Furniture and equipment from the Social Welfare Department office were seized on Tuesday following a court order, due to the non-payment of rent for a hostel building under the department's jurisdiction.
-ಸಿಂಧನೂರು ಸಮಾಜ ಕಲ್ಯಾಣ ಇಲಾಖೆಯ ಅಧೀನದ ಪಿಡಬ್ಲ್ಯೂಡಿ ಕ್ಯಾಂಪಿನ ಹಾಸ್ಟೆಲ್ ಕಟ್ಟಡ
---
ಕನ್ನಡಪ್ರಭ ವಾರ್ತೆ ಸಿಂಧನೂರು
ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಹಾಸ್ಟೆಲ್ ಕಟ್ಟಡದ ಬಾಡಿಗೆ ಹಣ ಪಾವತಿಯಾಗದ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದ ಮೇರೆಗೆ ಮಂಗಳವಾರ ಸಮಾಜ ಕಲ್ಯಾಣ ಇಲಾಖೆ ಕಚೇರಿಯ ಸಾಮಗ್ರಿಗಳನ್ನು ಜಪ್ತಿ ಮಾಡಲಾಯಿತು.
ಪಿಡಬ್ಲ್ಯೂಡಿ ಕ್ಯಾಂಪಿನಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಬಾಲಕರ ಹಾಸ್ಟೆಲ್ ಕಟ್ಟಡದ ಮಾಲೀಕ ಖಾಜಾಸಾಬ್ ಅವರಿಗೆ ಬಾಡಿಗೆ ಹಣ ಮತ್ತು ಬಡ್ಡಿ ಸೇರಿ ₹20 ಲಕ್ಷ ಬಾಕಿ ಉಳಿದಿದ್ದು, ಈಗಾಗಲೇ ಒಂದು ಸಾರಿ ಜಪ್ತಿ ಮಾಡಿದ್ದರಿಂದ ₹ 12 ಲಕ್ಷ ಪಾವತಿ ಮಾಡಿ ಉಳಿದ ₹8 ಲಕ್ಷ ನೀಡಲು ಎರಡು ತಿಂಗಳ ಕಾಲಾವಕಾಶ ಕೇಳಿದ್ದರು.
ಆದರೆ, ಇಲಾಖೆ ಕೇಳಿದ ಕಾಲಾವಕಾಶ ಮುಗಿದರೂ ಸಹ ಹಣ ಪಾವತಿ ಮಾಡಿಲ್ಲ. ಹೀಗಾಗಿ ಖಾಜಾಸಾಬ್ ಅವರು ಪುನಃ ನ್ಯಾಯಾಲಯದ ಮೊರೆ ಹೋಗಿದ್ದರು. ಪ್ರಕರಣದ ವಿಚಾರಣೆ ನಡೆಸಿ ನ್ಯಾಯಾಲಯ ಮತ್ತೊಮ್ಮೆ ಸಮಾಜ ಕಲ್ಯಾಣ ಇಲಾಖೆ ಕಚೇರಿಯ ಸಾಮಗ್ರಿಗಳನ್ನು ಜಪ್ತಿ ಮಾಡುವಂತೆ ನೋಟಿಸ್ ನೀಡಿದೆ.
ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಕಚೇರಿಯಲ್ಲಿದ್ದ ಕಂಪ್ಯೂಟರ್, ಸಿಪಿಯು, ಟೇಬಲ್, ಕುರ್ಚಿ, ಟಿಜೋರಿ, ಬ್ಯಾಟರಿ, ಹಲಮಾರಿ ಸೇರಿದಂತೆ ವಿವಿಧ ಸಾಮಗ್ರಿಗಳನ್ನು ಜಪ್ತಿ ಮಾಡಲಾಯಿತು.
------------------
ಫೋಟೋ:11ಕೆಪಿಎಸ್ಎನ್ಡಿ3:
ಸಿಂಧನೂರಿನ ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಪಿಡಬ್ಲ್ಯೂಡಿ ಕ್ಯಾಂಪಿನಲ್ಲಿರುವ ಹಾಸ್ಟೆಲ್ ಕಟ್ಟಡದ ಬಾಡಿಗೆ ಹಣ ಪಾವತಿಯಾಗದ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದ ಮೇರೆಗೆ ಮಂಗಳವಾರ ಸಮಾಜ ಕಲ್ಯಾಣ ಇಲಾಖೆ ಕಚೇರಿಯ ಸಾಮಗ್ರಿಗಳನ್ನು ಜಪ್ತಿ ಮಾಡಲಾಯಿತು
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.