ಬೈಕ್‌ ಟ್ಯಾಕ್ಸಿ ಚಾಲಕರ ಮೇಲಿನಹಲ್ಲೆ ತಡೆಗೆ ಹೈಕೋರ್ಟ್‌ ಸೂಚನೆ

KannadaprabhaNewsNetwork |  
Published : Apr 26, 2024, 12:46 AM ISTUpdated : Apr 26, 2024, 08:18 AM IST
bike taxi New 1

ಸಾರಾಂಶ

ಬೆಂಗಳೂರು ಸೇರಿ ರಾಜ್ಯಾದ್ಯಂತ ಬೈಕ್ ಟ್ಯಾಕ್ಸಿ ಚಾಲಕರ ಮೇಲೆ ನಡೆಯುತ್ತಿರುವ ಹಲ್ಲೆ ಹಾಗೂ ಅವರ ಕಾರ್ಯನಿರ್ವಹಣೆಗೆ ಅಡ್ಡಿ ಉಂಟು ಮಾಡುತ್ತಿರುವುದನ್ನು ತಡೆಯಲು ಅಗತ್ಯ ಕ್ರಮ ಜರುಗಿಸುವಂತೆ ಗೃಹ ಇಲಾಖೆಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

 ಬೆಂಗಳೂರು :  ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಬೈಕ್ ಟ್ಯಾಕ್ಸಿ ಚಾಲಕರ ಮೇಲೆ ನಡೆಯುತ್ತಿರುವ ಹಲ್ಲೆ ಹಾಗೂ ಅವರ ಕಾರ್ಯನಿರ್ವಹಣೆಗೆ ಅಡ್ಡಿ ಉಂಟು ಮಾಡುತ್ತಿರುವುದನ್ನು ತಡೆಯಲು ಅಗತ್ಯ ಕ್ರಮ ಜರುಗಿಸುವಂತೆ ಗೃಹ ಇಲಾಖೆಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

ಬೈಕ್‌ ಟ್ಯಾಕ್ಸಿ ಚಾಲಕರ ಸೇವೆ ಅಡ್ಡಿಯುಂಟು ಮಾಡುತ್ತಿರುವುದನ್ನು ತಡೆಯಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಬೆಂಗಳೂರಿನ ಮಡಿವಾಳದ ಎ.ಶ್ರೀಕಾಂತ್ ರೆಡ್ಡಿ ಹಾಗೂ ಬೈಕ್ ಟ್ಯಾಕ್ಸಿ ಕ್ಷೇಮಾಭಿವೃದ್ಧಿ ಸಂಘ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಅವರ ಪೀಠ ಈ ನಿರ್ದೇಶನ ನೀಡಿದೆ.

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಗೆ ಕಾನೂನುಬಾಹಿರವಾಗಿ ತಡೆಯೊಡ್ಡಲು ಯಾರಾದರೂ ಯತ್ನಿಸಿದರೆ, ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಸರ್ಕಾರ, ಗೃಹ ಇಲಾಖೆ ಮತ್ತು ಪೊಲೀಸ್‌ ಇಲಾಖೆಗೆ ನ್ಯಾಯಪೀಠ ಇದೇ ವೇಳೆ ನಿರ್ದೇಶಿಸಿ ಅರ್ಜಿ ಇತ್ಯರ್ಥಪಡಿಸಿದೆ.

ಅರ್ಜಿದಾರರ ಪರ ಹಿರಿಯ ವಕೀಲ ಕೆ.ಎನ್‌.ಫಣೀಂದ್ರ, ಬೈಕ್ ಟ್ಯಾಕ್ಸಿ ಚಾಲಕರ ಮೇಲೆ ನಿರಂತರವಾಗಿ ಹಲ್ಲೆಗಳು ನಡೆಯುತ್ತಿವೆ. ಅದನ್ನು ತಡೆಯಲು ಮತ್ತು ಹಲ್ಲೆಕೋರರ ಮೇಲೆ ಪೊಲೀಸರು ಯಾವುದೇ ಕಾನೂನು ಕ್ರಮ ಜರುಗಿಸುತ್ತಿಲ್ಲ, ಹಾಗಾಗಿ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಗೆ ಅಡ್ಡಿ ಮಾಡುವವರ ವಿರುದ್ಧ ಕ್ರಮ ಜರುಗಿಸಲು ಪೊಲೀಸರಿಗೆ ನಿರ್ದೇಶಿಸಬೇಕು ಎಂದು ಕೋರಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಿಮೋಫಿಲಿಯಾ ರೋಗಿಗಳಿಗೆ ಚಿಕಿತ್ಸೆ, ಆ್ಯಂಬುಲೆನ್ಸ್‌ ಸೇವೆ
ಒಂದೇ ವರ್ಷದಲ್ಲಿ ರನ್ಯಾಳಿಂದ 1.27 ಕ್ವಿಂಟಲ್‌ ಚಿನ್ನ ಸ್ಮಗ್ಲಿಂಗ್!