ಕನ್ನಡಪ್ರಭ ವಾರ್ತೆ ಇಂಡಿ
ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ನೀಡಬೇಕು. ಕಾಂಗ್ರೆಸ್ ಪಕ್ಷ ಗೆದ್ದು ದೇಶದಲ್ಲಿ ಸರ್ಕಾರ ರಚಿಸಿದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಪಕ್ಷದ ಅಭ್ಯರ್ಥಿ ಗೆಲುವಿಗೆ ಪ್ರತಿಯೊಬ್ಬ ಕಾರ್ಯಕರ್ತರು ಶ್ರಮಿಸಬೇಕು ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.ಭಾನುವಾರ ನಗರದ ಖಾಸಗಿ ಹೋಟೆಲ್ ಆವರಣದಲ್ಲಿ ಇಂಡಿ ಹಾಗೂ ಬಳ್ಳೊಳ್ಳಿ ಬ್ಲಾಕ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರೊ.ರಾಜು ಆಲಗೂರ ಬುದ್ಧಿವಂತರು, ಸಭ್ಯರು ಹಾಗೂ ಬಹುಭಾಷಾ ಪ್ರವೀಣರಾಗಿದ್ದು, ಜಿಲ್ಲೆಯ ಅಭಿವೃದ್ಧಿ ಹಾಗೂ ಸಮಸ್ಯೆಗಳ ಕುರಿತು ಸಂಸತ್ತಿನಲ್ಲಿ ಪ್ರಶ್ನಿಸುವ ಕಾರ್ಯ ಮಾಡುತ್ತಾರೆ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಜು ಅಲಗೂರ ಅವರ ಗೆಲುವು ಸೂರ್ಯ, ಚಂದ್ರರಿರುವಷ್ಟೇ ಸತ್ಯ ಎಂದು ಹೇಳಿದರು.
ಈ ಭಾಗ ಇನ್ನಷ್ಟು ಅಭಿವೃದ್ಧಿ ಹೊಂದಬೇಕಾದರೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಬೇಕು. ಈ ಹಿಂದೆ 2023ರ ವಿಧಾನಸಭೆ ಚುನಾವಣೆಯಲ್ಲಿ ನನಗೆ ಆಶೀರ್ವಾದ ಮಾಡಿದಂತೆ ಈಗಲೂ ಹೆಚ್ಚಿನ ಮತ ನೀಡಿ ಗೆಲ್ಲಿಸಬೇಕು. ಇದು ರಾಜು ಆಲಗೂರ ಚುನಾವಣೆಯಲ್ಲ, ನಾನೇ ಸ್ಪರ್ಧಿಸಿದ್ದೇನೆ ಎಂದು ತಿಳಿದು ಮತ ನೀಡಬೇಕು ಎಂದು ಮನವಿ ಮಾಡಿದರು.ಅಭ್ಯರ್ಥಿ ರಾಜು ಆಲಗೂರ ಮಾತನಾಡಿ, ನನ್ನನ್ನು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷನನ್ನಾಗಿ ಮಾಡುವಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲ ಅವರ ಶ್ರಮ ಸಾಕಷ್ಟಿದೆ. ರಾಜಕೀಯವಾಗಿ ಇಷ್ಟೊಂದು ಎತ್ತರಕ್ಕೆ ಸಾಗಲು ಶಾಸಕ ಯಶವಂತರಾಯಗೌಡ ಪಾಟೀಲ, ಸಚಿವರಾದ ಎಂ.ಬಿ. ಪಾಟೀಲ, ಶಿವಾನಂದ ಪಾಟೀಲ ಸೇರಿ ಜಿಲ್ಲೆಯ ಎಲ್ಲ ಶಾಸಕರು, ಮುಖಂಡರು ಸಹಾಯ, ಸಹಕಾರ ನೀಡಿದ್ದಾರೆ. ಇಂತಹ ಧೀಮಂತ ನಾಯಕರನ್ನು ನನ್ನ ಜೀವನದಲ್ಲಿ ಎಂದೂ ಮರೆಯುವುದಿಲ್ಲ. ಅವರ ಉಪಕಾರಕ್ಕೆ ಋಣಿಯಾಗಿದ್ದೇನೆ ಎಂದು ಹೇಳಿದರು.ಎಂ.ಆರ್ ಪಾಟೀಲ ಮಾತನಾಡಿದರು. ಬಿ.ಎಂ ಕೋರೆ, ಜೆಟ್ಟೆಪ್ಪ ರವಳಿ, ಬ್ಲಾಕ್ ಅಧ್ಯಕ್ಷ ಜಾವೀದ್ ಮೋಮಿನ್, ಬಳ್ಳೊಳ್ಳಿ ಬ್ಲಾಕ್ ಅಧ್ಯಕ್ಷ ಕಲ್ಲನಗೌಡ ಬಿರಾದಾರ, ಭೀಮಣ್ಣ ಕೌಲಗಿ, ಇಲಿಯಾಸ ಬೋರಾಮಣಿ, ಭೀಮನಗೌಡ ಪಾಟೀಲ, ಗುರಣ್ಣಾಗೌಡ ಪಾಟೀಲ, ಬಾಬುಸಾಹುಕಾರ ಮೇತ್ರಿ, ಡಿ.ಎಲ್. ಚವಾಣ್, ಪ್ರಕಾಶ ಪಾಟೀಲ, ಮಹಾದೇವ ಗಡ್ಡದ, ಹರಿಶ್ಚಂದ್ರ ಪವಾರ, ಗಿರೀಶ ಚಾಂದಕವಠೆ, ಯಮನಾಜಿ ಸಾಳುಂಕೆ, ಮಲ್ಲು ಮಡ್ಡಿಮನಿ, ಚಂದ್ರಶೇಖರ ರೂಗಿ, ಅಪ್ಪು ಕಲ್ಲೂರ, ತಾಪಂ ಮಾಜಿ ಅಧ್ಯಕ್ಷ ಶೇಖರ ನಾಯಕ, ಪ್ರಶಾಂತ ಕಾಳೆ, ಭೀಮಾಶಂಕರ ಮೂರಮನ, ಸೋಮು ಮ್ಯಾಕೇರಿ ಇತರರು ಸಭೆಯಲ್ಲಿ ಇದ್ದರು.