ಸಿಗಂದೂರು ದೇವಿಗೆ ಪೂಜೆ ಮಾಡಲು ಶೇಷಗಿರಿ ಭಟ್‌ಗೆ ಅಡ್ಡಿಪಡಿಸದಂತೆ ಕೋರ್ಟ್‌ ಆದೇಶ

KannadaprabhaNewsNetwork |  
Published : Oct 15, 2023, 12:45 AM IST

ಸಾರಾಂಶ

ಪ್ರಧಾನ ಅರ್ಚಕ ಎಸ್.ಪಿ.ಶೇಷಗಿರಿ ಭಟ್ ಅವರಿಗೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲು ಅವಕಾಶ ನೀಡುವಂತೆ ಆದೇಶ

ಸಾಗರ: ತಾಲೂಕಿನ ಶ್ರೀಕ್ಷೇತ್ರ ಸಿಗಂದೂರಿನ ಚೌಡೇಶ್ವರಿದೇವಿ ಪೂಜೆಗೆ ಸಂಬಂಧಪಟ್ಟಂತೆ ಸಾಗರ ನ್ಯಾಯಾಲಯ ಮಹತ್ವದ ತೀರ್ಪು ನೀಡಿದ್ದು, ದೇವಸ್ಥಾನದ ಪ್ರಧಾನ ಅರ್ಚಕ ಎಸ್.ಪಿ. ಶೇಷಗಿರಿ ಭಟ್ ಅವರಿಗೆ ಪೂಜೆ ಮಾಡಲು ಅಡ್ಡಿಪಡಿಸಬಾರದು ಎಂದು ತಿಳಿಸಿದೆ. ಈ ಹಿಂದೆ ಸಿಗಂದೂರು ಚೌಡೇಶ್ವರಿ ದೇವಿಯ ಪೂಜೆಗೆ ಸಂಬಂಧಪಟ್ಟಂತೆ ಧರ್ಮದರ್ಶಿ ಡಾ. ರಾಮಪ್ಪ ಮತ್ತು ಪ್ರಧಾನ ಅರ್ಚಕ ಎಸ್.ಪಿ. ಶೇಷಗಿರಿ ಭಟ್ ನಡುವೆ ವಿವಾದ ಉಂಟಾಗಿತ್ತು. ಪೂಜೆ ಯಾರು ಮಾಡಬೇಕು ಎನ್ನುವುದಕ್ಕೆ ಸಂಬಂಧಪಟ್ಟಂತೆ ದೇವಸ್ಥಾನದ ಆವರಣದಲ್ಲಿ ಪರಸ್ಪರ ಜಗಳ ನಡೆದು ಪೊಲೀಸರು ಮಧ್ಯಪ್ರವೇಶ ಮಾಡುವ ಸ್ಥಿತಿ ನಿರ್ಮಾಣವಾಗಿತ್ತು. ಈ ಹಿನ್ನೆಲೆ ದೇವಿಪೂಜೆ ಮಾಡಲು ತಮಗೆ ಅವಕಾಶ ಕಲ್ಪಿಸುವಂತೆ ಪ್ರಧಾನ ಅರ್ಚಕ ಶೇಷಗಿರಿ ಭಟ್ ಸಾಗರ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ನ್ಯಾಯಾಲಯವು ಪ್ರಧಾನ ಅರ್ಚಕರಿಗೆ ಪೂಜೆ ಸಲ್ಲಿಸಲು ಅವಕಾಶ ಕಲ್ಪಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಧರ್ಮದರ್ಶಿ ಡಾ.ರಾಮಪ್ಪ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ವಾದ- ಪ್ರತಿವಾದವನ್ನು ಆಲಿಸಿ ಹಿಂದಿನ ಆದೇಶದಂತೆ ಪ್ರಧಾನ ಅರ್ಚಕ ಎಸ್.ಪಿ.ಶೇಷಗಿರಿ ಭಟ್ ಅವರಿಗೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲು ಅವಕಾಶ ನೀಡುವಂತೆ ಆದೇಶ ಮಾಡಿದೆ.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ