಯಲ್ಲಿ ಜೂ.4ರಂದು ಮತ ಎಣಿಕೆ ಕುರಿತಂತೆ ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಇಲಾಖೆಗಳ ಅಧಿಕಾರಿಗಳು ಇದ್ದರು.