ಮನೋಧೈರ್ಯ, ಅವಿರತ ಪ್ರಯತ್ನಗಳೇ ಸಾಧನೆಯ ಮೆಟ್ಟಿಲು: ಡಾ. ವೀರೇಶ

KannadaprabhaNewsNetwork |  
Published : Jun 30, 2025, 12:34 AM IST
ಕಾರ್ಯಕ್ರಮವನ್ನು ಡಾ. ವೀರೇಶ ಹಂಚಿನಾಳ ಉದ್ಘಾಟಿಸಿದರು. | Kannada Prabha

ಸಾರಾಂಶ

ಶೈಕ್ಷಣಿಕ ಜೀವನದ ಪ್ರಮುಖ ಘಟ್ಟವಾದ ಪದವಿ ಪೂರ್ವ ಹಂತವು ವಿದ್ಯಾರ್ಥಿಗಳ ಭವಿಷ್ಯದ ಭದ್ರಬುನಾದಿ ಇರುವ ಕಾರಣ ವಿದ್ಯಾರ್ಥಿಗಳು ಶ್ರದ್ಧೆ, ಆಸಕ್ತಿ ಸತತ ಪ್ರಯತ್ನಗಳ ಸಾಧನಗಳೊಂದಿಗೆ ಸಾಧನೆ ಮಾಡಿ ಎಂದು ಡಾ. ವೀರೇಶ ಹಂಚಿನಾಳ ಹೇಳಿದರು.

ಗದಗ: ಶೈಕ್ಷಣಿಕ ಜೀವನದ ಪ್ರಮುಖ ಘಟ್ಟವಾದ ಪದವಿ ಪೂರ್ವ ಹಂತವು ವಿದ್ಯಾರ್ಥಿಗಳ ಭವಿಷ್ಯದ ಭದ್ರಬುನಾದಿ ಇರುವ ಕಾರಣ ವಿದ್ಯಾರ್ಥಿಗಳು ಶ್ರದ್ಧೆ, ಆಸಕ್ತಿ ಸತತ ಪ್ರಯತ್ನಗಳ ಸಾಧನಗಳೊಂದಿಗೆ ಸಾಧನೆ ಮಾಡಿ ಎಂದು ಡಾ. ವೀರೇಶ ಹಂಚಿನಾಳ ಹೇಳಿದರು.

ನಗರದ ಸನ್ಮಾರ್ಗ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಸಂಸ್ಥೆಯ ನಿರ್ದೇಶಕ ಪ್ರೊ. ಪುನೀತ ದೇಶಪಾಂಡೆ ಮಾತನಾಡಿ, ವಿದ್ಯಾಲಯವು ನಡೆದು ಬಂದ ಹೆಜ್ಜೆ ಗುರುತುಗಳು ಹಾಗೂ ಸಾಧನೆಯ ಸೋಪಾನಗಳನ್ನು ಅನಾವರಣಗೊಳಿಸುವುದರ ಜೊತೆಗೆ ವಿದ್ಯಾರ್ಥಿಗಳು ಸಂಸ್ಕೃತಿ, ಸಂಸ್ಕಾರಗಳ ಜೊತೆಗೆ ಸನ್ಮಿತ್ರರನ್ನು ಬೆಳೆಸಿಕೊಂಡಾಗ ಶೈಕ್ಷಣಿಕ ಸಾಧನೆ ಸುಲಭ ಸಾಧ್ಯ ಎಂದರು. ಸ್ಟುಡೆಂಟ್ಸ್ ಎಜ್ಯುಕೇಶನ್ ಸೊಸೈಟಿಯ ಚೇರ್‌ಮನ್‌ ಪ್ರೊ. ರಾಜೇಶ ಕುಲಕರ್ಣಿ ಮಾತನಾಡಿ, ವಿದ್ಯಾರ್ಥಿಗಳ ಸರ್ವಾಂಗೀಣ ಅಭ್ಯುದಯವೇ ನಮ್ಮ ಸಂಸ್ಥೆಯ ಉದ್ದೇಶ ಎಂದರು.

ಪ್ರಾ. ಪ್ರೊ. ಪ್ರೇಮಾನಂದ ರೋಣದ ಮಾತನಾಡಿ, ನಿಮ್ಮ ಯಶಸ್ಸಿನ ಮಾರ್ಗದಲ್ಲಿ ಯಾರು ನಿಮಗೆ ಪೂರಕ ಪ್ರತಿಕ್ರಿಯೆ ನೀಡುತ್ತಾರೋ ಅವರೊಂದಿಗೆ ಸ್ನೇಹ ಬೆಳೆಸಿಕೊಂಡು, ಸ್ಪಷ್ಟ ಹಾಗೂ ಸಮರ್ಪಕ ನಿರ್ಧಾರಗಳನ್ನು ಕೈಗೊಳ್ಳುವುದರ ಜೊತೆಗೆ ಅವುಗಳ ವ್ಯವಸ್ಥಿತವಾದ ಅನುಷ್ಠಾನವಿರಲಿ ಎಂದರು. ಸಂಸ್ಥೆಯ ನಿರ್ದೇಶಕ ಪ್ರೊ. ರೋಹಿತ್ ಒಡೆಯರ್, ಪ್ರೊ. ರಾಹುಲ ಒಡೆಯರ್, ಪ್ರೊ. ಸಯ್ಯದ್ ಮತೀನ್ ಮುಲ್ಲಾ, ಆಡಳಿತಾಧಿಕಾರಿ ಎಂ.ಸಿ.ಹಿರೇಮಠ ಉಪಸ್ಥಿತರಿದ್ದರು. ಪ್ರೊ. ಹೇಮಂತ ದಳವಾಯಿ ನಿರೂಪಿಸಿದರು. ಮಾನ್ಯ ಅಡಿಗ ಹಾಗೂ ಸಂಗಡಿಗರಿಂದ ಪ್ರಾರ್ಥಿಸಿದರು.

ಮುರಲೀಧರ ಸಂಕನೂರ ಸ್ವಾಗತಿಸಿದರು. ಉಪನ್ಯಾಸಕಿ ಪ್ರೊ. ಹೀನಾಕೌಸರ ಮಾಳೆಕೊಪ್ಪ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ