ಸ್ವಾಮಿ ವಿವೇಕಾನಂದ ಆಂಗ್ಲ ಶಾಲೆಗೆ ಮಕ್ಕಳ ಸೇರಿಸಲು ಕೋರ್ಟ್‌ ಅನುಮತಿ

KannadaprabhaNewsNetwork |  
Published : May 27, 2025, 12:08 AM IST
(ಸಾಂದರ್ಭಿಕ ಚಿತ್ರ) | Kannada Prabha

ಸಾರಾಂಶ

ಪಟ್ಟಣದಲ್ಲಿ ಸ್ವಾಮಿ ವಿವೇಕಾನಂದ ಮೆಮೋರಿಯಲ್ ಆಂಗ್ಲ ಮಾಧ್ಯಮ ಶಾಲೆಯು 36 ವರ್ಷಗಳಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಹಾಗೂ ಗುಣಮಟ್ಟದ ಶಿಕ್ಷಣ ನೀಡುತ್ತಿದೆ. ಈ ಶಾಲೆ ಮಾನ್ಯತೆ ರದ್ದುಪಡಿಸಿದ್ದ ವಿಷಯಕ್ಕೆ ಸಂಬಂಧಿಸಿ, ಶಾಲೆ ಎಂದಿನಂತೆ ಮುನ್ನಡೆಸಲು ಕೋರ್ಟ್‌ ಆದೇಶ ನೀಡಿದೆ. ಆದ್ದರಿಂದ ಪೋಷಕರು ಆತಂಕವಿಲ್ಲದೆ, ಮಕ್ಕಳನ್ನು ಶಾಲೆಗೆ ಸೇರಿಸಬೇಕು ಎಂದು ಶಾಲೆ ಆಡಳಿತ ಮಂಡಳಿ ಅಧ್ಯಕ್ಷ ಆರ್. ರೇವಣಸಿದ್ದಪ್ಪ ತಿಳಿಸಿದ್ದಾರೆ.

- ಯಥಾಸ್ಥಿತಿಯಲ್ಲಿ ಶಾಲೆ ನಡೆಸಲು ಹೈಕೋರ್ಟ್‌ ಆದೇಶ: ಅಧ್ಯಕ್ಷ

- - -

ಹೊನ್ನಾಳಿ: ಪಟ್ಟಣದಲ್ಲಿ ಸ್ವಾಮಿ ವಿವೇಕಾನಂದ ಮೆಮೋರಿಯಲ್ ಆಂಗ್ಲ ಮಾಧ್ಯಮ ಶಾಲೆಯು 36 ವರ್ಷಗಳಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಹಾಗೂ ಗುಣಮಟ್ಟದ ಶಿಕ್ಷಣ ನೀಡುತ್ತಿದೆ. ಈ ಶಾಲೆ ಮಾನ್ಯತೆ ರದ್ದುಪಡಿಸಿದ್ದ ವಿಷಯಕ್ಕೆ ಸಂಬಂಧಿಸಿ, ಶಾಲೆ ಎಂದಿನಂತೆ ಮುನ್ನಡೆಸಲು ಕೋರ್ಟ್‌ ಆದೇಶ ನೀಡಿದೆ. ಆದ್ದರಿಂದ ಪೋಷಕರು ಆತಂಕವಿಲ್ಲದೆ, ಮಕ್ಕಳನ್ನು ಶಾಲೆಗೆ ಸೇರಿಸಬೇಕು ಎಂದು ಶಾಲೆ ಆಡಳಿತ ಮಂಡಳಿ ಅಧ್ಯಕ್ಷ ಆರ್. ರೇವಣಸಿದ್ದಪ್ಪ ತಿಳಿಸಿದ್ದಾರೆ.

ಶಾಲೆಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇದೆ ಎಂದು ಉಪನಿರ್ದೇಶಕರು, ಜಿಲ್ಲಾ ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಏಪ್ರಿಲ್ ತಿಂಗಳಲ್ಲಿ ಶಾಲಾ ಮಾನ್ಯತೆ ರದ್ದುಪಡಿಸಿ ಆದೇಶ ಹೊರಡಿಸಿತ್ತು. ಶಿಕ್ಷಣ ಇಲಾಖೆ ಆದೇಶದ ವಿರುದ್ಧ ಶಾಲಾ ಅಡಳಿತ ಮಂಡಳಿ ಉಚ್ಚನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು ಎಂದಿದ್ದಾರೆ.

ಇದೀಗ ನ್ಯಾಯಾಲಯ ಶಾಲೆಯ ಮಾನ್ಯತೆ ರದ್ದು ಆದೇಶಕ್ಕೆ ತಡೆ ನೀಡಿದೆ. ಅಲ್ಲದೇ, ಶಾಲೆಯನ್ನು ಈ ಹಿಂದಿನಂತೆ ಯಥಾಸ್ಥಿತಿಯಲ್ಲಿ ನಡೆಸಿಕೊಂಡು ಹೋಗುವಂತೆ ಅದೇಶ ಮಾಡಿದೆ. ಪೋಷಕರು ಯಾವುದೇ ಆತಂಕವಿಲ್ಲದೆ ಮಕ್ಕಳನ್ನು ಶಾಲೆಗೆ ಸೇರಿಸಬಹುದು ಎಂದು ತಿಳಿಸಿದ್ದಾರೆ.

ಸದರಿ ಶಾಲೆಯು 3 ದಶಕಗಳಿಂದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿದೆ. ಉತ್ತಮ ಫಲಿತಾಂಶ ಸಾಧನೆ ಮಾಡುತ್ತಿದೆ. ಈ ಕಾರಣಕ್ಕೆ ಪಟ್ಟಣದಲ್ಲಿ ಪೋಷಕರು, ವಿದ್ಯಾರ್ಥಿಗಳಿಂದ ಒಳ್ಳೆಯ ಹೆಸರನ್ನು ಪಡೆದಿದೆ. ಎಂದಿನಂತೆ ಈ ಶೈಕ್ಷಣಿಕ ವರ್ಷದಲ್ಲಿ ಶಾಲೆ ನಡೆಸಲು ಯಾವುದೇ ತೊಂದರೆ ಇಲ್ಲ ಎಂದು ಅಧ್ಯಕ್ಷ ಆರ್. ರೇವಣಸಿದ್ದಪ್ಪ ಸ್ಪಷ್ಟಪಡಿಸಿದ್ದಾರೆ.

- - -

(ಸಾಂದರ್ಭಿಕ ಚಿತ್ರ)

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!