ಕನ್ನಡಪ್ರಭ ವಾರ್ತೆ ಕುಂದಾಪುರ
ಅವರು ಮಂಗಳವಾರ ಉಡುಪಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ಬಿಜೆಪಿ ಪರ ರೋಡ್ ಶೋಗಳಲ್ಲಿ ಭಾಗವಹಿಸಿ ಮಾತನಾಡಿದರು.
ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರು ಸರಳ ಹಾಗೂ ಸಜ್ಜನಿಕೆಯ ವ್ಯಕ್ತಿತ್ವದವರು. ಯಾವುದೇ ಭ್ರಷ್ಟಾಚಾರದ ಕಳಂಕ ಇಲ್ಲದೆ ಇರುವ ರಾಜಕಾರಣಿಗಳು ಗೆಲ್ಲಬೇಕು. ಇಲ್ಲಿಯೂ ಕೋಟ ದೊಡ್ಡ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಎನ್ನುವ ವಿಶ್ವಾಸವಿದೆ ಎಂದರು.ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಈ ಬಾರಿಯ ಚುನಾವಣೆಗೆ ನಿಂತಿರುವ ಕಾಂಗ್ರೆಸ್ ಅಭ್ಯರ್ಥಿಗಳು ಸಚಿವರ ಮನೆಯವರಾಗಿದ್ದಾರೆ. ಈ ರೀತಿಯ ಪರಿವಾರವಾದ ದೇಶದ ಇನ್ಯಾವ ರಾಜ್ಯದಲ್ಲಿಯೂ ಆಗಿಲ್ಲ ಎಂದ ಅವರು ಜನ ಅವರನ್ನು ಸಂಪೂರ್ಣವಾಗಿ ತಿರಸ್ಕರಿಸುವ ಸಮಯ ಹತ್ತಿರವಾಗಿದೆ ಎಂದರು.
ಕುಂದಾಪುರ ಶಾಸಕ ಎ.ಕಿರಣ್‌ಕುಮಾರ್ ಕೊಡ್ಗಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಕಿಶೋರ್ ಕುಮಾರ್, ರಾಜ್ಯ ಬಿಜೆಪಿ ಉಪಾಧ್ಯಕ್ಷೆ ನಯನಾ ಗಣೇಶ್, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕಿದಿಯೂರು ಉದಯ್ ಕುಮಾರ ಶೆಟ್ಟಿ, ಸಹ ಪ್ರಭಾರಿ ರಾಜೇಶ್ ಕಾವೇರಿ, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಬಿಜೆಪಿ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ, ಪ್ರಧಾನ ಕಾರ್ಯದರ್ಶಿ ಸುಧೀರ್ ಕೆ.ಎಸ್., ಸತೀಶ್ ಪೂಜಾರಿ ವಕ್ವಾಡಿ, ಅಭಿಯಾನ ಪ್ರಮುಖರಾದ ಸುಪ್ರಸಾದ ಶೆಟ್ಟಿ ಬೈಕಾಡಿ, ಶಂಕರ ಅಂಕದಕಟ್ಟೆ ಮೊದಲಾದವರು ಇದ್ದರು.