ಕನ್ನಡಪ್ರಭ ವಾರ್ತೆ ಬೆಂಗಳೂರು
ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶ ರದ್ದು ಕೋರಿ ಎಕ್ಸಾಲಜಿಕ್ ಸಲ್ಯೂಷನ್ಸ್ ಕಂಪನಿಯ ನಿರ್ದೇಶಕಿ ವೀಣಾ ಪಿಣರಾಯಿ ವಿಜಯನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಶುಕ್ರವಾರ ಪ್ರಕಟಿಸಿದರು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಎರಡೂ ಕಂಪನಿಗಳ ನಡುವಿನ ಆರ್ಥಿಕ ವ್ಯವಹಾರದ ಮಾಹಿತಿ ನೀಡದಿರುವುದು ವಂಚನೆಯಾಗುವುದಿಲ್ಲ. ಯಾವುದೇ ಅಪರಾಧ ಎಸಗದಿದ್ದರೂ ಅರ್ಜಿದಾರರ ವಿರುದ್ಧ ಎಸ್‌ಎಫ್‌ಓ ತನಿಖೆಗೆ ಕೇಂದ್ರ ಸರ್ಕಾರ ಆದೇಶಿಸಿರುವುದು ಕಾನೂನು ಬಾಹಿರ ಕ್ರಮವಾಗಿದೆ ಎಂದು ವಾದಿಸಿದ್ದರು.ಅದನ್ನು ಆಕ್ಷೇಪಿಸಿದ್ದ ಕೇಂದ್ರ ಸರ್ಕಾರದ ಪರ ವಕೀಲರು, ಕೊಚ್ಚಿನ್ ಮಿನರಲ್ಸ್ ಕಂಪನಿ ಅರ್ಜಿದಾರರ ಆಪೇಕ್ಷೆಯಂತೆ 135 ಕೋಟಿ ರು. ರಾಜಕೀಯ ವ್ಯಕ್ತಿಗಳಿಗೆ ನೀಡಿದೆ. ಸಾಫ್ಟ್‌ವೇರ್ ಸೇವೆಗೆಂದು 1.72 ಕೋಟಿ ರು. ನೀಡಿದೆ. ಆದರೆ, ವಾಸ್ತವವಾಗಿ ಯಾವುದೇ ಸೇವೆ ನೀಡದಿದ್ದರೂ ಎಕ್ಸಾಲಜಿಕ್ ಸಲ್ಯೂಷನ್ಸ್ ಕಂಪನಿಗೆ ಕೊಚ್ಚಿನ್ ಮಿನರಲ್ಸ್ ಹಣ ಸಂದಾಯ ಮಾಡಿದೆ. ಮಾಹಿತಿ ಕೇಳಿದರೆ ಜಿಎಸ್ ಟಿ ಪಾವತಿಸಿರುವುದಾಗಿ ಕಂಪನಿ ಹೇಳುತ್ತಿದೆ. ಈ ಎರಡು ಕಂಪನಿಗಳ ನಡುವಿನ ಹಲವು ವ್ಯವಹಾರಗಳು ಅನುಮಾನಾಸ್ಪದವಾಗಿದೆ. ಹಾಗಾಗಿ ಎಸ್‌ಎಫ್‌ಐಓ ತನಿಖೆ ಆದೇಶಿಸಿರುವುದು ಸೂಕ್ತವಾಗಿದ್ದು, ಅರ್ಜಿ ವಜಾಗೊಳಿಸಬೇಕು ಎಂದುಕೋರಿದರು.