ಆದರ್ಶ ನಾಯಕರ ಮರೆತರೆ ದೇಶಕ್ಕೆ ಭವಿಷ್ಯವಿಲ್ಲ: ಶಾಸಕ ಆರ್.ವಿ. ದೇಶಪಾಂಡೆ

KannadaprabhaNewsNetwork |  
Published : Oct 03, 2024, 01:20 AM IST
2ಎಚ್.ಎಲ್.ವೈ-1: ತಾಲೂಕ ಆಡಳಿತ ಸೌಧದ ಸಭಾಂಗಣದಲ್ಲಿ ಆಯೋಜಿಸಿದ ಸಮಾರಂಭದಲ್ಲಿ  ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರು ಹಿರಿಯ ಶಾಸಕ ಆರ್.ವಿ.ದೇಶಪಾಂಡೆ ಅವರು ರಾಷ್ಟ್ರಪಿತ ಮಹಾತ್ಮಾ ಗಾಂಧಿ ಹಾಗೂ ದಿ. ಪ್ರಧಾನಿ ಲಾಲ್ ಬಹದ್ದೂರ ಶಾಸ್ತ್ರಿಯವರ ಜಯಂತಿ ಆಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು. | Kannada Prabha

ಸಾರಾಂಶ

ರಾಜಕಾರಣಿಗಳು ಅಧಿಕಾರ ಮತ್ತು ರಾಜಕಾರಣದ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ. ಮಾಧ್ಯಮಗಳು ಸಹ ತಮ್ಮ ಜವಾಬ್ದಾರಿಯನ್ನು ಮರೆತು ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಜನತೆಗೆ ನೀಡಲಾರಂಭಿಸಿವೆ. ಹೀಗಾದರೇ ದೇಶದ ಅಭಿವೃದ್ಧಿ ಸಾಧ್ಯವೆ ಎಂದು ಶಾಸಕ ಆರ್.ವಿ. ದೇಶಪಾಂಡೆ ಪ್ರಶ್ನಿಸಿದರು.

ಹಳಿಯಾಳ: ಬಾಪೂಜಿ ಹಾಗೂ ಶಾಸ್ತ್ರೀಜಿಯವರು ನೈತಿಕವಾಗಿ ಇಡೀ ಜಗತ್ತಿಗೆ ಮಾದರಿಯಾಗಿದ್ದಾರೆ. ಆದರೆ ದುರದೃಷ್ಟವಶಾತ್ ಅವರಿಬ್ಬರನ್ನೂ ಅರ್ಥ ಮಾಡಿಕೊಳ್ಳುವ ನೈತಿಕ ಮನಸ್ಥಿತಿಯೇ ಇಲ್ಲವಾಗಿದೆ. ಈ ಆದರ್ಶ ನಾಯಕರನ್ನು ಮರೆತರೆ ದೇಶಕ್ಕೆ ಉತ್ತಮ ಆರೋಗ್ಯಕರ ಭವಿಷ್ಯವೇ ಇಲ್ಲವಾಗಬಹುದು ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ, ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.

ಬುಧವಾರ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿಯವರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಬಾಪೂಜಿ ಮತ್ತು ಶಾಸ್ತ್ರೀಜಿಯವರು ದೇಶದ ಅಭಿವೃದ್ಧಿಯ ಕನಸನ್ನು ಕಂಡವರು. ಆದರೆ ದೇಶದಲ್ಲಿ ಮಾನವೀಯ ಮೌಲ್ಯಗಳಿಗೆ ಬೆಲೆ ಇಲ್ಲದಂತಾಗಿದೆ. ಯಾರೂ ಮಾನವೀಯ ಮೌಲ್ಯಗಳನ್ನುಗೌರವಿಸುತ್ತಿಲ್ಲ. ರಾಜಕಾರಣಿಗಳು ಅಧಿಕಾರ ಮತ್ತು ರಾಜಕಾರಣದ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ. ಮಾಧ್ಯಮಗಳು ಸಹ ತಮ್ಮ ಜವಾಬ್ದಾರಿಯನ್ನು ಮರೆತು ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಜನತೆಗೆ ನೀಡಲಾರಂಭಿಸಿವೆ. ಹೀಗಾದರೇ ದೇಶದ ಅಭಿವೃದ್ಧಿ ಸಾಧ್ಯವೆ ಎಂದು ಪ್ರಶ್ನಿಸಿದರು.

ಗಾಯನ, ಸನ್ಮಾನ: ಕಾರ್ಯಕ್ರಮದಲ್ಲಿ ಅತ್ಯುತ್ತಮ ಕಂದಾಯ ಇಲಾಖೆಯ ಅಧಿಕಾರಿ ಪ್ರಶಸ್ತಿಗೆ ಬಾಜನರಾದ ತಹಸೀಲ್ದಾರ್ ಪ್ರವೀಣ ಹುಚ್ಚಣ್ಣನವರ, ಮುತ್ತಲಮುರಿ ಗ್ರಾಮ ಆಡಳಿತಾಧಿಕಾರಿ ಆತ್ಮಾನಂದ ಹಾಗೂ ಗೌರಮ್ಮ ಅವರನ್ನು ಶಾಸಕರು ಸನ್ಮಾನಿಸಿ ಶುಭ ಹಾರೈಸಿದರು. ಹಿರಿಯ ವೈದ್ಯರು ಹವ್ಯಾಸಿ ಗಾಯಕರಾಗಿರುವ ಡಾ. ಚಂದ್ರಶೇಖರ ಓಶೀಮಠ ಹಾಗೂ ಬಳಗದಿಂದ ಗಾಂಧೀಜಿ ಹಾಗೂ ಶಾಸ್ತ್ರೀಯವರ ಸ್ಮರಣಾರ್ಥ ಭಾವಗೀತೆಗಳನ್ನು ಹಾಡಿದರು.ಪುರಸಭಾ ಅಧ್ಯಕ್ಷೆ ದ್ರೌಪದಿ ಅಗಸರ, ಉಪಾಧ್ಯಕ್ಷೆ ಲಕ್ಷ್ಮೀ ವಡ್ಡರ ಹಾಗೂ ಜನಪ್ರತಿನಿಧಿಗಳು ಅಧಿಕಾರಿಗಳು ಇದ್ದರು. ಬಿಜೆಪಿ ವತಿಯಿಂದ ಶಾಲಾವರಣ ಸ್ವಚ್ಛತಾ ಕಾರ್ಯ

ಭಟ್ಕಳ: ಇಲ್ಲಿನ ಬಿಜೆಪಿ ಮಂಡಲದ ವತಿಯಿಂದ ಗಾಂಧಿ ಜಯಂತಿ ಸೇವಾ ಪಾಕ್ಷಿಕ ಕಾರ್ಯಕ್ರಮದಡಿ ಮುಟ್ಟಳ್ಳಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.ಮಾಜಿ ಶಾಸಕ ಸುನೀಲ ನಾಯ್ಕ ಅವರು ಗಾಂಧೀಜಿಯವರ ಸ್ವಾತಂತ್ರ್ಯ ಹೋರಾಟದ ಬಗ್ಗೆ ತಿಳಿಸಿದರು. ಬಿಜೆಪಿ ಮಂಡಲ ಅಧ್ಯಕ್ಷ ಲಕ್ಷ್ಮೀನಾರಾಯಣ ನಾಯ್ಕ, ರಾಜ್ಯ ಬಿಜೆಪಿ ಓಬಿಸಿ ಮೋರ್ಚಾ ಉಪಾಧ್ಯಕ್ಷ ಈಶ್ವರ್ ನಾಯ್ಕ, ಪಶ್ವಿಮ ಘಟ್ಟ ಕಾರ್ಯಪಡೆಯ ಮಾಜಿ ಅಧ್ಯಕ್ಷ ಗೋವಿಂದ ನಾಯ್ಕ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ್ ನಾಯ್ಕ, ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ಶಿವಾನಿ ಶಾಂತಾರಾಮ್, ಮಂಡಲದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ನಾಯ್ಕ, ಉಪಾಧ್ಯಕ್ಷ ಗಣಪತಿ ದೇವಾಡಿಗ, ಪ್ರಕೋಷ್ಠ ಸಹಸಂಚಾಲಕ ಮೋಹನ್ ನಾಯ್ಕ, ಹಿಂದುಳಿದ ಮೋರ್ಚಾ ಅಧ್ಯಕ್ಷ ಉಮೇಶ್ ನಾಯ್ಕ, ಯುವ ಮೋರ್ಚಾ ಅಧ್ಯಕ್ಷ ಸುನಿಲ್ ಕಾಮತ್, ಮುಟ್ಟಳ್ಳಿ ಪಂಚಾಯಿತಿ ಮಾಜಿ ಅಧ್ಯಕ್ಷ ಶೇಷಗಿರಿ ನಾಯ್ಕ, ಒಬಿಸಿ ಮೋರ್ಚಾದ ರಾಘವೇಂದ್ರ ನಾಯ್ಕ, ಯಶೋಧರ್ ನಾಯ್ಕ, ಸಾಮಾಜಿಕ ಜಾಲತಾಣ ಸಂಚಾಲಕ ಪಾಂಡುರಂಗ ನಾಯ್ಕ ಮುಂತಾದವರಿದ್ದರು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...